24.1 C
Sidlaghatta
Saturday, July 27, 2024

ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ

- Advertisement -
- Advertisement -

Sidlaghatta : ವಾಲ್ಮೀಕಿ ಬೇರೆಯಲ್ಲ, ರಾಮಾಯಣ ಬೇರೆಯಲ್ಲ. ರತ್ನಾಕರನು ಸಾಧನೆಯ ಮೂಲಕ ಮಹರ್ಷಿ ವಾಲ್ಮೀಕಿಯಾಗಿ, ರಾಮನ ಕಥೆಯನ್ನು ರಾಮನಿಗೇ ಲವಕುಶರ ಮೂಲಕ ಕೇಳಿಸಿದ ಮಹಾತ್ಮ ಎಂದು ಹಿರಿಯ ವಕೀಲ ಟಿ.ಎಸ್.ವಿಜಯಶಂಕರ್ ತಿಳಿಸಿದರು.

ನಗರದ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶನಿವಾರ ಆಯೋಜಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಅವರು ಮಾತನಾಡಿದರು.

ವಾಲ್ಮೀಕಿ ಅವರನ್ನು ಭಾರತದಲ್ಲಿ ದೇಶ ಕಂಡ ಶ್ರೇಷ್ಠ ಕವಿಗಳಲ್ಲಿ ಒಬ್ಬರೆಂದು ಪರಿಗಣಿಸಲಾಗಿದೆ. ಮೂಲತಃ ವಾಲ್ಮೀಕಿ ಬರೆದ ರಾಮಾಯಣವು 24,000 ಶ್ಲೋಕಗಳನ್ನು ಒಳಗೊಂಡಿದೆ. ಮಹರ್ಷಿ ವಾಲ್ಮೀಕಿಯು ರಾಮಾಯಣದಲ್ಲಿ ವಿವಿಧ ಪಾತ್ರಗಳ ಮುಖಾಂತರ ಕೌಟುಂಬಿಕ ಮೌಲ್ಯಗಳು ಮತ್ತು ಆದರ್ಶ ವ್ಯಕ್ತಿಯ ಗುಣಲಕ್ಷಣಗಳನ್ನು ಮನೋಜ್ಞವಾಗಿ ಚಿತ್ರಿಸಿದ್ದಾರೆ. ರಾಮಾಯಣ ಮಹಾಕಾವ್ಯದಲ್ಲಿ ಮಾತೃದೇವೋಭವ, ಪಿತೃದೇವೋಭವ, ಆಚಾರ್ಯದೇವೋಭವ, ಅತಿಥಿದೇವೋಭವದಂತಹ ಮೌಲ್ಯಗಳನ್ನು ಎತ್ತಿ ಹಿಡಿಯಲಾಗಿದೆ. ಮಮತೆ, ಸಮತೆ, ಭ್ರಾತೃತ್ವ, ತ್ಯಾಗ, ದೇಶಪ್ರೇಮ, ಅಳಿಲು ಸೇವೆ, ಪಿತೃವಾಕ್ಯ ಪರಿಪಾಲನೆ ಮುಂತಾದ ಹಲವಾರು ಮಾನವೀಯ ಮತ್ತು ಸಾಮಾಜಿಕ ಮೌಲ್ಯಗಳನ್ನು ಪ್ರತಿಪಾದಿಸಲಾಗಿದೆ ಎಂದು ವಿವರಿಸಿದರು.

ಶಾಸಕ ಬಿ.ಎನ್.ರವಿಕುಮಾರ್ ಮಾತನಾಡಿ, ಮಹರ್ಷಿ ವಾಲ್ಮೀಕಿ ಅವರು ರಚಿಸಿದ ರಾಮಾಯಣವನ್ನು ನಮ್ಮ ದೇಶ ಮಾತ್ರವಲ್ಲ ಜಗತ್ತಿನ ಅನೇಕ ರಾಷ್ಟ್ರಗಳು ಒಪ್ಪಿವೆ. ಈ ಮಹಾಕಾವ್ಯ ಜಗತ್ತಿನಲ್ಲಿ ಇಂದಿಗೂ ಮಾನವೀಯತೆ, ಧರ್ಮ ಸಂಸ್ಕಾರ ನೆಲೆಸಲು ಕಾರಣವಾಗಿದೆ. ಮಹರ್ಷಿ ವಾಲ್ಮೀಕಿ ಅವರು ರಚಿಸಿದ ಶ್ರೀರಾಮಾಯಣವು ಸಾರ್ವಕಾಲಿಕವಾದುದು ಎಂದು ಅಭಿಪ್ರಾಯಪಟ್ಟರು.

