Home News ಸ್ವಾತಂತ್ರ್ಯ ಹೋರಾಟಗಾರ ಮಳ್ಳೂರು ನಾಗಪ್ಪ ಅವರಿಂದ ಸ್ವಾತಂತ್ರ್ಯ ಹೋರಾಟದ ಮೆಲುಕು

ಸ್ವಾತಂತ್ರ್ಯ ಹೋರಾಟಗಾರ ಮಳ್ಳೂರು ನಾಗಪ್ಪ ಅವರಿಂದ ಸ್ವಾತಂತ್ರ್ಯ ಹೋರಾಟದ ಮೆಲುಕು

0

Mallur, Sidlaghatta : ಶಿಡ್ಲಘಟ್ಟ ತಾಲ್ಲೂಕು ಕಸಾಪ (Kannada Sahitya Parishat) ವತಿಯಿಂದ ಭಾರತದ ಸ್ವಾತಂತ್ರ್ಯದ 75 ನೇ ವರ್ಷದ ಅಮೃತಮಹೋತ್ಸವದ ಅಂಗವಾಗಿ ಸ್ವಾತಂತ್ರ್ಯ ಹೋರಾಟಗಾರ (Freedom Fighter) ಮಳ್ಳೂರು ನಾಗಪ್ಪ (Mallur Nagappa) ಅವರನ್ನು ಅವರ ಸ್ವಗೃಹದಲ್ಲಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಸ್ವಾತಂತ್ರ್ಯಕ್ಕಾಗಿ ಅನೇಕ ಮಹನೀಯರು ಹೋರಾಟ ಮಾಡಿದ್ದಾರೆ, ಬಲಿದಾನಗೈದಿದ್ದಾರೆ. ನನ್ನ ಜೊತೆಗೆ ನೂರಾರು ದೇಶಪ್ರೇಮಿಗಳು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದರು. ಪೊಲೀಸರ ಲಾಠಿ ಚಾರ್ಜ್ ಗೆ ನೂರಾರು ಹೋರಾಟಗಾರು ಗಾಯಗೊಂಡರು. ಗೋಲಿಬಾರಿನಲ್ಲಿ ಕೆಲವರು ಹುತಾತ್ಮರಾದರು, ಅನೇಕ ದೇಶಪ್ರೇಮಿ ಹೋರಾಟಗಾರರನ್ನು ಜೈಲಿಗೆ ಹಾಕಿದರು ಆದರೂ ಹೋರಾಟದ ಕಿಚ್ಚು ಕಡಿಮೆಯಾಗಲಿಲ್ಲ ಎಂದು ಸ್ವಾತಂತ್ರ್ಯ ಹೋರಾಟದ ಘಟನೆಗಳನ್ನು ಮೆಲುಕು ಹಾಕಿದರು.

ನಂದಿ ಬೆಟ್ಟಕ್ಕೆ ಭೇಟಿ ನೀಡಿದ್ದ ಗಾಂಧೀಜಿ ಅವರನ್ನು‌ ಭೇಟಿ ಮಾಡಿದ್ದೆ. ಆ ಕಾಲದ ಪರಿಸ್ಥಿತಿಗೂ ಪ್ರಸ್ತುತ ಪರಿಸ್ಥಿತಿಗೂ ಅಜಗಜಾಂತರ ವ್ಯತ್ಯಾಸವಿದೆ. ಇಂದಿನ ಯುವಕರು ದೇಶಪ್ರೇಮ, ಶಿಸ್ತು ಮತ್ತು ತ್ಯಾಗ ಮನೋಭಾವವನ್ನು ರೂಢಿಸಿಕೊಳ್ಳಬೇಕು ಎಂದರು.

ಶಿಡ್ಲಘಟ್ಟ ತಾಲ್ಲೂಕು ಕಸಾಪ ಅಧ್ಯಕ್ಷ ಬಿ.ಆರ್.ಅನಂತಕೃಷ್ಣ ಮಾತನಾಡಿ, ಕಸಾಪ ವತಿಯಿಂದ ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಶಾಲಾ ಕಾಲೇಜುಗಳಲ್ಲಿ ಹಲವಾರು ಕಾರ್ಯಕ್ರಮಗಳನ್ನು ಕಳೆದ ಎರಡು ತಿಂಗಳಿಂದ ಮಾಡುತ್ತಿದ್ದೇವೆ. ಪ್ರತಿಯೊಬ್ಬ ಹೋರಾಟಗಾರರ ದೇಶಪ್ರೇಮ, ತ್ಯಾಗ ಮತ್ತು ಬಲಿದಾನದ ಮೂಲಕ ಪಡೆದ ಸ್ವಾತಂತ್ರ್ಯ ಹೋರಾಟದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸುತ್ತಿದ್ದೇವೆ.

ನಮ್ಮ ತಾಲ್ಲೂಕಿನ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ನಾಗಪ್ಪ ರವರನ್ನು ಕಸಾಪ ವತಿಯಿಂದ ಹಣ್ಣಿನ‌ಬುಟ್ಟಿ, ಭಾರತಾಂಬೆ ಪೋಟೋ, ಸ್ವಾತಂತ್ರ್ಯ ಹೋರಾಟದ ಪುಸ್ತಕ ನೀಡಿ ಗೌರವಿಸಿದ್ದೇವೆ. ಇದು ನಮ್ಮ ಜೀವನದ ಮರೆಯಲಾಗದ ಕ್ಷಣ ಎಂದರು.

ಕಸಾಪ ನಿಕಟ ಪೂರ್ವ ಅಧ್ಯಕ್ಷ.ಎ.ಎಂ.ತ್ಯಾಗರಾಜ್, ರಾಮರೆಡ್ಡಿ, ಮಾಜಿ ಪುರಸಭಾ ಸದಸ್ಯ ಲಕ್ಷ್ಮೀ ನಾರಾಯಣ, ಖಜಾಂಚಿ ಸುಧೀರ್, ಮಹಿಳಾ ಪ್ರತಿನಿಧಿ ದಾಕ್ಪಾಯಿಣಿ, ಕಸಾಪ ಪದಾಧಿಕಾರಿಗಳಾದ ಭಕ್ತರಹಳ್ಳಿ ನಾಗೇಶ್, ಟಿ.ಟಿ.ನರಸಿಂಹಪ್ಪ, ಸದಸ್ಯರಾದ ಮಂಜುನಾಥ್ ಮತ್ತು ಗ್ರಾಮಸ್ಥರು ಹಾಜರಿದ್ದರು.

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version