ಇದೇ ಅಕ್ಟೋಬರ್ 17 ರಂದು ಮಹರ್ಷಿ ವಾಲ್ಮೀಕಿ ಜಯಂತಿ

- Advertisement -
- Advertisement -

Sidlaghatta : ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಯಾವುದೋ ಒಂದು ವರ್ಗ ಅಥವ ಪಕ್ಷಕ್ಕೆ ಸೀಮಿತಗೊಳಿಸದೇ ಎಲ್ಲರೂ ಸೇರಿ ಅರ್ಥಪೂರ್ಣವಾಗಿ ಆಚರಿಸಲು ಸಹಕಾರ ನೀಡಬೇಕು ಎಂದು ಶಾಸಕ ಬಿ.ಎನ್.ರವಿಕುಮಾರ್ ಹೇಳಿದರು.

ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಗುರುವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಮಹರ್ಷಿ ವಾಲ್ಮೀಕಿ ಸೇರಿದಂತೆ ವಿವಿಧ ಮಹನೀಯರ ಜಯಂತಿಗಳನ್ನು ವಿಜೃಂಭಣೆಯಿಂದ ಮಾಡುವ ಬದಲಿಗೆ ಅರ್ಥಪೂರ್ಣವಾಗಿ ಆಚರಿಸಿದಾಗ ಮಾತ್ರ ಜಯಂತಿ ಆಚರಣೆಗೆ ಗೌರವ ಬರುತ್ತದೆ ಎಂದರು.

ಸಮುದಾಯದ ಹಿರಿಯ ಮುಖಂಡ, ಜಿ.ಪಂ ಮಾಜಿ ಸದಸ್ಯ ಬಂಕ್ ಮುನಿಯಪ್ಪ ಮಾತನಾಡಿ, ಸ್ತ್ರೀ-ಪುರುಷ ಸರಿಸಮಾನತೆಯೊಂದಿಗೆ ಕಲ್ಯಾಣ ರಾಜ್ಯದ ಆಶಯ ಹೊಂದಿದ್ದ ಮಹರ್ಷಿ ವಾಲ್ಮೀಕಿಯು ರಾಮಾಯಣದಲ್ಲಿ ವಿವಿಧ ಪಾತ್ರಗಳ ಮೂಲಕ ಬದುಕಿನ ಪ್ರತಿ ಹಂತದಲ್ಲೂ ಅನುಸರಿಸಬೇಕಾದ ನೀತಿಯನ್ನು ಬೋಧಿಸಿದ್ದು ಪ್ರತಿಯೊಬ್ಬರೂ ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು. ಇದೇ ಅಕ್ಟೋಬರ್ 17 ರಂದು ನಡೆಯಲಿರುವ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಸಮುದಾಯದ ಮುಖಂಡರು ಶ್ರಮಿಸಬೇಕು ಎಂದರು.

ತಹಶೀಲ್ದಾರ್ ಬಿ.ಎನ್.ಸ್ವಾಮಿ ಮಾತನಾಡಿ, ಕ್ಷೇತ್ರದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯನ್ನು ಈ ಹಿಂದಿನಂತೆ ಅರ್ಥಪೂರ್ಣವಾಗಿ ಆಚರಿಸಲು ತಾಲ್ಲೂಕು ಆಡಳಿತ ಸಂಪೂರ್ಣ ಸಹಕಾರ ನೀಡಲಿದೆ ಎಂದರು.

ಬೆಳಿಗ್ಗೆ 8 ಗಂಟೆಗೆ ತಾಲ್ಲೂಕಿನ ತಲಕಾಯಲಬೆಟ್ಟದಲ್ಲಿರುವ ಮಹರ್ಷಿ ವಾಲ್ಮೀಕಿ ದೇವಾಲಯದಲ್ಲಿ ಗಣ್ಯರಿಂದ ಪೂಜೆ ಸಲ್ಲಿಸಲಾಗುತ್ತದೆ. ನಂತರ ನಗರದ ಮಯೂರ ವೃತ್ತದಲ್ಲಿರುವ ವಾಲ್ಮೀಕಿ ದೇವಾಲಯದಿಂದ ಸಾಂಸ್ಕೃತಿಕ ಕಲಾತಂಡಗಳು ಹಾಗೂ ಪೂರ್ಣಕುಂಭದೊಂದಿಗೆ ಪಲ್ಲಕ್ಕಿಗಳ ಮೆರವಣಿಗೆ ಪ್ರಮುಖ ರಸ್ತೆಗಳ ಮೂಲಕ ಸಾಗಿ ತಾಲ್ಲೂಕು ಕಚೇರಿಯ ಮುಂಭಾಗದಲ್ಲಿನ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೀರ್ಮಾನಿಸಲಾಯಿತು.

ತಾಲ್ಲೂಕು ಪಂಚಾಯಿತಿ ಇಓ ಹೇಮಾವತಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಜಗದೀಶ್, ಸಮುದಾಯದ ಹಿರಿಯ ಮುಖಂಡ ಎನ್.ಮುನಿಯಪ್ಪ, ನಗರಸಭೆ ಪೌರಾಯುಕ್ತ ಮಂಜುನಾಥ್, ಜೆಡಿಎಸ್ ಮುಖಂಡ ತಾದೂರು ರಘು, ಸೇರಿದಂತೆ ಸಮುದಾಯದ ಮುಖಂಡರು ಹಾಜರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -
Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!