Home News ಬಕ್ರೀದ್ ಹಬ್ಬದ ಅಂಗವಾಗಿ ಫ್ರಂಟ್‍ಲೈನ್ ಕಾರ್ಯಕರ್ತರಿಗೆ ಸನ್ಮಾನ

ಬಕ್ರೀದ್ ಹಬ್ಬದ ಅಂಗವಾಗಿ ಫ್ರಂಟ್‍ಲೈನ್ ಕಾರ್ಯಕರ್ತರಿಗೆ ಸನ್ಮಾನ

0
jamiya masjid bakrid celebration sidlaghatta

ಶಿಡ್ಲಘಟ್ಟ ನಗರದ ಜಾಮೀಯ ಮಸೀದಿಯ ಸಮುದಾಯ ಭವನದಲ್ಲಿ ಬಕ್ರೀದ್ ಹಬ್ಬದ ಅಂಗವಾಗಿ ಫ್ರಂಟ್‍ಲೈನ್ ಕೊರೊನಾ ವಾರಿಯರ್ಸ್‍ಗಳಿಗೆ ಸನ್ಮಾನಿಸಿ ಶಾಸಕ ವಿ. ಮುನಿಯಪ್ಪ ಅವರು ಮಾತನಾಡಿದರು.

ಕೊರೊನಾ ಸೋಂಕಿನ ಮೊದಲ ಮತ್ತು ಎರಡನೇ ಅಲೆಯ ಪ್ರಭಾವದಿಂದ ವ್ಯಾಪಾರ ವಹಿವಾಟಿನ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಜೊತೆಗೆ ಅನೇಕ ಮಂದಿ ಹತ್ತಿರದ ಸಂಬಂಧಿಕರನ್ನು ಕಳೆದುಕೊಂಡಿದ್ದಾರೆಂದು ಕಳವಳ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಸಂಭವನೀಯ ಕೊರೊನಾ ಸೋಂಕಿನ ಮೂರನೇ ಅಲೆ ಬರುವ ಸಾಧ್ಯತೆ ಇರುವುದರಿಂದ ಪ್ರತಿಯೊಬ್ಬರು ಕೋವಿಡ್ ಲಸಿಕೆಯನ್ನು ಕಡ್ಡಾಯವಾಗಿ ಪಡೆದುಕೊಂಡು ಆರೋಗ್ಯವಂತರಾಗಿರಬೇಕೆಂದು ತಿಳಿಸಿದರು.

ರಾಜ್ಯ ಸರ್ಕಾರ ಕೊರೊನಾ ಸೋಂಕು ನಿಯಂತ್ರಿಸುವ ಸಲುವಾಗಿ ಸಮಾಜದಲ್ಲಿರುವ ಪ್ರತಿಯೊಬ್ಬರಿಗೆ ಕೋವಿಡ್ ಲಸಿಕೆಯನ್ನು ನೀಡಲು ಕ್ರಮ ಕೈಗೊಳ್ಳಬೇಕು. ನಾಗರಿಕರು ಸಹ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವ ಜೊತೆಗೆ ಕಡ್ಡಾಯವಾಗಿ ಕೋವಿಡ್ ಲಸಿಕೆಯನ್ನು ಪಡೆದುಕೊಂಡು ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಜನರಲ್ಲಿ ಮತ್ತಷ್ಟು ಅರಿವು ಮತ್ತು ಜಾಗೃತಿ ಮೂಡಿಸಬೇಕೆಂದರು.

ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಬಕ್ರೀದ್ ಹಬ್ಬವನ್ನು ಆಚರಿಸುವ ಜೊತೆಗೆ ಇಡೀ ವಿಶ್ವದಲ್ಲಿ ಕೊರೊನಾ ಸೋಂಕು ನಿರ್ಮೂಲನೆಗೆ ವಿಶೇಷ ಪ್ರಾರ್ಥನೆ ಸಲ್ಲಿಸಬೇಕಿದೆ. ಕೇವಲ ನಮ್ಮ ದೇಶ ಮಾತ್ರವಲ್ಲದೆ ಇಡೀ ಪ್ರಪಂಚ ಕೊರೊನಾ ಸೋಂಕಿನ ಮಹಾಮಾರಿಯಿಂದ ತತ್ತರಿಸುವಂತಾಗಿದೆ ಕಣ್ಣಿಗೆ ಕಾಣದಂತಹ ವೈರೆಸ್‍ನಿಂದ ಆಗುತ್ತಿರುವ ಅಪಾಯದಿಂದ ಎಲ್ಲರೂ ಜಾಗೃತರಾಗಿರಬೇಕು. ಶಾಂತಿ ಸೌಹಾರ್ದತೆಯಿಂದ ಹಬ್ಬಗಳನ್ನು ಆಚರಿಸುವ ಮೂಲಕ ಆದರ್ಶ ಸಮಾಜವನ್ನು ನಿರ್ಮಿಸಬೇಕೆಂದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಬಿ.ಎಸ್. ರಾಜೀವ್, ಸರ್ಕಲ್ ಇನ್ಸ್ ಪೆಕ್ಟರ್ ಧರ್ಮೇಗೌಡ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ, ನಗರಸಭಾ ಸದಸ್ಯ ಅನಿಲ್ ಕುಮಾರ್ ಮಾತನಾಡಿದರು.

ಕಾರ್ಯಕ್ರಮದಲ್ಲಿ ಕೊರೊನಾ ಫ್ರಂಟ್‍ಲೈನ್ ವಾರಿಯರ್ಸ್‍ಗಳನ್ನು ಸನ್ಮಾನಿಸಲಾಯಿತು. ಜಾಮಿಯಾ ಮಸೀದಿಯ ಅಧ್ಯಕ್ಷ ಎಚ್.ಎಸ್. ರಫೀಕ್ ಅಹಮದ್, ಉಪಾಧ್ಯಕ್ಷ ಗೌಸ್‍ಪೀರ್, ಕಾರ್ಯದರ್ಶಿ ಬಿ.ಅಬ್ದುಲ್‍ಸಲಾಂ, ಖಾಜಾಂಚಿ ಫರೀದ್, ಸದಸ್ಯರಾದ ಸೈಯದ್ ಸನಾವುಲ್ಲಾ, ಇರ್ಫಾನ್, ರಹಮತ್ ಅಲೀ, ಕೆ.ಪಿ.ಸಿ.ಸಿ. ಸದಸ್ಯ ವಿ.ಸುಬ್ರಮಣಿ, ನಗರಸಭೆಯ ಸದಸ್ಯ ಬಸ್ ಮಂಜುನಾಥ್, ಮಾಜಿ ಸದಸ್ಯ ಅಬ್ದುಲ್ ಗಫೂರ್, ಮಧುಸೂಧನ್, ಬಾಂಬೆ ನವಾಝ್, ಮೊಹಮದ್ ಹಫೀಜ್, ಸಾಧಿಕ್, ಇಂತಿಯಾಜ್, ಅಕ್ರಂ,ಫಿದಾಹುಸೇನ್,ಮುನೀರ್ ಹಾಜರಿದ್ದರು.

 

Like, Follow, Share ನಮ್ಮ ಶಿಡ್ಲಘಟ್ಟ

Facebook: https://www.facebook.com/sidlaghatta

Instagram: https://www.instagram.com/sidlaghatta

Telegram: https://t.me/Sidlaghatta

Twitter: https://twitter.com/hisidlaghatta

ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:

WhatsApp: https://wa.me/917406303366?text=Hi

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version