ಕನ್ನಡ ರಾಜ್ಯೋತ್ಸವ ನವೆಂಬರ್ ತಿಂಗಳಿಗೆ ಮಾತ್ರವೇ? ವರ್ಷವಿಡೀ ಕನ್ನಡ ಬಳಸಲು ಕರೆ

Sidlaghatta : ಕನ್ನಡ ರಾಜ್ಯೋತ್ಸವ ನವೆಂಬರ್ ತಿಂಗಳಿಗೆ ಮಾತ್ರ ಸೀಮಿತವಾಗಬಾರದು, ವರ್ಷದ ಪ್ರತಿದಿನವೂ ಕನ್ನಡ ಬಳಸುವ ಸಂಕಲ್ಪ ಮಾಡಬೇಕು ಎಂದು ಕನ್ನಡ ಸಾರಸ್ವತ ಪರಿಚಾರಿಕೆ ಅಧ್ಯಕ್ಷ ಬಿ.ಆರ್. ಅನಂತಕೃಷ್ಣ ಕರೆ ನೀಡಿದರು.
ನಗರದ ಉಲ್ಲೂರುಪೇಟೆ ಬಳಿಯ ಪುನೀತ್ ರಾಜ್ಕುಮಾರ್ ವೃತ್ತದಲ್ಲಿ ಸ್ನೇಹ ಯುವಕರ ಸಂಘದ ವತಿಯಿಂದ ಸೋಮವಾರ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಕಾರ್ಯಕ್ರಮದ ಅಂಗವಾಗಿ ತಾಯಿ ಭುವನೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸ ಮತ್ತು ಶ್ರೀಮಂತ ಸಾಹಿತ್ಯ ಪರಂಪರೆ ಇದೆ. ಆಧುನಿಕ ಕಾಲದಲ್ಲಿ ಕನ್ನಡದ ಅಸ್ತಿತ್ವ ಮತ್ತು ಸ್ವಾಭಿಮಾನ ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ. ಮನೆ, ಶಾಲೆ, ಸಾರ್ವಜನಿಕ ಕ್ಷೇತ್ರ ಸೇರಿ ಎಲ್ಲೆಡೆ ಕನ್ನಡಕ್ಕೆ ಆದ್ಯತೆ ನೀಡಿ ಮುಂದಿನ ಪೀಳಿಗೆಗೆ ಅದರ ಮಹತ್ವ ತಿಳಿಸಬೇಕು ಎಂದು ಅವರು ಹೇಳಿದರು.
ಸಂಘದ ಅಧ್ಯಕ್ಷ ಭರತ್ ಮಾತನಾಡಿ, ಸಂಘದ ವತಿಯಿಂದ ಪ್ರತಿವರ್ಷ ಕನ್ನಡ ನಾಡು-ನುಡಿ ಮತ್ತು ಸಂಸ್ಕೃತಿಯನ್ನು ಬಿಂಬಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಯುವಕರು ಭಾಷೆ ಮತ್ತು ಸಂಸ್ಕೃತಿಯ ಸಂರಕ್ಷಣೆಯಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳಬೇಕು ಎಂದು ತಿಳಿಸಿದರು.
ಮುನಿರಾಜು, ಶ್ರೀನಿವಾಸ್, ನವೀನ್, ಶೇಖರ್, ವೆಂಕಟೇಶ್, ಉದಯ್, ಸುನಿಲ್, ಶ್ರೀಧರ್ ಸೇರಿದಂತೆ ಸ್ಥಳೀಯರು, ಕನ್ನಡಾಭಿಮಾನಿಗಳು ಮತ್ತು ಸಂಘದ ಸದಸ್ಯರು ಭಾಗವಹಿಸಿದ್ದರು.
ಸಂಬಂಧಿತ ಸುದ್ದಿ: ಕೆಂಪು-ಹಳದಿ ಬಲೂನ್, ಹೂವಿನ ಅಲಂಕಾರ: ಹೋಟೆಲ್ನಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮ | ಕನ್ನಡ ರಾಜ್ಯೋತ್ಸವ ಆಚರಣೆ: ಧ್ವಜಾರೋಹಣ, ಮೆರವಣಿಗೆ, ಸಾಧಕರಿಗೆ ಸನ್ಮಾನ

For Daily Updates WhatsApp ‘HI’ to 7406303366
Summary in English
Speaking after hoisting the flag at a Kannada Rajyotsava event organised by a local youth association at the Puneeth Rajkumar circle near Ulluru Pete in Sidlaghatta on Monday, Kannada Saraswatha Parichārike president B.R. Ananthakrishna said Kannada Rajyotsava should not be limited to November and that everyone should resolve to use and grow Kannada every day of the year, at home, in schools and in public life. The association’s president, Bharath, said the group holds programmes every year reflecting Kannada language and culture, and urged young people to take an active part in protecting them. A special pooja was offered to Goddess Bhuvaneshwari.
Be a reporter
ಊರಿನ ಸುದ್ದಿ, ಫೋಟೋ ಕಳುಹಿಸಿ.
Send news

