Home News J ವೆಂಕಟಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ

J ವೆಂಕಟಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ

0
J Venkatapura Grama Panchayat Election

J Venkatapura, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಜೆ.ವೆಂಕಟಪುರ ಗ್ರಾಮ ಪಂಚಾಯಿತಿಗೆ (J Venkatapura Grama Panchayat) ಅಧ್ಯಕ್ಷೆಯಾಗಿ ಡಿ.ಎನ್.ಸುಮಿತ್ರ ದ್ಯಾವಪ್ಪ ಹಾಗೂ ಉಪಧ್ಯಕ್ಷೆಯಾಗಿ ಶಶಿಕಲಾ ಅಂಬರೀಶ್ ಆಯ್ಕೆಗೊಂಡಿದ್ದಾರೆ ಎಂದು ಚುನಾವಣಾಧಿಕಾರಿ ಕೆ.ಎಚ್.ಮೀನ ಪ್ರಕಟಿಸಿದರು.

ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಡಿ.ಎನ್.ಸುಮಿತ್ರ ದ್ಯಾವಪ್ಪ, ಸಾಮಾನ್ಯ ಮೀಸಲು ಉಪಾಧ್ಯಕ್ಷ ಸ್ಥಾನಕ್ಕೆ ಶಶಿಕಲಾ ಅಂಬರೀಶ್ ರವರು ನಾಮಪತ್ರ ಸಲ್ಲಿಸಿದ್ದರು.

ಒಟ್ಟು 17 ಮಂದಿ ಸದಸ್ಯರಲ್ಲಿ 16 ಮಂದಿ ಕಾಂಗ್ರೆಸ್ ಬೆಂಬಲಿತ ಒಬ್ಬರು ಜೆಡಿಎಸ್ ಬೆಂಬಲಿತ ಸದಸ್ಯರು ಒಳಗೊಂಡಿರುವ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು.

ಇನ್ಯಾವುದೇ ನಾಮಪತ್ರ ಸಲ್ಲಿಸದ ಕಾರಣ ಇವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು ಎಂದು ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ ಕೆ.ಎಚ್. ಮೀನಾ ತಿಳಿಸಿದರು.

ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಅಭಿಮಾನಿಗಳು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೃಷ್ಣಪ್ಪ ಹಾಗೂ ಸದಸ್ಯರು ಹಾಜರಿದ್ದರು.

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version