Sidlaghatta : ಶ್ರೀಕೃಷ್ಣನ ಜೀವನ ಮತ್ತು ಬೋಧನೆಗಳು ಇಂದಿನ ಸಮಾಜಕ್ಕೂ ಪ್ರಸ್ತುತವಾಗಿದ್ದು, ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಬಿ.ಎನ್. ರವಿಕುಮಾರ್ ಹೇಳಿದರು.
In English: MLA B.N. Ravikumar said Lord Krishna’s teachings remain relevant to modern society and should be adopted in daily life, speaking at a Krishna Janmashtami celebration organised by the National Festivals Celebration Committee at the taluk office hall in Sidlaghatta.
ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಆಯೋಜಿಸಿದ್ದ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಶ್ರೀಕೃಷ್ಣನಿಗೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು.
ಶ್ರೀಕೃಷ್ಣನು ಧರ್ಮ, ಸತ್ಯ, ನ್ಯಾಯ ಹಾಗೂ ಕರ್ತವ್ಯ ಪಾಲನೆಗೆ ಹೆಚ್ಚಿನ ಮಹತ್ವ ನೀಡಿದ್ದನು. ಭಗವದ್ಗೀತೆಯ ಮೂಲಕ ಮನುಷ್ಯನಿಗೆ ಕರ್ಮದ ಮಹತ್ವವನ್ನು ತಿಳಿಸಿಕೊಟ್ಟಿದ್ದಾನೆ. ಅವರ ಜೀವನ ಸಂದೇಶಗಳನ್ನು ಇಂದಿನ ಯುವಜನತೆ ಅರಿತುಕೊಂಡು ಉತ್ತಮ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಹೇಳಿದರು.
ತಹಶೀಲ್ದಾರ್ ಗಗನಸಿಂಧು ಮಾತನಾಡಿ, ಶ್ರೀಕೃಷ್ಣನ ಜೀವನವು ಧರ್ಮದ ಮಾರ್ಗದಲ್ಲಿ ನಡೆಯುವಂತೆ ಸಮಾಜಕ್ಕೆ ಪ್ರೇರಣೆ ನೀಡುತ್ತದೆ. ಅವರ ಬೋಧನೆಗಳನ್ನು ಕೇವಲ ಆಚರಣೆಗೆ ಸೀಮಿತಗೊಳಿಸದೆ, ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಮಕ್ಕಳಿಗೆ ಶ್ರೀಕೃಷ್ಣನ ಜೀವನ ಹಾಗೂ ಭಗವದ್ಗೀತೆಯ ಸಂದೇಶಗಳನ್ನು ಪರಿಚಯಿಸುವ ಮೂಲಕ ಉತ್ತಮ ಮೌಲ್ಯಗಳನ್ನು ಬೆಳೆಸಬೇಕು ಎಂದು ಹೇಳಿದರು.
ಸಿ.ಡಿ.ಪಿ.ಒ ವಿದ್ಯಾ ವಸ್ತ್ರದ್, ಯಾದವ ಸಂಘದ ತಾಲ್ಲೂಕು ಅಧ್ಯಕ್ಷ ಎನ್. ಲಕ್ಷ್ಮಣ, ವೇಣು, ಮೂರ್ತಿ, ನಾರಾಯಣಸ್ವಾಮಿ, ಬಂಕ್ ಮುನಿಯಪ್ಪ, ಹುಜುಗೂರು ರಾಮಣ್ಣ, ಸರ್ಕಲ್ ಇನ್ಸ್ಪೆಕ್ಟರ್ ಆನಂದ್ ಕುಮಾರ್ ಹಾಜರಿದ್ದರು.

For Daily Updates WhatsApp ‘HI’ to 7406303366
Google Search ನಲ್ಲಿ ನಮ್ಮ ಸುದ್ದಿ ಮೊದಲು ನೋಡಲು Preferred Source ಆಗಿ ಸೇರಿಸಿ
