Sidlaghatta : ಶಿಡ್ಲಘಟ್ಟ ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ಗ್ರೇಡ್–2 ತಹಶೀಲ್ದಾರ್ ಏನು ಹೇಳಿದರು?
ಈ ಸಂದರ್ಭದಲ್ಲಿ ಮಾತನಾಡಿದ ಗ್ರೇಡ್–2 ತಹಶೀಲ್ದಾರ್ ಮಂಜುನಾಥ್ ಅವರು, ಕಿತ್ತೂರು ರಾಣಿ ಚೆನ್ನಮ್ಮ ಅವರು ಬ್ರಿಟಿಷರ ವಿರುದ್ಧ ಹೋರಾಡಿದ ವೀರ ಮಹಿಳೆಯಾಗಿದ್ದು, ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಅವರ ಕೊಡುಗೆ ಸ್ಮರಣೀಯವಾಗಿದೆ. ಅವರ ಧೈರ್ಯ, ಸಾಹಸ ಹಾಗೂ ದೇಶಪ್ರೇಮ ಇಂದಿನ ಯುವಜನರಿಗೆ ಪ್ರೇರಣೆಯಾಗಬೇಕು ಎಂದು ಹೇಳಿದರು.
ಬ್ರಿಟಿಷರ ಆಳ್ವಿಕೆಯ ವಿರುದ್ಧ ಹೋರಾಡಿದ ರಾಣಿ ಚೆನ್ನಮ್ಮ ಅವರು ಮಹಿಳಾ ಶಕ್ತಿಯ ಪ್ರತೀಕವಾಗಿದ್ದಾರೆ. ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು, ದೇಶದ ಏಕತೆ ಮತ್ತು ಸ್ವಾಭಿಮಾನವನ್ನು ಎತ್ತಿಹಿಡಿಯಬೇಕು ಎಂದು ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಜಗದೀಶ್ ಸೇರಿದಂತೆ ತಾಲ್ಲೂಕು ಕಚೇರಿಯ ಸಿಬ್ಬಂದಿ ಉಪಸ್ಥಿತರಿದ್ದರು.
In English: Kittur Rani Chennamma Jayanti was observed in a simple manner at the Sidlaghatta taluk office hall on Friday. Grade-2 Tahsildar Manjunath said Rani Chennamma, who fought against the British, is a symbol of women’s strength whose courage and patriotism should inspire today’s youth. Social Welfare Department’s Jagadish and taluk office staff were present.








