ನರೇಗಾ ಯೋಜನೆ ಮೂಲಕ ಉದ್ಯೋಗ ಚೀಟಿ ನೀಡಲು ಅಭಿಯಾನ: ಸಿಇಒ ಫೌಝೀಯಾ ತರುನ್ನುಮ್

- Advertisement -
- Advertisement -

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಪಡಿತರ ಚೀಟಿ ಹೊಂದಿರುವ ಕುಟುಂಬ ಸದಸ್ಯರಿಗೆ ಜಾಬ್‍ಕಾರ್ಡ್ (ಉದ್ಯೋಗ ಚೀಟಿ) ನೀಡಲು ಅಭಿಯಾನವನ್ನು ನಡೆಸಬೇಕೆಂದು ಜಿಲ್ಲಾ ಪಂಚಾಯತ್ ಸಿಇಒ ಫೌಝೀಯಾ ತರುನ್ನುಮ್ ಸೂಚಿಸಿದರು.

 ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ವಿವಿಧ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗ್ರಾಮೀಣ ಅಭಿವೃದ್ಧಿಗೆ ಪೂರಕವಾಗಿರುವ ನರೇಗಾ ಯೋಜನೆಯ ಮೂಲಕ ಎಲ್ಲರಿಗೂ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಪಡಿತರ ಚೀಟಿ ಹೊಂದಿರುವ ಕುಟುಂಬ ಸದಸ್ಯರನ್ನು ಗುರುತಿಸಿ ಮನೆಮನೆಗೂ ತೆರಳಿ ಜಾಬ್‍ಕಾರ್ಡ್ ನೀಡಲು ವಿಶೇಷ ಅಭಿಯಾನ ನಡೆಸಬೇಕೆಂದು ತಿಳಿಸಿದರು.

 ನರೇಗಾ ಯೋಜನೆಯಡಿ ಬಚ್ಚಲು ಗುಂಡಿ, ಅಣಬೆ ಬೇಸಾಯ, ದನಕರುಗಳಶೆಡ್, ಪೌಷ್ಟಿಕ ತೋಟ ಒಳಗೊಂಡಂತೆ ಒಂದು ಪ್ಯಾಕೇಜ್ ಯೋಜನೆಯನ್ನು ಜಾರಿಗೊಳಿಸಿದ್ದು ರೈತರು ಮತ್ತು ಜನಸಾಮಾನ್ಯರು ಈ ಯೋಜನೆಯನ್ನು ಸದುಪಯೋಗ ಮಾಡಿಕೊಳ್ಳಬೇಕೆಂದು ಮನವಿ ಮಾಡಿದರು.

 ಸ್ವಚ್ಛಭಾರತ್ ಅಭಿಯಾನ ಯೋಜನೆಯಡಿಯಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ದ್ರವ ಮತ್ತು ಘನ ತ್ಯಾಜ್ಯ ವಿಲೇವಾರಿ ಘಟಕವನ್ನು ನಿರ್ಮಿಸಲು ಕ್ರಮ ಕೈಗೊಳ್ಳಾಲಾಗಿದೆ. ಕೆಲವೊಂದು ಕಡೆ ಜಾಗದ ಕೊರತೆಯಿಂದ ಘಟಕದ ಕಾಮಗಾರಿ ವಿಳಂಭವಾಗಿದೆ. ತಾಲ್ಲೂಕು ದಂಡಾಧಿಕಾರಿಗಳು ಸೂಕ್ತ ನಿವೇಶನವನ್ನು ಒದಗಿಸಲು ಸಹಕರಿಸಬೇಕೆಂದು ಹೇಳಿದರು.

