Sidlaghatta : ಶಿಡ್ಲಘಟ್ಟ ನಗರ ವ್ಯಾಪ್ತಿಯಲ್ಲಿ ಹಾಗೂ ಗ್ರಾಮೀಣ ಭಾಗದಲ್ಲಿನ ಎಲ್ಲ ಅಂಗಡಿ ಹೋಟೆಲ್ ವಾಣಿಜ್ಯ ಸಂಸ್ಥೆಗಳು ಕಡ್ಡಾಯವಾಗಿ ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯಿದೆಯಡಿ ನೋಂದಾಯಿಸಿಕೊಳ್ಳಬೇಕೆಂದು ಶಿಡ್ಲಘಟ್ಟದ ಕಾರ್ಮಿಕ ನಿರೀಕ್ಷಕಿ ವಿಜಯಲಕ್ಷ್ಮಿ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಈಗಾಗಲೆ ನೋಂದಾಯಿಸಿರುವ ಅಂಗಡಿ, ವಾಣಿಜ್ಯ ಸಂಸ್ಥೆಗಳನ್ನು ಹೊರತುಪಡಿಸಿ ಮಿಕ್ಕವರೆಲ್ಲರೂ ಕಡ್ಡಾಯವಾಗಿ 15 ದಿನಗಳೊಳಗೆ ನೋಂದಾಯಿಸಿಕೊಳ್ಳಬೇಕು.
ಕಾರ್ಮಿಕ ಇಲಾಖೆಯ ಕಚೇರಿಯಲ್ಲಿ ಅಥವಾ ಇ-ಕಾರ್ಮಿಕ ತಂತ್ರಾಂಶದಲ್ಲಿ ನೋಂದಾಯಿಸಿಕೊಳ್ಳಬಹುದೆಂದು ಅವರು ತಿಳಿಸಿದ್ದಾರೆ.