ಪೂರ್ಣ ಪುಟ · Open full page
News

ಕನ್ನಡ ರಾಜ್ಯೋತ್ಸವ: ಸಾರ್ವಜನಿಕರ ಹೆಚ್ಚಿನ ಭಾಗವಹಿಸುವಿಕೆಗೆ ತಹಶೀಲ್ದಾರ್ ಕರೆ

ಕನ್ನಡ ರಾಜ್ಯೋತ್ಸವ: ಸಾರ್ವಜನಿಕರ ಹೆಚ್ಚಿನ ಭಾಗವಹಿಸುವಿಕೆಗೆ ತಹಶೀಲ್ದಾರ್ ಕರೆ

Sidlaghatta : ಕನ್ನಡ ರಾಜ್ಯೋತ್ಸವದ ಯಶಸ್ಸಿಗೆ ಸಾರ್ವಜನಿಕರ ಹೆಚ್ಚಿನ ಭಾಗವಹಿಸುವಿಕೆ ಅಗತ್ಯ ಎಂದು ತಹಶೀಲ್ದಾರ್ ಗಗನ ಸಿಂಧು ಹೇಳಿದರು.

ನಗರದ ತಾಲ್ಲೂಕು ಕಚೇರಿಯಲ್ಲಿ ಮಂಗಳವಾರ ನಡೆದ ರಾಜ್ಯೋತ್ಸವದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ನವೆಂಬರ್ 1ರಂದು ನಡೆಯುವ ರಾಜ್ಯೋತ್ಸವದಲ್ಲಿ ಕನ್ನಡಪರ, ರೈತ ಹಾಗೂ ದಲಿತ ಸಂಘಟನೆಗಳು ಸೇರಿದಂತೆ ಎಲ್ಲರೂ ಒಗ್ಗಟ್ಟಿನಿಂದ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

ತಾಲ್ಲೂಕು ಕಚೇರಿಯಲ್ಲಿ ಪೂಜೆ ಸಲ್ಲಿಸಿದ ಬಳಿಕ ಸಲ್ಲಾಪುರಮ್ಮ ದೇವಸ್ಥಾನದಲ್ಲಿ ಪೂಜೆ ನೆರವೇರಿಸಲಾಗುವುದು. ನಂತರ ಶಾಸಕ ಬಿ.ಎನ್. ರವಿಕುಮಾರ್ ಧ್ವಜಾರೋಹಣ ನೆರವೇರಿಸಿ ಸಂದೇಶ ನೀಡಲಿದ್ದಾರೆ. ಭುವನೇಶ್ವರಿ ದೇವಿಯ ಭಾವಚಿತ್ರದೊಂದಿಗೆ ಜನಪದ ಕಲಾತಂಡಗಳು, ಶಾಲಾ ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳ ಸದಸ್ಯರನ್ನೊಳಗೊಂಡ ಮೆರವಣಿಗೆ ನಡೆಯಲಿದೆ ಎಂದು ತಿಳಿಸಿದರು.

ವೇದಿಕೆ ಕಾರ್ಯಕ್ರಮ ಆಯೋಜಿಸುವ ಕುರಿತು ಶಾಸಕ ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಕಳೆದ ಬಾರಿ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಭಾಗವಹಿಸುವಿಕೆ ಕಡಿಮೆಯಾಗಿತ್ತು. ಈ ಬಾರಿ ಅಂತಹ ಪರಿಸ್ಥಿತಿ ಮರುಕಳಿಸದಂತೆ ಎಲ್ಲರೂ ಸಹಕರಿಸಬೇಕು ಎಂದು ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಸ್ವಾಮಿ ಮಾತನಾಡಿ, ತಾಲ್ಲೂಕಿನ ಎಲ್ಲ ಶಾಲೆಗಳಲ್ಲಿ ರಾಜ್ಯೋತ್ಸವ ಆಚರಿಸಲು ಸೂಚಿಸಲಾಗಿದ್ದು, ನಗರದ ಶಾಲಾ ವಿದ್ಯಾರ್ಥಿಗಳನ್ನು ಮೆರವಣಿಗೆಯಲ್ಲಿ ಪಾಲ್ಗೊಳ್ಳುವಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಸಭೆಯಲ್ಲಿ ನಗರಸಭೆ ಪೌರಾಯುಕ್ತೆ ಅಮೃತಾ ಜಿ., ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಅಧ್ಯಕ್ಷ ನಾರಾಯಣಸ್ವಾಮಿ, ರೈತ ಸಂಘದ ಮುಖಂಡ ಬೆಳ್ಳೂಟಿ ಮುನಿಕೆಂಪಣ್ಣ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದಿನ ವರ್ಷದ ಕನ್ನಡ ರಾಜ್ಯೋತ್ಸವ ಆಚರಣೆಗಳ ಕುರಿತು ಪ್ರಗತಿಪರ ಹೋರಾಟಗಾರರ ಸಂಘದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಹಾಗೂ ಎಚ್.ಕ್ರಾಸ್ ಕನ್ನಡ ರಾಜ್ಯೋತ್ಸವ ವರದಿಗಳನ್ನು ಓದಿ.

For Daily Updates WhatsApp ‘HI’ to 7406303366

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

Report an error in this story

ಇದನ್ನೂ ಓದಿ

error: Content is protected !!
Exit mobile version