Palicherlu, Sidlaghatta : KSRTC ಬಸ್ ಡಿಕ್ಕಿ ಹೊಡೆದು ಬೈಕ್ ಸವಾರನೊಬ್ಬ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟ ಘಟನೆ ಶಿಡ್ಲಘಟ್ಟ ಗ್ರಾಮಾಂತರ ಠಾಣೆ ವ್ಯಾಪ್ತಿಯ ಪಲಿಚೇರ್ಲು ಬಳಿ ಮಂಗಳವಾರ ರಾತ್ರಿ ನಡೆದಿದೆ.
ತಾಲ್ಲೂಕಿನ ದೊಗರನಾಯಕನಹಳ್ಳಿ ಚೇತನ್(28)ಮೃತಪಟ್ಟ ವ್ಯಕ್ತಿ. ಎಲೆಕ್ಟ್ರೀಷಿಯನ್ ಕೆಲಸ ಮಾಡಿಕೊಂಡಿದ್ದ ಚೇತನ್ ಅವರು ತರಬಹಳ್ಳಿ ಜಯರಾಮಪ್ಪ ಎನ್ನುವವರ ಮನೆಯಲ್ಲಿ ಎಲೆಕ್ಟ್ರಿಕಲ್ ಕೆಲಸ ಮುಗಿಸಿ ಬೈಕ್‌ನಲ್ಲಿ ಬರುವಾಗ ಪಲಿಚೇರ್ಲು ಬಳಿ ಹಿಂದಿನಿಂದ ಬಂದ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿಯಾಗಿದೆ ಎನ್ನಲಾಗಿದೆ.
ಅಪಘಾತವಾಗುತ್ತಿದ್ದಂತೆ ಬಸ್ ಚಾಲಕ ಬಸ್ಸನ್ನು ಅಲ್ಲಿಯೆ ಬಿಟ್ಟು ಪರಾರಿಯಾಗಿದ್ದಾನೆ. ಗಂಭೀರವಾಗಿ ಗಾಯಗೊಂಡ ಚೇತನ್ ಸ್ಥಳದಲ್ಲೆ ಮೃತಪಟ್ಟಿದ್ದಾನೆ.
ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿಹೊಡೆದು ತನ್ನ ಸಹೋದರ ಮೃತಪಟ್ಟಿದ್ದಾನೆ ಎಂದು ಮೃತನ ಸಹೋದರ ರಘುನಾಥ್ ಶಿಡ್ಲಘಟ್ಟ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ.
For Daily Updates WhatsApp ‘HI’ to 7406303366