ಈ ಜಗತ್ತಿನಲ್ಲಿ ಮನುಷ್ಯ ಕುಲ ಇರುವ ತನಕ ರಾಮಾಯಣ ಮಹಾಕಾವ್ಯದಲ್ಲಿನ ಎಲ್ಲ ಸಂದೇಶಗಳು ನಮ್ಮ ಬದುಕಿಗೆ ದಾರಿ ದೀಪವಾಗಲಿದೆ. ರಾಮರಾಜ್ಯ ಆಗಲಿ ಎಂಬುದು ಎಲ್ಲರ ಆಶಯವಾಗಿದ್ದು ಆ ರಾಮರಾಜ್ಯದ ಕಲ್ಪನೆ ಬಂದಿದ್ದು ರಾಮಾಯಣದಿಂದಲೆ ಎಂದರು.

ಈ ಕ್ಷೇತ್ರದ ಜನರ ಆಶೀರ್ವಾದದಿಂದ ಶಾಸಕನಾಗಿದ್ದು ಈ ಕ್ಷೇತ್ರದ ಜನರಿಗೆ ಉತ್ತಮ ಶಿಕ್ಷಣ ಮತ್ತು ಉತ್ತಮ ಆರೋಗ್ಯ ಸವಲತ್ತುಗಳನ್ನು ನೀಡುವುದಾಗಿ ಭರವಸೆ ನೀಡಿದ್ದೇನೆ. ಅದರಂತೆ ಕಾರ್ಯಪ್ರವೃತ್ತನಾಗಿದ್ದು ನಿಮ್ಮೆಲ್ಲರ ಸಹಕಾರ ಮುಖ್ಯ ಎಂದರು.

ಹಾಗೆಯೆ ನಾನು ಈ ಕ್ಷೇತ್ರದಲ್ಲಿನ ಎಲ್ಲ ಸಮುದಾಯಗಳ ಅಭಿವೃದ್ದಿಗೂ ಆಧ್ಯತೆ ನೀಡಬೇಕು, ಎಲ್ಲ ಸಮುದಾಯಗಳನ್ನು ಸಮಾನತೆಯಿಂದ ನೋಡಬೇಕಾದ ಧರ್ಮ ನನ್ನದು. ಆ ನಿಟ್ಟಿನಲ್ಲಿ ನಾನು ಶಾಸಕನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ ಎಂದು ಹೇಳಿದರು.

ಸಮುದಾಯದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.

ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ತಲಕಾಯಲಬೆಟ್ಟದಲ್ಲಿನ ವಾಲ್ಮೀಕಿ ದೇವಾಲಯದಲ್ಲಿ ಹಾಗೂ ಶಿಡ್ಲಘಟ್ಟ ನಗರದ ಮಯೂರ ವೃತ್ತದಲ್ಲಿನ ಮಹರ್ಷಿ ವಾಲ್ಮೀಕಿ ದೇವಾಲಯದಲ್ಲಿ ಪೂಜೆ ಸಲ್ಲಿಸಲಾಯಿತು. ಪಲ್ಲಕಿಗಳ ಉತ್ಸವ, ಜನಪದ ಕಲಾ ತಂಡಗಳ ಮೆರವಣಿಗೆಯು ನಗರದ ಪ್ರಮುಖ ಬೀದಿಗಳಲ್ಲಿ ನಡೆಯಿತು.

ತಾಲ್ಲೂಕು ಪಂಚಾಯಿತಿ ಇಒ ಜಿ.ಮುನಿರಾಜ, ಕ್ಷೇತ್ರ ಶಿಕ್ಷಣಾಧಿಕಾರಿ ನರೇಂದ್ರ ಕುಮಾರ್, ಸರ್ಕಲ್ ಇನ್ಸ್ ಪೆಕ್ಟರ್ ಎಂ.ಶ್ರೀನಿವಾಸ್, ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಜಿಲ್ಲಾ ಅಧ್ಯಕ್ಷ ಬಂಕ್ ಮುನಿಯಪ್ಪ, ತಾಲ್ಲೂಕು ಅಧ್ಯಕ್ಷ ರಾಮಚಂದ್ರಪ್ಪ, ಉಪಾಧ್ಯಕ್ಷ ರಾಜೇಂದ್ರ, ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ನಾರಾಯಣಸ್ವಾಮಿ, ನಗರ ಸಭೆ ಸದಸ್ಯ ಮಂಜುನಾಥ್, ತಾದೂರು ರಘು, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಎನ್.ಮುನಿಯಪ್ಪ, ಮುತ್ತೂರು ವೆಂಕಟೇಶ್, ಮೇಲೂರು ಕೆ.ಎಸ್.ಗಿರೀಶ್ ನಾಯಕ್, ನಟರಾಜು, ಕೆ.ಶ್ರೀನಾಥ್, ದ್ಯಾವಪ್ಪ, ವೆಂಕಟೇಶ್, ಮುಗಿಲಡಿಪಿ ನಂಜಪ್ಪ ಹಾಜರಿದ್ದರು.

For Daily Updates WhatsApp ‘HI’ to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
error: Content is protected !!