24.1 C
Sidlaghatta
Friday, March 29, 2024

ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ

Legal Awareness Program Empowers Women on International Women's Day

- Advertisement -
- Advertisement -

Belluti, Sidlaghatta : ಕಾನೂನಿನ ವಿವೇಚನೆ ಇಲ್ಲದೆ ಆಗುವ ಅನಾಹುತ ತಡೆಗಟ್ಟಲು ಮತ್ತು ಶೋಷಣೆಯಿಂದ ಮುಕ್ತರಾಗಲು ಮಹಿಳೆಯರು ಕಾನೂನಿನ ಅರಿವು ಪಡೆಯಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಯಮನಪ್ಪ ಕರೆ ಹನುಮಂತಪ್ಪ ತಿಳಿಸಿದರು.

ತಾಲ್ಲೂಕಿನ ಬೆಳ್ಳೂಟಿ ಗೇಟ್ ಬಳಿಯಿರುವ ಎಸ್ ಎಲ್ ವಿ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ತಾಲ್ಲೂಕು ಕಾನೂನು ಸೇವಾ ಸಮಿತಿ, ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಡೆದ “ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆ”ಯ ಪ್ರಯುಕ್ತ ನಡೆದ ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಕ್ಕಳು ಮತ್ತು ಮಹಿಳೆಯರ ಮೇಲೆ ದೌರ್ಜನ್ಯ ನಡೆದರೆ ಧೈರ್ಯವಾಗಿ ಮುಂದೆ ಬಂದು ಕಾನೂನಿನ ನೆರವು ಪಡೆದುಕೊಳ್ಳಬೇಕು. ಮಕ್ಕಳಿಗೆ ಮತ್ತು ಮಹಿಳೆಯರ ರಕ್ಷಣೆಗಾಗಿ ಹಲವಾರು ಕಾನೂನುಗಳನ್ನು ಜಾರಿಗೆ ತರಲಾಗಿದೆ. ಇದರ ಬಗ್ಗೆ ತಿಳಿದುಕೊಂಡರೆ ಮುಂದೆ ಯಾರಿಗಾದರೂ ಅನ್ಯಾಯವಾದಾಗ ಅವರಿಗೆ ನೀವು ಸಹಾಯ ಮಾಡಬಹುದು ಎಂದು ಹೇಳಿದರು.

ತಾಲ್ಲೂಕು ವಕೀಲರ ಸಂಘದ ಕಾರ್ಯದರ್ಶಿ ಎಂ.ಬಿ.ಲೋಕೇಶ್ ಮಾತನಾಡಿ, ‘ಬಾಲ್ಯ ವಿವಾಹ, ಮಕ್ಕಳ ಕಳ್ಳ ಸಾಗಾಣಿಕೆ, ಹೆಣ್ಣು ಮಕ್ಕಳ ಶೋಷಣೆ, ದೌರ್ಜನ್ಯ ನಡೆಸುವವರಿಗೆ ಕಾನೂನಿನಡಿಯಲ್ಲಿ ಶಿಕ್ಷೆ ಇದೆ. ಇಂತಹ ಪ್ರಕರಣಗಳನ್ನು ಸಮಾಜದಲ್ಲಿ ತಡೆ ಹಿಡಿಯಬೇಕು. ಮಕ್ಕಳ ಮತ್ತು ಮಹಿಳೆಯರ ಅಮೂಲ್ಯವಾದ ಹಕ್ಕುಗಳನ್ನು ನಾವು ನೀವು ಕಾಪಾಡಬೇಕು ಎಂದು ಹೇಳಿದರು.

ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಮತದಾನ ಕುರಿತು ಅರಿವು :

ತಾಲ್ಲೂಕು ಪಂಚಾಯಿತಿ ಮತ್ತು ತಾಲ್ಲೂಕು ಆಡಳಿತ ಹಾಗೂ ಫೌಂಡೇಶನ್ ಫಾರ್ ಇಕಲಾಜಿಕಲ್ ಸೆಕ್ಯೂರಿಟಿ ಸಂಸ್ಥೆ ಮತ್ತು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಮತ್ತು ತಾಲ್ಲೂಕು ಸ್ವೀಪ್ ಸಮಿತಿ ಇವರ ಸಹಯೋಗದಲ್ಲಿ ಮಹಿಳೆಯರಿಗೆ ಮತದಾನ ಜಾಗೃತಿ ಅಭಿಯಾನ ಬಗ್ಗೆ ಸವಿಸ್ತಾರವಾಗಿ ವಿವರಣೆ ನೀಡಲಾಯಿತು.

