ತಾಲ್ಲೂಕಿನ ತಿಮ್ಮನಾಯಕನಹಳ್ಳಿ ಗ್ರಾಮ ಪಂಚಾಯಿತಿಯ ತೋಕಲಹಳ್ಳಿ ಗ್ರಾಮದಲ್ಲಿ ಕಳೆದ ಗುರುವಾರ ಬಿದ್ದ ಮಳೆಯಿಂದಾಗಿ ರಾಮಕ್ಕ ಮತ್ತು ಮಂಜುನಾಥ್ ಅವರ ಮನೆಯ ಮೇಲ್ಚಾವಣಿ ಕುಸಿದ ಕಾರಣ ಮನೆಯಲ್ಲಿದ್ದ ಬೆಲೆಬಾಳುವ ವಸ್ತುಗಳೆಲ್ಲಾ ಚಿಂದಿಯಾಗಿದ್ದವು, ಕುಟುಂಬದ ಮೂರು ಮಂದಿಗೆ ಗಂಬೀರ ಗಾಯಗಳಾಗಿದ್ದು ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿತ್ತು.
ಬುಧವಾರ ಎಸ್.ಎನ್.ಕ್ರಿಯಾ ಟ್ರಸ್ಟ್ ಅಧ್ಯಕ್ಷ ಆಂಜಿನಪ್ಪ (ಪುಟ್ಟು) ಅವರು ಈ ಕುಟುಂಬಕ್ಕೆ ಹತ್ತು ಸಾವಿರ ರೂಗಳ ಸಹಾಯಧನವನ್ನು ನೀಡಿದರು.
ಈ ಸಂದರ್ಭದಲ್ಲಿ ಆನೂರು ದೇವರಾಜು, ದಡಂಘಟ್ಟ ಕೃಷ್ಣಪ್ಪ, ಶ್ರೀನಿವಾಸ್ ಹಾಜರಿದ್ದರು.
Follow ನಮ್ಮ ಶಿಡ್ಲಘಟ್ಟ on
Facebook: https://www.facebook.com/sidlaghatta
Twitter: https://twitter.com/hisidlaghatta
Instagram: https://www.instagram.com/sidlaghatta
Telegram: https://t.me/Sidlaghatta
WhatsApp: https://wa.me/917406303366?text=Hi