Home News ತಾಲ್ಲೂಕು ಆಡಳಿತದಿಂದ ಕನಕಜಯಂತಿ ಆಚರಣೆ

ತಾಲ್ಲೂಕು ಆಡಳಿತದಿಂದ ಕನಕಜಯಂತಿ ಆಚರಣೆ

0
Kanakajayanthi Karnataka sidlaghatta chikkaballapur district Taluk Office

ಕನಕದಾಸರು ನಾಡು ಕಂಡ ಸಂತ ಶ್ರೇಷ್ಠರಲ್ಲೊಬ್ಬರಾಗಿದ್ದು ಅವರ ಆದರ್ಶಗಳು ಎಲ್ಲರಿಗೂ ಅನುಕರಣೀಯ ಎಂದು ತಹಶೀಲ್ದಾರ್ ಕೆ.ಅರುಂಧತಿ ಹೇಳಿದರು.

ಕನಕಜಯಂತಿ ಅಂಗವಾಗಿ ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಗುರುವಾರ ದಾಸಶ್ರೇಷ್ಠ ಶ್ರೀ ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು.

ಕುಲ ಕುಲವೆಂದು ಹೊಡೆದಾಡಬೇಡಿ, ಕುಲಗಳು ಹುಟ್ಟಿದ್ದು ಎಲ್ಲಿ ಎಂಬುದನ್ನು ಅರ್ಥಮಾಡಿಕೊಂಡಿದ್ದಾದರೆ ಜಾತಿ ಸಂಘರ್ಷಗಳಿಗೆ ಅವಕಾಶವಿರುವುದಿಲ್ಲವೆಂದು ಸಾರಿದ ಕನಕದಾಸರು ಸುಮಾರು ಐದು ಶತಮಾನಗಳಿಂದ ಜನರ ಮನಸ್ಸಿನಲ್ಲಿ ಅಚ್ಚಳಿಯದೇ ನೆಲೆಸಿದ್ದಾರೆ. ಕನಕದಾಸರು ಕೇವಲ ದಾಸಶ್ರೇಷ್ಠರು ಮಾತ್ರವಲ್ಲದೇ ಅತ್ಯುತ್ತಮ ಸಾಹಿತಿ, ಕವಿ, ಗಾಯಕರಾಗಿದ್ದು ಜಾತಿ ನಿರ್ಮೂಲನೆ ಮಾಡುವಲ್ಲಿ ಶ್ರಮಿಸಿದಂತಹ ಮಹಾಪುರುಷರು, ಅವರ ತತ್ವ, ಆದರ್ಶಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕು ಎಂದರು.

ಸಮುದಾಯದವರಿಂದ ನಗರದ ಕೆಂಪಣ್ಣ ವೃತ್ತದಲ್ಲಿರುವ ಕನಕ ಭಜನೆ ಮಂದಿರದಲ್ಲಿ ವಿಶೇಷ ಪೂಜೆ ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಶಿರಸ್ತೇದಾರ್ ಕೆ.ಎನ್.ಮಂಜುನಾಥ್, ರಾಜಸ್ವ ನಿರೀಕ್ಷಕ ಪ್ರಶಾಂತ್, ತಾಲ್ಲೂಕು ನೌಕರರ ಸಂಘದ ಅಧ್ಯಕ್ಷ ಕೆ.ಎನ್.ಸುಬ್ಬರೆಡ್ಡಿ, ಸಮುದಾಯದ ಮುಖಂಡರಾದ ಎ.ನಾಗರಾಜ್, ಎಂ.ಗಣೇಶಪ್ಪ, ಎ.ರಾಮಚಂದ್ರಪ್ಪ, ಎಂ.ರಾಮಾಂಜಿನಪ್ಪ, ಮಂಜುಳಮ್ಮ ಹಾಜರಿದ್ದರು.

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version