Home News ಜೆ.ವೆಂಕಟಾಪುರ ಗ್ರಾಮಪಂಚಾಯಿತಿಗೆ ಅಧ್ಯಕ್ಷರಾಗಿ ನಾಗೇಶ್, ಉಪಾಧ್ಯಕ್ಷರಾಗಿ ಇಂದಿರಾ ಆಯ್ಕೆ

ಜೆ.ವೆಂಕಟಾಪುರ ಗ್ರಾಮಪಂಚಾಯಿತಿಗೆ ಅಧ್ಯಕ್ಷರಾಗಿ ನಾಗೇಶ್, ಉಪಾಧ್ಯಕ್ಷರಾಗಿ ಇಂದಿರಾ ಆಯ್ಕೆ

0
Sidlahgatta J Venkatapura Grama Panchayat Election

J Venkatapura, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಜೆ.ವೆಂಕಟಾಪುರ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಎಂ.ನಾಗೇಶ್, ಉಪಾಧ್ಯಕ್ಷರಾಗಿ ಇಂದಿರಾ ಶಿವಶಂಕರ್ ಅವಿರೋಧ ಆಯ್ಕೆಯಾಗಿದ್ದಾರೆ. ಈ ಮೂಲಕ ಜೆ.ವೆಂಕಟಾಪುರ ಗ್ರಾ.ಪಂ.ಆಡಳಿತವು ಕಾಂಗ್ರೆಸ್‌ನ ಹಿಡಿತದಲ್ಲೆ ಮುಂದುವರೆದಿದೆ.

ಜಂಗಮಕೋಟೆ ಹೋಬಳಿಯ ಜೆ.ವೆಂಕಟಾಪುರ ಗ್ರಾಮಪಂಚಾಯಿತಿಯ ಎರಡನೇ ಅವಧಿಗೆ ಅಧ್ಯಕ್ಷಸ್ಥಾನ ಸಾಮಾನ್ಯ ವರ್ಗಕ್ಕೆ ಮತ್ತು ಉಪಾಧ್ಯಕ್ಷ ಸ್ಥಾನವು ಪರಿಶಿಷ್ಟ ಪಂಗಡ(ಮಹಿಳೆ) ವರ್ಗಕ್ಕೆ ಮೀಸಲಾಗಿತ್ತು.

ಅಧ್ಯಕ್ಷಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಎಂ.ನಾಗೇಶ್ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಇಂದಿರಾ ಶಿವಶಂಕರ್ ಮಾತ್ರವೇ ನಾಮಪತ್ರ ಸಲ್ಲಿಸಿದ್ದು ಈ ಇಬ್ಬರ ಅವಿರೋಧ ಆಯ್ಕೆಯನ್ನು ಚುನಾವಣಾಧಿಕಾರಿ ತಹಶೀಲ್ದಾರ್ ಬಿ.ಎನ್.ಸ್ವಾಮಿ ಘೋಷಿಸಿದರು.

ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಎಲ್ಲ ಸದಸ್ಯರು, ಕಾಂಗ್ರೆಸ್ ಮುಖಂಡರು, ಪಂಚಾಯಿತಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಅಭಿನಂದಿಸಿದರು.

ಈ ವೇಳೆ ಮಾತನಾಡಿದ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡ, ಗ್ರಾಮಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ನಮ್ಮ ಕಾಂಗ್ರೆಸ್ ಪಕ್ಷ ಬೆಂಬಲಿತರೆ ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆ ಆಗುವ ಮೂಲಕ ಕ್ಷೇತ್ರದಲ್ಲಿ ಹೆಚ್ಚಿನ ಪಂಚಾಯಿತಿಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಆಶಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದು ಕ್ಷೇತ್ರದ ಅಭಿವೃದ್ದಿಗೆ ಅಗತ್ಯ ಇರುವ ಅನುದಾನವನ್ನು ನೀಡುವಂತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಕೋರಲಾಗುವುದು, ಇದಕ್ಕೆ ಕ್ಷೇತ್ರದಲ್ಲಿನ ಹೆಚ್ಚಿನ ಗ್ರಾ.ಪಂ.ಗಳಲ್ಲಿ ಕಾಂಗ್ರೆಸ್ ಬೆಂಬಲಿತರು ಅಧಿಕಾರಕ್ಕೆ ಬರಬೇಕೆಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಸಹನರಾಜೀವ್‌ಗೌಡ, ಮುಖಂಡರಾದ ಕೆ.ಗುಡಿಯಪ್ಪ, ಪರಮೇಶ್ವರ್, ಹೀರಬಲ್ಲ ರವಿಕುಮಾರ್, ಕೃಷ್ಣಪ್ಪ, ಬಸವಾಪಟ್ಟಣ ಬೈರೇಗೌಡ, ಅಪ್ಪೇಗೌಡನಹಳ್ಳಿ ಮಂಜುನಾಥ್, ಆನೂರು ರವಿ ಹಾಜರಿದ್ದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version