ಮೃತಪಟ್ಟವರ ಖಾತೆಗೂ ಗೃಹಲಕ್ಷ್ಮಿ ಹಣ: ಅನರ್ಹರ ಪತ್ತೆಗೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

Officials and committee members seated around tables at the taluk guarantee schemes progress review meeting

Sidlaghatta : ಗೃಹಲಕ್ಷ್ಮಿ ಯೋಜನೆಯ ಹಣ ಅನರ್ಹರ ಪಾಲಾಗದಂತೆ ತಡೆಯಲು ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಯಲುವಳ್ಳಿ ರಮೇಶ್ ಸೂಚಿಸಿದ್ದಾರೆ.

ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಫಲಾನುಭವಿಗಳು ಮೃತಪಟ್ಟಿದ್ದರೂ ಅವರ ಬ್ಯಾಂಕ್ ಖಾತೆಗಳಿಗೆ ಗೃಹಲಕ್ಷ್ಮಿ ಹಣ ಜಮೆಯಾಗುತ್ತಿರುವ ಪ್ರಕರಣಗಳು ಕಂಡುಬಂದಿವೆ ಎಂದ ಅವರು, ಇಂತಹ ಪ್ರಕರಣಗಳನ್ನು ಗುರುತಿಸಿ ಅನರ್ಹ ಫಲಾನುಭವಿಗಳ ಪಟ್ಟಿಯನ್ನು ಪರಿಶೀಲಿಸುವ ಮೂಲಕ ಸರ್ಕಾರದ ಹಣ ಪೋಲಾಗದಂತೆ ನೋಡಿಕೊಳ್ಳುವುದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳ ಜವಾಬ್ದಾರಿ ಎಂದು ತಿಳಿಸಿದರು. ಜುಲೈನಲ್ಲಿ ನಡೆದ ಅನರ್ಹ ಫಲಾನುಭವಿಗಳ ಪತ್ತೆ ಕುರಿತ ಸಭೆ ಯಲ್ಲೂ ಇದೇ ವಿಷಯ ಚರ್ಚೆಯಾಗಿತ್ತು.

ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಪಾರದರ್ಶಕತೆ, ಜವಾಬ್ದಾರಿ ಮತ್ತು ವಿವಿಧ ಇಲಾಖೆಗಳ ನಡುವೆ ಸಮನ್ವಯ ಅತ್ಯಂತ ಮುಖ್ಯ. ಈ ಅಂಶಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಮಾಡಿ ಉತ್ತಮ ಫಲಿತಾಂಶ ಸಾಧಿಸಬೇಕು ಎಂದು ಹೇಳಿದರು. ಮೇ ತಿಂಗಳಲ್ಲಿ ನಡೆದ ತಾಲ್ಲೂಕು ಗ್ಯಾರಂಟಿ ಸಮಿತಿ ಸಭೆ ಯ ಮುಂದುವರಿದ ಪರಿಶೀಲನೆ ಇದು.

ಸಭೆಯಲ್ಲಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ. ಮುನಿಯಪ್ಪ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹೇಮಾವತಿ ಆರ್., ತಾಲ್ಲೂಕು ಯೋಜನಾಧಿಕಾರಿ ಅನಿಲ್ ಕುಮಾರ್, ಸಿಡಿಪಿಒ ವಿದ್ಯಾ ವಸ್ತ್ರದ್, ಗ್ಯಾರಂಟಿ ಯೋಜನೆಗಳ ಸಮಿತಿ ಸದಸ್ಯರು, ಬೆಸ್ಕಾಂ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಕೆ.ಎಸ್.ಆರ್.ಟಿ.ಸಿ, ಉದ್ಯೋಗ ವಿನಿಮಯ ಕಚೇರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ತಾಲ್ಲೂಕು ಪಂಚಾಯಿತಿ ಸಿಬ್ಬಂದಿ ಹಾಜರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

Report an error in this story

Nearby

ನಿಮ್ಮ ಊರಿನ ಸುದ್ದಿ ಇದೆಯೇ?
ಫೋಟೋ ಸಮೇತ WhatsApp ನಲ್ಲಿ ಕಳುಹಿಸಿ

Open WhatsApp

ಇದನ್ನೂ ಓದಿ

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.