ಪೂರ್ಣ ಪುಟ · Open full page
News

ಮಕ್ಕಳಿಗೆ ಕಾನೂನು ಅರಿವು ಏಕೆ ಬೇಕು? ಶೋಷಣೆಯಾದರೆ ಭಯಪಡದೆ ಹೇಳಿ ಎಂದ ನ್ಯಾಯಾಧೀಶರು

Principal Civil Judge Mohammed Roshan Shah addressing students, parents and teachers at a legal awareness programme held with the Taluk Legal Services Committee, Bar Association and Police Department, Sidlaghatta

Sidlaghatta : ಮಕ್ಕಳಿಗೆ ಶಿಕ್ಷಣದ ಜೊತೆಗೆ ಕಾನೂನು ಅರಿವು ಮೂಡಿಸುವುದು ಅತ್ಯಗತ್ಯ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಮೊಹಮ್ಮದ್ ರೋಷನ್ ಷಾ ಅಭಿಪ್ರಾಯಪಟ್ಟರು.

ಸಂತೋಷ್ ನಗರದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಪೊಲೀಸ್ ಇಲಾಖೆಯ ಸಹಯೋಗದಲ್ಲಿ ನಡೆದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಚೆನ್ನಾಗಿ ಓದಿ ಸಮಾಜ ಮತ್ತು ದೇಶದ ಪ್ರಗತಿಗೆ ಕೊಡುಗೆ ನೀಡಬೇಕು. ಕೆಟ್ಟ ಚಟಗಳಿಂದ ದೂರವಿದ್ದು ಒಳ್ಳೆಯ ನಾಗರಿಕರಾಗಿ ಬೆಳೆಯಬೇಕು ಎಂದು ಅವರು ಕಿವಿಮಾತು ಹೇಳಿದರು.

ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿ ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಬಗ್ಗೆ ವಿವರಿಸಿದ ಅವರು, ಇಂಥ ಘಟನೆಗಳನ್ನು ತಡೆಯುವಲ್ಲಿ ಕಾನೂನು ಮುಖ್ಯ ಪಾತ್ರ ವಹಿಸುತ್ತದೆ ಎಂದರು. ಮಕ್ಕಳು ತಮ್ಮ ಹಕ್ಕುಗಳನ್ನು ತಿಳಿದುಕೊಳ್ಳಬೇಕು. ಶೋಷಣೆ ಅಥವಾ ದೌರ್ಜನ್ಯಕ್ಕೆ ಒಳಗಾದರೆ ಭಯಪಡದೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿ ಕಾನೂನಿನ ನೆರವು ಪಡೆಯಬೇಕು ಎಂದು ಸಲಹೆ ನೀಡಿದರು.

ಮಕ್ಕಳ ಸುರಕ್ಷತೆ ಮತ್ತು ಹಕ್ಕುಗಳ ರಕ್ಷಣೆಯಲ್ಲಿ ಶಾಲೆ, ಪೋಷಕರು ಮತ್ತು ಸಮಾಜಕ್ಕೆ ಜವಾಬ್ದಾರಿ ಇದೆ ಎಂದೂ ಅವರು ಹೇಳಿದರು.

ಶಾಲೆಯ ಮುಖ್ಯ ಶಿಕ್ಷಕ ಸೈಯದ್ ಅಝಮ್ ಪಾಷಾ, ಮಕ್ಬುಲ್ ಪಾಷಾ, ದಾವೂದ್ ಪಾಷಾ, ನಫೀಸ್ ಫಾತಿಮಾ, ನಸ್ರೀನ್, ಪೊಲೀಸ್ ಇಲಾಖೆಯ ಅಶ್ವಥ್ ಹಾಗೂ ಶಾಲೆಯ ಸಿಬ್ಬಂದಿ ಉಪಸ್ಥಿತರಿದ್ದರು.

ಸಂಬಂಧಿತ ಸುದ್ದಿ: ಮಕ್ಕಳು ಪೋಕ್ಸೊ ಕಾಯ್ದೆ ಬಗ್ಗೆ ಅರಿವು ಹೊಂದಿರಬೇಕು: ನ್ಯಾಯಾಧೀಶರ ಸಲಹೆ | ಮಕ್ಕಳ ಹಕ್ಕು, ಸುರಕ್ಷತೆ ಕುರಿತು ಕಾನೂನು ಅರಿವು: ವಿದ್ಯಾರ್ಥಿಗಳಿಗೆ ನ್ಯಾಯಾಧೀಶರ ಸಲಹೆ

For Daily Updates WhatsApp ‘HI’ to 7406303366

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

Report an error in this story

ಇದನ್ನೂ ಓದಿ

Exit mobile version