 ಕೋವಿಡ್ ಸಂಕಷ್ಟದಲ್ಲಿರುವ ಕೂಲಿ ಕಾರ್ಮಿಕರಿಗೆ ನರೇಗಾ ಯೋಜನೆಯಡಿ ಉದ್ಯೋಗವನ್ನು ಕಲ್ಪಿಸಲಾಗಿದೆ. ಅದೇ ರೀತಿ ರೈತರು ಮತ್ತು ಜನ ಸಾಮಾನ್ಯರಿಗೆ ಈ ಯೋಜನೆಯ ಮೂಲಕ ಹೆಚ್ಚಿನ ಅನುಕೂಲಗಳನ್ನು ಕಲ್ಪಿಸಲಾಗಿದ್ದು, ಪ್ರಸ್ತುತ ಶಿಡ್ಲಘಟ್ಟ ತಾಲೂಕಿನಲ್ಲಿ 26 ಸಾವಿರ ಜಾಬ್‍ಕಾರ್ಡ್‍ಗಳನ್ನು ನೀಡಲಾಗಿದೆ. ಮುಂದಿನ ತಿಂಗಳ ಅಂತ್ಯದೊಳಗೆ 40 ಸಾವಿರ ಜಾಬ್‍ಕಾರ್ಡ್ ನೀಡಲು ಕ್ರಮ ಕೈಗೊಳ್ಳಬೇಕೆಂದು ಪಿಡಿಓ ಗಳಿಗೆ ಸೂಚನೆ ನೀಡಿದರು.

 ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆಯಿದ್ದಲ್ಲಿ ತಕ್ಷಣ ತಾಲ್ಲೂಕು ಪಂಚಾಯಿತಿ ಇಒ ಅವರಿಗೆ ವರದಿ ಸಲ್ಲಿಸಬೇಕು. ಬೆಸ್ಕಾಂ ಇಲಾಖೆಯ ಅಧಿಕಾರಗಳು ವಿದ್ಯುತ್ ಕಣ್ಣು ಮುಚ್ಚಾಲೆಯ ಸಮಸ್ಯೆಯನ್ನು ನೀಗಿಸಲು ಗಮನಹರಿಸಬೇಕು. ಸರ್ಕಾರದ ಸೌಲಭ್ಯಗಳು ಜನರ ಮನೆ ಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕೆಂದು ಆದೇಶಿಸಿದರು.

 ವಸತಿ-ಕುಡಿಯುವ ನೀರು ಪೂರೈಕೆ,ಆಶ್ರಯ ಯೋಜನೆಯಡಿ ನಿವೇಶನಗಳ ಹಂಚಿಕೆ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತೆರಿಗೆ ಪರಿಷ್ಕರಣೆ ಮತ್ತು ವಸೂಲಾತಿ, ಕೊರೊನಾ ಸೋಂಕು ನಿಯಂತ್ರಿಸಲು ಕೈಗೊಂಡಿರುವ ಕ್ರಮಗಳು, ಮಹಿಳಾ ಸಬಲೀಕರಣಕ್ಕಾಗಿ ಜಾರಿಗೊಳಿಸಿರುವ ಎನ್.ಆರ್.ಎಲ್.ಎಂ ಯೋಜನೆ ಮತ್ತು ಅಡ್‍ಹಾಕ್ ಸಮಿತಿಯ ಪ್ರಗತಿ ವರದಿಗಳನ್ನು ಪರಿಶೀಲಿಸಿದರು.

 ಸಭೆಯಲ್ಲಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ರಾಜಶೇಖರ್, ಇಒ ಶಿವಕುಮಾರ್, ತಹಶೀಲ್ದಾರ್ ಕೆ.ಅರುಂಧತಿ, ನರೇಗಾ ಸಹಾಯಕ ನಿರ್ದೇಶಕ ಚಂದ್ರಪ್ಪ, ಲೋಕೋಪಯೋಗಿ ಇಲಾಖೆಯ ಎಇಇ ವಿನಯ್, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಎಸ್.ವಿ.ಮಂಜುನಾಥ, ಸಿಡಿಪಿಒ ನಾಗವೇಣಿ, ಕುಡಿಯುವ ನೀರು, ಗ್ರಾಮ ನೈರ್ಮಲ್ಯ ಇಲಾಖೆಯ ಎಇಇ ಲೋಕೇಶ್, ಬಿಸಿಎಂ ಅಧಿಕಾರಿ ಸಕ್ಪಾಲ್, ಪಂಚಾಯತ್ ರಾಜ್ ಇಲಾಖೆಯ ಎಇಇ ರಮೇಶ್ ಹಾಗೂ ವಿವಿಧ ಗ್ರಾಮ ಪಂಚಾತಿಯಿಗಳ ಪಿಡಿಒಗಳು, ಕಾರ್ಯದರ್ಶಿಗಳು ಹಾಗೂ ಕರ ವಸೂಲಿಗಾರರು ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!