ಕರ್ನಾಟಕ ಜಾನಪದ ಪರಿಷತ್‌ನ ತಾಲ್ಲೂಕು ಅಧ್ಯಕ್ಷ ಎ.ಎಂ.ತ್ಯಾಗರಾಜ್ ಅವರಿಗೆ “ಗುರುಕುಲ ಚಾಣಕ್ಯ ಪ್ರಶಸ್ತಿ” ತುಮಕೂರಿನ ಗುರುಕುಲ ಕಲಾ ಪ್ರತಿಷ್ಠಾನದ ವತಿಯಿಂದ ನೀಡಿ ಗೌರವಿಸಲಾಯಿತು.
ಕನ್ನಡ ನಾಡು, ನುಡಿ, ಭಾಷೆಯ ಬಗ್ಗೆ ಕಾಳಜಿ ಇಟ್ಟು, ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವವರು ಹಾಗೂ ನಾಡಿನಲ್ಲಿ ಎಲೆ ಮರೆಯ ಕಾಯಿಯಂತೆ ಇರುವ ಸಾಧಕರಿಗೆ ಗುರುಕುಲ ಕಲಾ ಪ್ರತಿಷ್ಠಾನದಿಂದ ವಿವಿಧ ಪ್ರಶಸ್ತಿ ಪ್ರಧಾನ ಮಾಡಿದ್ದು, ಜಿಲ್ಲೆ, ರಾಜ್ಯದ ಗಡಿಯನ್ನು ಮೀರಿ ನಿರಂತರವಾಗಿ ಕನ್ನಡ ಕಾರ್ಯಕ್ರಮಗಳನ್ನು ನಡೆಸುತ್ತಾ, ಭಾಷಾಭಿಮಾನವನ್ನು ಅರಳಿಸುತ್ತಿರುವ ಎ.ಎಂ.ತ್ಯಾಗರಾಜ್ ಅವರ ಸೇವೆಯನ್ನು ಗೌರವಿಸುವ ಸಲುವಾಗಿ ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಆಯ್ಕೆ ಮಾಡಿರುವುದಾಗಿ ಪ್ರತಿಷ್ಠಾನದ ಹುಲಿಯೂರು ದುರ್ಗ ಲಕ್ಷ್ಮಿನಾರಾಯಣ್ ತಿಳಿಸಿದರು.
ತುಮಕೂರಿನಲ್ಲಿ ಗುರುಕುಲ ಕಲಾ ಪ್ರತಿಷ್ಠಾನದ ರಾಜ್ಯ ಘಟಕ ಸಿದ್ಧಗಂಗಾ ಮಠದಲ್ಲಿ ಆಯೋಜಿಸಿದ್ದ ಗುರುಕುಲ ಕಲಾ ಸಾಹಿತ್ಯ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಈ ಕಾರ್ಯಕ್ರಮದಲ್ಲಿ ಸಿದ್ಧಗಂಗಾ ಮಠದ ಸಿದ್ಧಲಿಂಗ ಮಹಾಸ್ವಾಮಿಗಳು, ಸಾಹಿತಿ ಡಾ. ದೊಡ್ಡರಂಗೇ ಗೌಡ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ, ಜಾನಪದ ಗಾಯಕ ಗುರುರಾಜ್ ಹೊಸಕೋಟೆ, ಕವಿತಾ ಕೃಷ್ಣ, ನೀಡಸಾಲೆ ಪುಟ್ಟಸ್ವಾಮಯ್ಯ, ಶಿವರಾಜ್ ಗೌಡ, ಸಿದ್ದು ಮೂರ್ತಿ ಹಾಜರಿದ್ದರು.
Like, Follow, Share ನಮ್ಮ ಶಿಡ್ಲಘಟ್ಟ
Facebook: https://www.facebook.com/sidlaghatta
Instagram: https://www.instagram.com/sidlaghatta
Telegram: https://t.me/Sidlaghatta
Twitter: https://twitter.com/hisidlaghatta
ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:
WhatsApp: https://wa.me/917406303366?text=Hi