Home News ಶಾಂತಿಯುತವಾಗಿ ನಡೆದ ಗ್ರಾಮ ಪಂಚಾಯಿತಿ ಚುನಾವಣೆ ಮತದಾನ

ಶಾಂತಿಯುತವಾಗಿ ನಡೆದ ಗ್ರಾಮ ಪಂಚಾಯಿತಿ ಚುನಾವಣೆ ಮತದಾನ

0
Sidlaghatta Grama Panchayat Election 2020 Chikkaballapur District

ಶಿಡ್ಲಘಟ್ಟ ತಾಲ್ಲೂಕಿನ 24 ಗ್ರಾಮ ಪಂಚಾಯಿತಿಗಳಿಗೆ ಇಂದು ನಡೆದ ಮತದಾನ ಪ್ರಕ್ರಿಯೆ ಬಹುತೇಕ ಶಾಂತಯುತವಾಗಿ ನಡೆದಿದೆ.

ಗ್ರಾಮ ಪಂಚಾಯಿತಿ ಚುನಾವಣೆಯ ಹಿನ್ನಲೆಯಲ್ಲಿ ಗ್ರಾಮೀಣ ಬಾಗದ ಜನತೆ ನಗರಕ್ಕೆ ಬಾರದೇ ಇದ್ದುದರಿಂದ ನಗರದ ಮುಖ್ಯ ರಸ್ತೆಗಳು ಸೇರಿದಂತೆ ಅಂಗಡಿ, ಮುಂಗಟ್ಟುಗಳಲ್ಲಿ ವ್ಯಾಪಾರವಿಲ್ಲದೇ ಅಘೋಷಿತ ಬಂದ್ ವಾತಾವರಣ ನಿರ್ಮಾಣವಾಗಿತ್ತು.

ಬೆಳಿಗ್ಗೆ ಏಳು ಗಂಟೆಗೆ ಚುನಾವಣೆ ಪ್ರಕ್ರಿಯೆ ಪ್ರಾರಂಭವಾಗುತ್ತಿದ್ದಂತೆಯೇ ಕೆಲವೆಡೆ ಬೆಳಿಗ್ಗೆಯೇ ಉತ್ಸಾಹ ಭರಿತರಾಗಿ ಸರತಿಸಾಲುಗಳಲ್ಲಿ ನಿಂತು ಜನತೆ ಮತದಾನ ಮಾಡಿದರೆ, ಮತ್ತೆ ಕೆಲವೆಡೆ ಮತಗಟ್ಟೆಗಳಿಗೆ ಮಧ್ಯಾಹ್ನದ ವರೆಗೂ ಜನರು ಬರುವುದು ಕಡಿಮೆಯಾಗಿತ್ತು.

ಶಾಸಕ ವಿ.ಮುನಿಯಪ್ಪ ತಮ್ಮ ಸ್ವಗ್ರಾಮ ಹಂಡಿಗನಾಳ ಗ್ರಾಮದಲ್ಲಿ ಮತಚಲಾಯಿಸಿದರೆ, ಜೆಡಿಎಸ್ ಮುಖಂಡ ಬಿ.ಎನ್.ರವಿಕುಮಾರ್ ಸ್ವಗ್ರಾಮ ಮೇಲೂರಿನಲ್ಲಿ ಮತಚಲಾಯಿಸಿದರು. 

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version