Home News ಗ್ರಂಥಪಾಲಕರ ದಿನಾಚರಣೆ: ಸಾರ್ವಜನಿಕ ಗ್ರಂಥಾಲಯದಲ್ಲಿ ಪುಸ್ತಕ ಪ್ರದರ್ಶನ

ಗ್ರಂಥಪಾಲಕರ ದಿನಾಚರಣೆ: ಸಾರ್ವಜನಿಕ ಗ್ರಂಥಾಲಯದಲ್ಲಿ ಪುಸ್ತಕ ಪ್ರದರ್ಶನ

0
0

Sidlaghatta : ಗ್ರಂಥಪಾಲಕರ ದಿನಾಚರಣೆ ಅಂಗವಾಗಿ ಶಿಡ್ಲಘಟ್ಟ ನಗರದ ಸಾರ್ವಜನಿಕ ಗ್ರಂಥಾಲಯದಲ್ಲಿ ಬುಧವಾರ ಪುಸ್ತಕ ಪ್ರದರ್ಶನ ಆಯೋಜಿಸಲಾಗಿತ್ತು. ಸಾಹಿತ್ಯ, ವಿಜ್ಞಾನ, ಇತಿಹಾಸ ಹಾಗೂ ಸ್ಪರ್ಧಾತ್ಮಕ ಪರೀಕ್ಷೆ ಸೇರಿದಂತೆ ವಿವಿಧ ವಿಷಯಗಳ ಪುಸ್ತಕಗಳನ್ನು ಪ್ರದರ್ಶಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಮಾತನಾಡಿದ ಗ್ರಂಥಪಾಲಕಿ ರಾಮಲೀಲಾ, “ಪುಸ್ತಕಗಳು ಜ್ಞಾನವನ್ನು ವಿಸ್ತರಿಸುವುದರ ಜತೆಗೆ ವ್ಯಕ್ತಿತ್ವ ನಿರ್ಮಾಣಕ್ಕೂ ಸಹಕಾರಿಯಾಗುತ್ತವೆ. ಗ್ರಂಥಾಲಯಗಳು ವಿದ್ಯಾರ್ಥಿಗಳು ಹಾಗೂ ಓದುಗರಲ್ಲಿ ಓದುವ ಹವ್ಯಾಸ ಬೆಳೆಸುವ ಪ್ರಮುಖ ಕೇಂದ್ರಗಳಾಗಿವೆ. ಪ್ರತಿಯೊಬ್ಬರೂ ಗ್ರಂಥಾಲಯದ ಸದುಪಯೋಗ ಪಡೆದು ಜ್ಞಾನಾರ್ಜನೆಗೆ ಮುಂದಾಗಬೇಕು” ಎಂದು ಹೇಳಿದರು.

ಪ್ರದರ್ಶನದಲ್ಲಿ ಓದುಗರು ಹಾಗೂ ವಿದ್ಯಾರ್ಥಿಗಳು ಪುಸ್ತಕಗಳನ್ನು ವೀಕ್ಷಿಸಿ, ತಮ್ಮ ಆಸಕ್ತಿಯ ಕೃತಿಗಳ ಕುರಿತು ಮಾಹಿತಿ ಪಡೆದುಕೊಂಡರು. ಗ್ರಂಥಾಲಯ ಸಹಾಯಕಿ ಬಾಂಧವ್ಯ, ಓದುಗರಾದ ಎನ್. ಸುಂದರ್, ವೃಷಭೇಂದ್ರಪ್ಪ, ಬಾಬುಕುಮಾರ್, ನಯಾಜ್, ಖಂಡೇರಾವ್, ನಾರಾಯಣಸ್ವಾಮಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

In English: Sidlaghatta’s public library held a book exhibition to mark Librarians’ Day, showcasing titles across literature, science, history, and competitive-exam preparation. Librarian Ramaleela urged readers and students to make fuller use of the library to build reading habits and knowledge.

ಈ ಹಿಂದೆ ನಡೆದ ಗ್ರಂಥಾಲಯ ಸಪ್ತಾಹ ಬಹುಮಾನ ವಿತರಣೆ ಕಾರ್ಯಕ್ರಮದ ವರದಿಯನ್ನೂ ನೋಡಿ.

Sidlaghatta WhatsApp Channel Group

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!