News

ವಕೀಲರ ಸುರಕ್ಷತೆಗೆ ಆಗ್ರಹ: ಕಲಾಪದಿಂದ ಹೊರಗುಳಿದು ವಕೀಲರ ಪ್ರತಿಭಟನೆ

Sidlaghatta advocates gathered outside the court during the court boycott protest

Sidlaghatta : ಗೌರಿಬಿದನೂರಿನಲ್ಲಿ ಹಿರಿಯ ವಕೀಲ ಸಣ್ಣಕ್ಕಿ ವೆಂಕಟರಮಣಪ್ಪ ಅವರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಹಾಗೂ ವಕೀಲರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ, ಶಿಡ್ಲಘಟ್ಟದ JMFC ನ್ಯಾಯಾಲಯದ ವಕೀಲರು ಕಲಾಪಗಳಿಂದ ಹೊರಗುಳಿದು ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಹಿರಿಯ ವಕೀಲ ಎಂ. ಪಾಪಿರೆಡ್ಡಿ, ವಕೀಲರ ಮೇಲಿನ ಹಲ್ಲೆ ಖಂಡನೀಯ. ಇಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ವಕೀಲರ ಸಂಘದ ಬೇಡಿಕೆ ಏನು?

ವಕೀಲರ ಸಂಘದ ಅಧ್ಯಕ್ಷ ಎ. ನಾರಾಯಣಸ್ವಾಮಿ ಹಾಗೂ ಕಾರ್ಯದರ್ಶಿ ಸಿ.ಜಿ. ಭಾಸ್ಕರ್ ಮಾತನಾಡಿ, ವಕೀಲರು ಸಮಾಜಕ್ಕೆ ನ್ಯಾಯ ಒದಗಿಸುವ ಮಹತ್ವದ ಜವಾಬ್ದಾರಿ ನಿರ್ವಹಿಸುತ್ತಾರೆ. ಅವರ ಮೇಲಿನ ಹಲ್ಲೆಗಳು ಆತಂಕಕಾರಿ. ವಕೀಲರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಹಲ್ಲೆಗೊಳಗಾದ ಸಣ್ಣಕ್ಕಿ ವೆಂಕಟರಮಣಪ್ಪ ಅವರು ಶೀಘ್ರ ಗುಣಮುಖರಾಗಲಿ ಎಂದು ವಕೀಲರು ಹಾರೈಸಿದರು.

ಈ ಹಿಂದೆ ವಕೀಲರ ಮೇಲೆ ನಡೆದ ಹಲ್ಲೆ ಖಂಡಿಸಿ ನಡೆದ ಮೌನ ಪ್ರತಿಭಟನೆ ಹಾಗೂ ಕಲಾಪದಿಂದ ಹೊರಗುಳಿದು ನಡೆದ ವಕೀಲರ ಪ್ರತಿಭಟನೆಯ ವರದಿಗಳನ್ನು ಓದಿ. ಇನ್ನಷ್ಟು ವಕೀಲರ ಸುದ್ದಿಗಳು ಇಲ್ಲಿವೆ.

Sidlaghatta WhatsApp Channel Group

For Daily Updates WhatsApp ‘HI’ to 7406303366

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

Report an error in this story

More

Share
error: Content is protected !!