ಕೆಎಚ್ ಮುನಿಯಪ್ಪ ಅವರನ್ನು ಸಿಎಂ ಮಾಡಿ – ಗುಡಿಹಳ್ಳಿ ನಾರಾಯಣಸ್ವಾಮಿ

0
258
K H Muniyappa to chief minister

Sidlaghatta : ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯನ್ನಾಗಿ ಹಿರಿಯ ರಾಜಕಾರಣಿ, ದೇವನಹಳ್ಳಿ ಕ್ಷೇತ್ರದ ಶಾಸಕ ಕೆ.ಎಚ್.ಮುನಿಯಪ್ಪ ಅವರನ್ನು ನೇಮಿಸಬೇಕೆಂದು ಕೆಪಿಸಿಸಿ ಎಸ್‌ಸಿ ಘಟಕದ ರಾಜ್ಯ ಸಂಚಾಲಕ ಗುಡಿಹಳ್ಳಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ.

ಈ ಬಗ್ಗೆ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಕಟ್ಟಿ ಬೆಳೆಸಿದವರಲ್ಲಿ ಕೆ.ಎಚ್.ಮುನಿಯಪ್ಪ ಅವರು ಕೂಡ ಒಬ್ಬರು. ಏಳು ಬಾರಿ ಲೋಕಸಭಾ ಸದಸ್ಯರಾಗಿ, ಹತ್ತು ವರ್ಷಗಳ ಕಾಲ ಕೇಂದ್ರದಲ್ಲಿ ನಾನಾ ಖಾತೆಗಳನ್ನು ನಿಭಾಯಿಸಿದ ಅನುಭವಿಗಳು.

ಎಡಗೈ ದಲಿತ ಪ್ರಭಾವಿ ಮುಖಂಡರಾಗಿದ್ದು ಇವರನ್ನು ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ನೇಮಿಸಬೇಕೆಂದು ಒತ್ತಾಯಿಸಿದರು.

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!