Home News ಮಡಿವಾಳ ಮಾಚಿದೇವರ ಜಯಂತ್ಯುತ್ಸವ

ಮಡಿವಾಳ ಮಾಚಿದೇವರ ಜಯಂತ್ಯುತ್ಸವ

0
Sidlaghatta Madivala Machideva Jayanti

Sidlaghatta : ಶಿಡ್ಲಘಟ್ಟ ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗು ಮಡಿವಾಳ ಸಮುದಾಯದ ವತಿಯಿಂದ ನಡೆದ ಶ್ರೀ ಮಡಿವಾಳ ಮಾಚಿದೇವರ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಶಾಸಕ ವಿ.ಮುನಿಯಪ್ಪ ಅವರು ಮಾತನಾಡಿದರು.

ಶರಣರ ವಚನಸಾಹಿತ್ಯದ ರಕ್ಷಣೆಗಾಗಿ ಹೋರಾಡಿದ ಮಾಚಿದೇವರ ಜಯಂತಿಯನ್ನು ಎಲ್ಲೆಡೆ ಶ್ರದ್ಧೆಯಿಂದ ಆಚರಿಸುತ್ತಿರುವುದು ಅರ್ಥಪೂರ್ಣವಾಗಿದೆ. ಹಿಂದುಳಿದ, ಶ್ರಮಜೀವಿ ವರ್ಗಗಳ ಸಮಾನತೆಗೆ ಸಾಮಾಜಿಕ ಕ್ರಾಂತಿ ಮಾಡಿದವರಲ್ಲಿ ಮಾಚಿದೇವರು ಪ್ರಮುಖರು. ಆಧ್ಯಾತ್ಮಿಕ ಪ್ರವೃತ್ತಿಯ ಮೂಲಕ, ಜನರಲ್ಲಿ ಭಕ್ತಿಪ್ರಧಾನ ಚಿಂತನೆಗಳನ್ನು ತುಂಬಿಸಿದ ಅವರು ಮೂರು ಲಕ್ಷಕ್ಕೂ ಹೆಚ್ಚು ವಚನಗಳನ್ನು ಬರೆದಿದ್ದಾರೆ ಎಂದು ತಿಳಿಸಿದರು.

ತಹಸೀಲ್ದಾರ್ ಬಿ.ಎಸ್.ರಾಜೀವ್ ಮಾತನಾಡಿ, ಸರ್ವರಿಗೂ ಸಮಪಾಲು-ಸಮಬಾಳು ಒದಗಿಸಲು ಬಸವ-ಮಾಚಿದೇವಾದಿ ಶರಣರು ಸಾಮಾಜಿಕ ಕ್ರಾಂತಿಯನ್ನೇ ಕೈಗೊಂಡರು. ಶರಣರ ಅಗ್ರಗಣ್ಯ ಬಳಗದಲ್ಲಿ ‘ಮಡಿವಾಳ ಮಾಚಿದೇವ’ ಪ್ರಮುಖರು ಎಂದರು.

ಕಾರ್ಯಕ್ರಮದಲ್ಲಿ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ, ಬಿಸಿಎಂ ಅಧಿಕಾರಿ ನಾರಾಯಣಪ್ಪ, ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕ ಕೆ.ತಿಮ್ಮರಾಜು, ಸಿಡಿಪಿಓ ನೌತಾಜ್, ಶ್ರೀ ಮಡಿವಾಳ ಮಾಚಿದೇವ ಯುವಕರ ಸಂಘದ ಅಧ್ಯಕ್ಷ ಡಿ.ವಿ.ಕೃಷ್ಣಪ್ಪ, ಉಪಾಧ್ಯಕ್ಷ ಎನ್.ಹರೀಶ್, ಪ್ರಧಾನ ಕಾರ್ಯದರ್ಶಿ ಎಚ್.ಎಂ.ಮುನಿರಾಜು, ಕೊರಿಯರ್ ರಾಜು, ಜಿ.ಸುರೇಶ್, ಆನಂದ್, ನಾರಾಯಣಸ್ವಾಮಿ, ಶಂಕರಪ್ಪ, ದೇವರಾಜ್, ಮತ್ತಿತರರು ಹಾಜರಿದ್ದರು.

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version