Home News JDS ರಾಷ್ಟ್ರಾಧ್ಯಕ್ಷ H D Devegowda ಅವರ 90ನೇ ಹುಟ್ಟು ಹಬ್ಬ ಆಚರಣೆ

JDS ರಾಷ್ಟ್ರಾಧ್ಯಕ್ಷ H D Devegowda ಅವರ 90ನೇ ಹುಟ್ಟು ಹಬ್ಬ ಆಚರಣೆ

0

Sidlaghatta : JDS ರಾಷ್ಟ್ರಾಧ್ಯಕ್ಷ ಎಚ್.ಡಿ.ದೇವೇಗೌಡ (H D Devegowda) ಅವರ ತೊಂಬತ್ತನೇ ಹುಟ್ಟು ಹಬ್ಬವನ್ನು ಜೆಡಿಎಸ್ ಕಾರ್ಯಕರ್ತರೊಂದಿಗೆ ಆಶಾಕಿರಣ ಅಂಧಮಕ್ಕಳ ಶಾಲೆಯ ಮಕ್ಕಳಿಂದ ಕೇಕ್ ಕತ್ತರಿಸುವ ಮೂಲಕ ಆಚರಿಸಿ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಬಂಕ್ ಮುನಿಯಪ್ಪ ಅವರು ಮಾತನಾಡಿದರು.

JDS ರಾಷ್ಟ್ರಾಧ್ಯಕ್ಷ ಎಚ್.ಡಿ.ದೇವೇಗೌಡ (H D Devegowda) ಅವರದ್ದು ಅಪರೂಪದ ವ್ಯಕ್ತಿತ್ವ. ಬಡವರ ಏಳಿಗೆಯೇ ಅವರ ಗುರಿ. ಜನಪರ ಚಿಂತನೆ ಹಾಗೂ ರೈತರ ಬಗ್ಗೆ ಕಾಳಜಿಯೊಂದಿಗೆ ಸದಾ ತುಡಿಯುವ ಅವರ ಮಾನವೀಯ ಗುಣ ನಮಗೆಲ್ಲಾ ಪ್ರೇರಣೆ ಎಂದು ಅವರು ತಿಳಿಸಿದರು.

ದೇಶದ ಹನ್ನೊಂದನೇ ಪ್ರಧಾನಿಯಾಗಿ ಎಚ್.ಡಿ.ದೇವೇಗೌಡ ಅವರು ತಮ್ಮ ಅಧಿಕಾರ ಅವಧಿಯಲ್ಲಿ ಮಾಡಿದ ಅಭಿವೃದ್ಧಿ ನಾವು ನೆನಪಿಡಬೇಕಾಗುತ್ತದೆ. ಮಹಿಳಾ ಮೀಸಲಾತಿ. ಕಾಶ್ಮೀರ ಸಮಸ್ಯೆ. ರೈತರಿಗೆ ರಸಗೋಬ್ಬರ ಸಬ್ಸಿಡಿ, ಹುಬ್ಬಳ್ಳಿ ಈದ್ಗ ಸಮಸ್ಯೆ. ಕಾವೇರಿ ನೀರಿನ ಸಮಸ್ಯೆ. ಮಹಾದಾಯಿ ಸಮಸ್ಯೆಯ ಹೋರಾಟ ಅವರ ರೈತರ ಮೇಲೆ ಇರುವ ಕಾಳಜಿ ಇಂದಿನ ರಾಜಕಾರಣಿಗಳಿಗೆ ಹಾಗೂ ಯುವಕರಿಗೆ ಮಾರ್ಗದರ್ಶನವಾಗಿದೆ. ಈ ನಿಟ್ಟಿನಲ್ಲಿ ಈ ದಿನ ಅಂಧ ಮಕ್ಕಳೊಂದಿಗೆ ಅವರ ಜನ್ಮದಿನಾಚರಣೆ ನಡೆಸುತ್ತಿರುವುದಾಗಿ ಅವರು ತಿಳಿಸಿದರು.

ನಗರಸಭೆ ಅಧ್ಯಕ್ಷೆ ಸುಮಿತ್ರಾ ರಮೇಶ್ ಮಾತನಾಡಿ, ಲೋಕಸಭೆಯಲ್ಲಿ ತಮ್ಮ ಉತ್ತಮ ನಡವಳಿಕೆಯಿಂದ ಸದನದ ಘನತೆ ಹಾಗೂ ಗೌರವಗಳನ್ನು ಎತ್ತಿಹಿಡಿದಿರುವ ಗೌರವಕ್ಕೆ ದೇವೇಗೌಡರು ಪಾತ್ರರಾಗಿದ್ದಾರೆ. ದೇವರು ಅವರಿಗೆ ಆರೋಗ್ಯ ನೀಡಿ ಜನಸೇವೆ ಮಾಡಲು ಶಕ್ತಿಯನ್ನು ಕೊಡಲೆಂದು ಪ್ರಾರ್ಥಿಸುತ್ತೇವೆ ಎಂದರು.

ಜೆಡಿಎಸ್ ಕಾರ್ಯಕರ್ತರೊಂದಿಗೆ ಸಾರ್ವಜನಿಕರ ಆಸ್ಪತ್ರೆಗೆ ತೆರಳಿ ರೋಗಿಗಳಿಗೆ ಮತ್ತು ಬಾಣಂತಿಯರಿಗೆ ಹಣ್ಣು, ಹಾಲು ಮತ್ತು ಬ್ರೆಡ್ ವಿತರಿಸಿದರು. ಆಶಾಕಿರಣ ಅಂಧ ಮಕ್ಕಳ ಶಾಲೆಯ ಮಕ್ಕಳಿಗೆ ಊಟದ ವ್ಯವಸ್ಥೆಯನ್ನು ಮಾಡಿದ್ದರು.

ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ನಾರಾಯಣಸ್ವಾಮಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ರಮೇಶ್, ನಗರಸಭಾ ಸದಸ್ಯರಾದ ಸುಗುಣಾ ಲಕ್ಷ್ಮಿನಾರಾಯಣ್, ಪದ್ಮಿನಿ ಕಿಶನ್, ರೂಪ, ವಸಂತ, ವೆಂಕಟಸ್ವಾಮಿ, ಮುಖಂಡರಾದ ಲಕ್ಷ್ಮೀನಾರಾಯಣ, ಎಸ್.ಎಂ.ರಮೇಶ್, ಪಿ.ಕೆ.ಕಿಶನ್ ಹಾಜರಿದ್ದರು.

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.

error: Content is protected !!
Exit mobile version