Hemarlahalli, sidlaghatta : ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಹೋಬಳಿಯ ಹೇಮಾರ್ಲಹಳ್ಳಿಯಲ್ಲಿ ಶ್ರೀದೇವಿ ಭೂದೇವಿ ಸಮೇತ ಶ್ರೀ ಚನ್ನರಾಯಸ್ವಾಮಿ ದೇವಾಲಯದ ಜೀರ್ಣೋದ್ಧಾರ, ವಿಮಾನ ಗೋಪುರದ ಮಹಾ ಸಂಪ್ರೋಕ್ಷಣೆ ಮತ್ತು ನೂತನ ಶಿಲಾಬಿಂಬ ಹಾಗೂ ಪ್ರಾಣ ಪ್ರತಿಷ್ಠಾಪನೆ ಮಹೋತ್ಸವವನ್ನು ಮೂರು ದಿನಗಳ ಕಾಲ ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು.
ಬುಧವಾರ ಪ್ರಾರಂಭವಾದ ಪೂಜಾ ಕಾರ್ಯಕ್ರಮಗಳು ಶುಕ್ರವಾರದವರೆಗೂ ನಡೆಯಲಿದೆ. ಬುಧವಾರ ಪಂಚಮಿಯಂದು ಗಂಗೆ ಪೂಜೆ, ಗೋಪೂಜೆ, ಮೃತ್ಯಂಗ್ರಹಣ, ವಿಶ್ವಕ್ಸೇನ, ಯಾಗಶಾಲಾ ಪ್ರವೇಶ, ಧ್ವಜ ಕುಂಭಾರಾಧನೆ, ವಿವಿಧ ಹೋಮಗಳು, ಮಂಗಳಾರತಿ ಮತ್ತು ತೀರ್ಥಪ್ರಸಾದ ವಿನಿಯೋಗ ನಡೆಯಿತು.
ಗುರುವಾರ ಷಷ್ಠಿಯಂದು ವೇದಪಾರಾಯಣ, ವಿಷ್ಣು ಸಹಸ್ರನಾಮ ಪಾರಾಯಣ, ವಿವಿಧ ದೇವತಾ ಹೋಮಗಳು, ಪೂರ್ಣಹುತಿ ಮತ್ತು ತೀರ್ಥಪ್ರಸಾದ ವಿನಿಯೋಗ ನಡೆಯಿತು.
ಪೂಜಾಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನದ ಚಿಕ್ಕಬಳ್ಳಾಪುರ ಶಾಖಾ ಮಠದ ಶ್ರೀ ಮಂಗಳಾನಂದನಾಥ ಸ್ವಾಮಿ ಸಾನಿಧ್ಯ ವಹಿಸುವರು. ಕುಲಬಾಂಧವರು, ಗ್ರಾಮಸ್ಥರು ಹಾಗೂ ದಾನಿಗಳು ಸುತ್ತಮುತ್ತಲ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಅನ್ನದಾಸೋಹ ಮಹಾಪ್ರಸಾದ ವಿನಿಯೋಗ ನಡೆಯಲಿದೆ, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ಭಗವಂತನ ಕೃಪೆಗೆ ಪಾತ್ರರಾಗಬೇಕೆಂದು ಶ್ರೀ ಚನ್ನರಾಯಸ್ವಾಮಿ ಶ್ರೀ ಆಂಜನೇಯ ಸ್ವಾಮಿ ದೇವಾಲಯದ ಕುಲಬಾಂಧವರು ಹಾಗೂ ಗ್ರಾಮಸ್ಥರು ಮನವಿ ಮಾಡಿದ್ದಾರೆ.