24.1 C
Sidlaghatta
Tuesday, February 7, 2023

ಹಂಡಿಗನಾಳ ಪಂಚಾಯಿತಿಯ ಗ್ರಂಥಾಲಯದಲ್ಲಿ ಓದುವ ಬೆಳಕು ಕಾರ್ಯಕ್ರಮ

- Advertisement -
- Advertisement -

ತಾಲ್ಲೂಕಿನ ಹಂಡಿಗನಾಳ ಪಂಚಾಯಿತಿಯ ಗ್ರಂಥಾಲಯದಲ್ಲಿ ಶನಿವಾರ ಮಕ್ಕಳ ದಿನಾಚರಣೆ ಪ್ರಯುಕ್ತ ಓದುವ ಬೆಳಕು ಕಾರ್ಯಕ್ರಮದಡಿ ಸಾಂಕೇತಿಕವಾಗಿ 20 ವಿದ್ಯಾರ್ಥಿಗಳನ್ನು ನೋಂದಾಯಿಸಿ ಪುಸ್ತಕಗಳನ್ನು ವಿತರಿಸಿ ಕಸಾಪ ತಾಲ್ಲೂಕು ಅಧ್ಯಕ್ಷ ಎ.ಎಂ.ತ್ಯಾಗರಾಜ್ ಮಾತನಾಡಿದರು.
ಕೋವಿಡ್-19 ಹಿನ್ನೆಲೆಯಲ್ಲಿ ಮಕ್ಕಳ ಓದುವ ಹವ್ಯಾಸದಿಂದ ಹಿಂದುಳಿಯಬಾರದು ಎಂಬ ಉದ್ದೇಶದಿಂದ ಓದುವ ಬೆಳಕು ಕಾರ್ಯಕ್ರಮವನ್ನು ಅನುಷ್ಠಾನ ಗೊಳಿಸಲಾಗುತ್ತಿದೆ. ಶಾಲಾ-ಕಾಲೇಜು ತೆರೆಯದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಓದಿನ ಕಡೆ ಹೆಚ್ಚಿನ ಗಮನ ನೀಡುತ್ತಿಲ್ಲ. ಅವರನ್ನು ಪುನಃ ಓದಿನ ಕಡೆ ಸೆಳೆಯಲು ಓದುವ ಬೆಳಕು ಕಾರ್ಯಕ್ರಮ ಜಾರಿಗೊಳಿಸಲಾಗಿದೆ. ಮಕ್ಕಳಿಗೆ ಇದು ಉಪಯುಕ್ತವಾಗಲಿದೆ ಎಂದು ಅವರು ತಿಳಿಸಿದರು.
ಮಕ್ಕಳ ಮಾನಸಿಕ, ಶೈಕ್ಷಣಿಕ ಹಾಗೂ ಬೌದ್ಧಿಕ ಬೆಳವಣಿಗೆಗೆ ಪೂರಕವಾಗಿ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ಓದುವ ಬೆಳಕು ಕಾರ್ಯಕ್ರಮವನ್ನು ರೂಪಿಸಿದೆ. ಡಿ.15ರೊಳಗೆ ಪಂಚಾಯಿತಿಗಳ ಎಲ್ಲ ಮಕ್ಕಳೂ ಗ್ರಂಥಾಲಯದ ಸದಸ್ಯರಾಗಿರಬೇಕು. ಮಕ್ಕಳ ಸದಸ್ಯತ್ವ ಶುಲ್ಕವನ್ನು ಪಂಚಾಯಿತಿಗಳು ಸೆಸ್‌ನಿಂದ ಭರಿಸಲಾಗುವುದು ನವೆಂಬರ್‌ನಲ್ಲಿ ಮಕ್ಕಳ ಗ್ರಾಮಸಭೆ ನಡೆಸುವುದಕ್ಕಷ್ಟೆ ಸೀಮಿತಗೊಳ್ಳುತ್ತಿದ್ದ ಮಕ್ಕಳ ದಿನಾಚರಣೆಯನ್ನು ವಿಸ್ತರಿಸಿರುವ ಇಲಾಖೆಯು, ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನವನ್ನು ನವೆಂಬರ್ 14ರಿಂದ ಪ್ರಾರಂಭಿಸಿದೆ. 2021ರ ಜನವರಿ 24ರವರೆಗೆ ಹಮ್ಮಿಕೊಂಡಿದೆ. 10 ವಾರಗಳ ಕಾಲ ಎಲ್ಲ ಪಂಚಾಯಿತಿಗಳಲ್ಲಿ ಮಕ್ಕಳ ವಿಶೇಷ ಗ್ರಾಮಸಭೆಗಳೂ ಸೇರಿದಂತೆ ಹಲವು ಚಟುವಟಿಕೆ ನಡೆಯಲಿದೆ. ಪುಸ್ತಕ ದಾನಿಗಳು ಮಕ್ಕಳಿಗೆ ಅಗತ್ಯವಾದ ಪುಸ್ತಕಗಳನ್ನು ನೀಡಬಹುದಾಗಿದೆ ಎಂದರು.
ಹಂಡಿಗನಾಳ ಗ್ರಾಮ ಪಂಚಾಯಿತಿಯ ಗ್ರಂಥಪಾಲಕ ಮುನಿರಾಜು, ಕಾರ್ಯದರ್ಶಿ ಶ್ರೀನಿವಾಸ್, ಮೋಹನ್, ನಾರಾಯಣಸ್ವಾಮಿ, ರಾಮಾಂಜಿ ಹಾಜರಿದ್ದರು.
Attachments area

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!