Home News 2 ಕೋಟಿ 10 ಲಕ್ಷ ರೂಗಳ ರಸ್ತೆ ಕಾಮಗಾರಿಗೆ ಚಾಲನೆ

2 ಕೋಟಿ 10 ಲಕ್ಷ ರೂಗಳ ರಸ್ತೆ ಕಾಮಗಾರಿಗೆ ಚಾಲನೆ

0
Sidlaghatta Taluk Hanumantapaura Tatahalli Road Construction V Muniyappa

Sidlaghatta : ಶಿಡ್ಲಘಟ್ಟ ತಾಲ್ಲೂಕಿನ ವರದನಾಯಕನಹಳ್ಳಿ ಗೇಟ್ ಬಳಿ ಹನುಮಂತಪುರದಿಂದ ತಾತಹಳ್ಳಿ ರಸ್ತೆ ವರಿಗೆ ಸುಮಾರು 1.10 ಕಿಲೋ ಮೀಟರ್ ವರೆಗೆ, 7ಮೀಟರ್ ಅಗಲದ 2 ಕೋಟಿ 10 ಲಕ್ಷ ರೂಗಳ ವೆಚ್ಚದಲ್ಲಿ ರಸ್ತೆ ಅಭಿವೃದ್ದಿ ಕಾಮಗಾರಿಗೆ ಶಾಸಕ ವಿ.ಮುನಿಯಪ್ಪ ಅವರು ಚಾಲನೆ ನೀಡಿ ಮಾತನಾಡಿದರು.

ಶಿಡ್ಲಘಟ್ಟ-ದಿಬ್ಬೂರಹಳ್ಳಿ ರಸ್ತೆ ಕಾಮಗಾರಿಯನ್ನು ಹಂತಹಂತವಾಗಿ ಕೈಗೊಳ್ಳಲಾಗುವುದು. ಈಗಾಗಲೆ ಸರ್ಕಾರಕ್ಕೆ ಪ್ರಸ್ತಾವನೆ ಕಳಿಸಲಾಗಿದ್ದು ತಾಲ್ಲೂಕಿನ ಎಲ್ಲಾ ರಸ್ತೆಗಳ ಕಾಮಗಾರಿಗಳನ್ನು ಮೂರು ತಿಂಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ಅವರು ಹೇಳಿದರು.

ರಸ್ತೆಗಳು ಹಾಳಾಗಿ ಜನರಿಗೆ ತೊಂದರೆಯಾಗಿದೆ. ಅವುಗಳನ್ನು ಆದ್ಯತೆ ಮೇರೆಗೆ ಅಭಿವೃದ್ಧಿ ಮಾಡಲಾಗುತ್ತಿದೆ ಎಂದರು.

ನಗರಸಭೆ ಸದಸ್ಯರಾದ ಬಸ್ ಮಂಜುನಾಥ್, ಎಲ್.ಅನಿಲ್ ಕುಮಾರ್, ಕೃಷ್ಣಮೂರ್ತಿ, ಮನೋಹರ್, ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಲೋಕೇಶ್, ನಾರಾಯಣಸ್ವಾಮಿ, ವೆಂಕಟೇಶ್, ಬಸವರಾಜ್, ರಾಜಕುಮಾರ್, ಗುತ್ತಿಗೆದಾರ ನಟರಾಜ್, ಜೆಇ ದಿನೇಶ್, ನಿರಂಜನ್, ವೆಂಕಟೇಶ್, ಶ್ರೀನಾಥ್ ಹಾಜರಿದ್ದರು.

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version