ತಾಲ್ಲೂಕು ಪಂಚಾಯಿತಿ ಇಒ ಮುನಿರಾಜ ಮಾತನಾಡಿ, ಮತದಾರ ಪಟ್ಟಿಯಲ್ಲಿ ಹೆಸರು ನೋಂದಣಿ ಪ್ರಕ್ರಿಯೆ ಹಾಗೂ 18 ವರ್ಷ ಮೇಲ್ಪಟ್ಟ ಎಲ್ಲರೂ ಮತದಾನ ಮಾಡುವ ಹಕ್ಕುಗಳ ಬಗ್ಗೆ ಮಾಹಿತಿ ನೀಡಿದರು. ಮತದಾರರ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿ ಸೇರಿದಂತೆ ಆಶಾ ಹಾಗು ಅಂಗನವಾಡಿ ಕಾರ್ಯಕತೆಯರನ್ನೊಳಗೊಂಡ 26 ಮಂದಿ ಮಹಿಳೆಯರನ್ನು ಗೌರವಿಸಲಾಯಿತು. 11 ಮಂದಿ ಗರ್ಭಿಣಿಯರಿಗೆ ಸೀಮಂತ ಕಾರ್ಯ ನೆರವೇರಿಸಲಾಯಿತು.

ಪ್ರಧಾನ ಸಿವಿಲ್ ನ್ಯಾಯಾಧೀಶೆ ಪೂಜ.ಜೆ, ಹೆಚ್ಚುವರಿ ಸಿವಿಲ್ ನ್ಯಾಯಧೀಶ ಚಂದ್ರಶೇಖರ್ ಅಲ್ಬೂರ್, ವಕೀಲರ ಸಂಘದ ಅಧ್ಯಕ್ಷ ಟಿ.ವಿ.ಚಂದ್ರಶೇಖರ್‌ಗೌಡ, ಕಾರ್ಯದರ್ಶಿ ಎಂ.ಬಿ.ಲೋಕೇಶ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ದಿ ಅಧಿಕಾರಿ ನೌತಾಜ್, ತಾಲ್ಲೂಕು ವೈದ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ, ಸಾಂತ್ವಾನ ಕೇಂದ್ರದ ಅಧ್ಯಕ್ಷೆ ವಿಜಯಾ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಎನ್.ಸುಬ್ಬಾರೆಡ್ಡಿ, ಪಶು ವೈದ್ಯಾಧಿಕಾರಿ ಡಾ.ರಮೇಶ್ ಹಾಜರಿದ್ದರು.


Legal Awareness Program Empowers Women on International Women’s Day

Belluti, Sidlaghatta : In honor of International Women’s Day, a legal awareness program was organized by the Taluk Legal Service Committee, Taluk Administration, Taluk Panchayat, and Women and Child Welfare Development Department. Senior Civil Judge Yamanappa Kare Hanumanthappa addressed the gathering, emphasizing the need for women to be aware of the law to prevent calamities and exploitation.

Judge Hanumanthappa urged women to come forward with courage and seek legal help if they or their children faced violence. He highlighted the various laws that have been enacted for the protection of women and children and emphasized the importance of knowing about them to help someone in need.

The program also focused on voting awareness, with Taluk Panchayat EO Muniraja providing detailed information about the process of name registration in the voter list and the right of every citizen above 18 years to vote. The women were encouraged to take the voter’s oath.

In recognition of their services, 26 women involved in Asha and Anganwadi activities, including staff serving in various departments, were honored at the event. Additionally, 11 pregnant women underwent marginal work.

Several dignitaries attended the event, including Principal Civil Judge Pooja J, Additional Civil Judge Chandrasekhar Alboor, Bar Association President T.V. Chandrasekhar Gowda, Women and Child Welfare Development Officer Nautaj, and other officials from various government departments. The event was held at SLV Kalyana Mandap near Belluti Gate of Sidlaghatta Taluk.

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
error: Content is protected !!