Home News ಗ್ರಾಮ ಪಂಚಾಯಿತಿಗಳಲ್ಲಿ ತೆರಿಗೆ ವಸೂಲಿ ಮಾಡಲು ಆದ್ಯತೆ ನೀಡಿ – ತಾಲ್ಲೂಕು ಪಂಚಾಯಿತಿ ಇಒ

ಗ್ರಾಮ ಪಂಚಾಯಿತಿಗಳಲ್ಲಿ ತೆರಿಗೆ ವಸೂಲಿ ಮಾಡಲು ಆದ್ಯತೆ ನೀಡಿ – ತಾಲ್ಲೂಕು ಪಂಚಾಯಿತಿ ಇಒ

0

ತಾಲ್ಲೂಕಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ವಾಣಿಜ್ಯ ಮಳಿಗೆಗಳು ಹಾಗೂ ಹೋಟೆಲುಗಳಿಂದ ತೆರಿಗೆ ವಸೂಲಿ ಮಾಡಲು ಆದ್ಯತೆ ನೀಡಬೇಕೆಂದು ತಾಲ್ಲೂಕು ಪಂಚಾಯಿತಿ ಇಒ ಬಿ.ಶಿವಕುಮಾರ್ ಸೂಚಿಸಿದರು.

 ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕು ಪಂಚಾಯಿತಿಯ ಸಭಾಂಗಣದಲ್ಲಿ ನಡೆದ ಅಡ್ಹಾಕ್ ಸಮಿತಿಯ ಸಭೆಯಲ್ಲಿ ಅವರು  ಮಾತನಾಡಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಬರುವ ಅನುದಾನಗಳನ್ನು ಖರ್ಚು ಮಾಡುವಾಗ ಸರ್ಕಾರ ನೀಡಿರುವ ಮಾರ್ಗಸೂಚಿಗಳು ಮತ್ತು ಕೆಟಿಪಿಪಿ ಕಾಯ್ದೆ ಅಡಿಯಲ್ಲಿ ಖರ್ಚು ಮಾಡಿ ಕಡತಗಳನ್ನು ಮತ್ತು ದಾಖಲೆಗಳನ್ನು ನಿರ್ವಹಿಸಬೇಕೆಂದು ಸೂಚಿಸಿದರು.

 ಸಭೆಯಲ್ಲಿ ರಾಜ್ಯ ಲೆಕ್ಕಪತ್ರ ಇಲಾಖೆ ನೀಡಿದಂತಹ ಆಕ್ಷೇಪಣೆ ಮತ್ತು ವಸೂಲಾತಿ ಮೊತ್ತಗಳಿಗೆ ಕುರಿತಂತೆ ಅನುಪಾಲನಾ ವರದಿಗಳನ್ನು ಪರಿಶೀಲಿಸಿ, 14-15 ನೇ ಸಾಲಿನ ಅನುದಾನಕ್ಕೆ ಸಂಬಂಧಿಸಿದಂತೆ, 14ನೇ ಹಣಕಾಸು ಅನುದಾನ ಬಳಕೆ ಮಾಡಿರುವ ಸಂಬಂಧ ಪ್ರಗತಿ ವರದಿಗಳನ್ನು ಪಿಡಿಓಗಳು ಮಂಡಿಸಿದರು.

 ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕೋವಿಡ್ ನಿಯಂತ್ರಿಸಲು ಸ್ಥಾಪಿಸಿರುವ ಸಹಾಯವಾಣಿ ಕೇಂದ್ರಗಳ ಕುರಿತು ಜನರಲ್ಲಿ ವ್ಯಾಪಕವಾಗಿ ಅರಿವು ಮತ್ತು ಜಾಗೃತಿ ಮೂಡಿಸಿ ತಾಲ್ಲೂಕು ಮತ್ತು ಜಿಲ್ಲೆಯಲ್ಲಿ ಕೊರೊನಾ ಸೋಂಕು ನಿಯಂತ್ರಿಸಲು ಪಿಡಿಒಗಳು ಅಭಿಯಾನ ನಡೆಸಬೇಕು. ಸಹಾಯವಾಣಿ ಕೇಂದ್ರಕ್ಕೆ ಸ್ವೀಕರಿಸಿರುವ ಕರೆಗಳ ಕ್ಷಣ ಕ್ಷಣದ ಮಾಹಿತಿಯನ್ನು ಇಲಾಖಾ ಹಿರಿಯ ಅಽಕಾರಿಗಳ ಗಮನಕ್ಕೆ ತರಬೇಕೆಂದು ಸೂಚಿಸಿದರು.

 ಜಿಲ್ಲಾ ಸ್ಥಳೀಯ ಲೆಕ್ಕ ಪರಿಶೋಧನೆ ಇಲಾಖೆಯ ಚಿಕ್ಕಬಳ್ಳಾಪುರ ಜಿಲ್ಲಾ ಉಪನಿರ್ದೇಶಕ ಮೃಗೇಶ್, ಜಿಲ್ಲಾ ಪಂಚಾಯಿತಿ ಲೆಕ್ಕ ಪರಿಶೋಧನೆಯ ಶಾಖೆಯ ರೋಷನ್, ತಾಲ್ಲೂಕು ಪಂಚಾಯಿತಿ ಸಹಾಯಕ ಲೆಕ್ಕಾಧಿಕಾರಿ ಸದಾಶಿವಕುಮಾರ್ ಹಾಜರಿದ್ದರು.

error: Content is protected !!