ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು, ಅಂತರರಾಜ್ಯ ಕಳ್ಳ ಬಂಧನ

- Advertisement -
- Advertisement -

Sidlaghatta : ಮನೆ ಕಳ್ಳತನ ಪ್ರಕರಣವನ್ನು ಕೇವಲ ಒಂದು ವಾರದೊಳಗೆ ಭೇದಿಸಿರುವ ಶಿಡ್ಲಘಟ್ಟ ನಗರ ಪೊಲೀಸರು ಅಂತರರಾಜ್ಯ ಕುಖ್ಯಾತ ಕಳ್ಳನನ್ನು ಬಂಧಿಸಿ, ₹2.80 ಲಕ್ಷ ಮೌಲ್ಯದ ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಜುಲೈ 22ರಂದು ಶಿಡ್ಲಘಟ್ಟ ನಗರದ ಚಿಂತಾಮಣಿ ಬೈಪಾಸ್ ರಸ್ತೆಯ ನಿವಾಸಿ ಹಾಗೂ ಹೋಟೆಲ್ ಉದ್ಯಮಿ ಶ್ರೀನಾಥ್ ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿತ್ತು. ಮನೆಯ ಬೀರುವಿನಲ್ಲಿದ್ದ 50 ಗ್ರಾಂ ಚಿನ್ನದ ಆಭರಣ, 900 ಗ್ರಾಂ ಬೆಳ್ಳಿ ಆಭರಣ ಹಾಗೂ ನಗದು ಹಣ ಕಳವಾಗಿದ್ದು, ಒಟ್ಟು ಸುಮಾರು ₹2.01 ಲಕ್ಷ ಮೌಲ್ಯದ ಆಸ್ತಿ ಕಳುವಾಗಿತ್ತು ಎಂದು ದೂರಿನಲ್ಲಿ ತಿಳಿಸಲಾಗಿತ್ತು.

ಆರೋಪಿ ಪತ್ತೆ ಹೇಗಾಯಿತು?

ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ವಿಶೇಷ ತಂಡವನ್ನು ರಚಿಸಿ, ಖಚಿತ ಮಾಹಿತಿಯ ಆಧಾರದ ಮೇಲೆ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ಆಂಧ್ರಪ್ರದೇಶದ ಸತ್ಯಸಾಯಿ ಜಿಲ್ಲೆಯ ಧರ್ಮಾವರಂ ನಿವಾಸಿ ಜಿ. ರಾಮಕೃಷ್ಣ (60) ಎಂದು ಗುರುತಿಸಲಾಗಿದೆ. ಈತ ಕರ್ನಾಟಕದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ದಾಖಲಾಗಿರುವ 11 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವುದು ತನಿಖೆಯಿಂದ ತಿಳಿದುಬಂದಿದೆ.

ಆರೋಪಿಯಿಂದ 24 ಗ್ರಾಂ ಚಿನ್ನದ ವಿವಿಧ ಮಾದರಿಯ ಆಭರಣಗಳು ಹಾಗೂ 400 ಗ್ರಾಂ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಇವುಗಳ ಒಟ್ಟು ಮೌಲ್ಯ ₹2.80 ಲಕ್ಷ ಎಂದು ಪೊಲೀಸರು ತಿಳಿಸಿದ್ದಾರೆ. ಶಿಡ್ಲಘಟ್ಟ ವೃತ್ತದ ಸಿಪಿಐ ಆನಂದಕುಮಾರ್ ಜೆ.ಎನ್. ನೇತೃತ್ವದ ಪೊಲೀಸ್ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

In English: Sidlaghatta city police solved a house theft case within a week of it being reported, arresting an interstate repeat offender and recovering ₹2.80 lakh worth of gold and silver ornaments. The theft, reported on July 22 by a Chintamani Bypass Road hotel businessman, involved ₹2.01 lakh worth of gold, silver and cash. The accused, G. Ramakrishna (60) of Dharmavaram, Sri Sathya Sai district, Andhra Pradesh, is linked to 11 prior theft cases across Karnataka. A police team led by CPI Anandkumar J.N. carried out the operation.

Sidlaghatta WhatsApp Channel Group

For Daily Updates WhatsApp ‘HI’ to 7406303366

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -
Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!