ಮಹರ್ಷಿ ವಾಲ್ಮೀಕಿ ಜಯಂತಿ: ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ತಹಶೀಲ್ದಾರ್ ಕರೆ

Sidlaghatta : ಶಿಡ್ಲಘಟ್ಟ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಸೋಮವಾರ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ತಹಶೀಲ್ದಾರ್ ಗಗನಸಿಂಧು, ಮಹರ್ಷಿ ವಾಲ್ಮೀಕಿ ಅವರು ತಮ್ಮ ಜ್ಞಾನ, ತಪಸ್ಸು ಹಾಗೂ ಆದರ್ಶಗಳ ಮೂಲಕ ಸಮಾಜಕ್ಕೆ ಅಮೂಲ್ಯ ಕೊಡುಗೆ ನೀಡಿದ್ದಾರೆ. ಅವರ ಜೀವನ ಮತ್ತು ಚಿಂತನೆಗಳು ಇಂದಿನ ಸಮಾಜಕ್ಕೂ ಪ್ರಸ್ತುತವಾಗಿದ್ದು, ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಚಿಮುಲ್ ನಿರ್ದೇಶಕ ಬಂಕ್ ಮುನಿಯಪ್ಪ ಮಾತನಾಡಿ, ಮಹರ್ಷಿ ವಾಲ್ಮೀಕಿ ಅವರು ರಚಿಸಿದ ರಾಮಾಯಣವು ಭಾರತೀಯ ಸಂಸ್ಕೃತಿ, ಪರಂಪರೆ ಹಾಗೂ ನೈತಿಕ ಮೌಲ್ಯಗಳ ಪ್ರತೀಕವಾಗಿದೆ. ಅವರ ಸಂದೇಶಗಳನ್ನು ಯುವಜನರಿಗೆ ತಲುಪಿಸುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ನಗರಸಭೆ ಪೌರಾಯುಕ್ತೆ ಜಿ. ಅಮೃತ, ರೇಷ್ಮೆ ಇಲಾಖೆ ಸಹಾಯಕ ನಿರ್ದೇಶಕ ಅಕ್ಮಲ್ ಪಾಷ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರವಿ, ಸಮಾಜ ಕಲ್ಯಾಣ ಇಲಾಖೆಯ ಜಗದೀಶ್, ಸಿಡಿಪಿಒ ವಿದ್ಯಾ ವಸ್ತ್ರದ್, ಕಸಬಾ ಕಂದಾಯ ನಿರೀಕ್ಷಕ ವೇಣುಗೋಪಾಲ್, ವಕೀಲರ ಸಂಘದ ತಾಲ್ಲೂಕು ಅಧ್ಯಕ್ಷ ನಾರಾಯಣಸ್ವಾಮಿ, ವಾಲ್ಮೀಕಿ ಸಂಘದ ಅಧ್ಯಕ್ಷ ರಾಮಚಂದ್ರಪ್ಪ, ಮಂಜುನಾಥ್, ಮುತ್ತೂರು ವೆಂಕಟೇಶ್, ಮುಗಿಲಡಿಪಿ ನಂಜಪ್ಪ, ನಾರಾಯಣಸ್ವಾಮಿ ಹಾಗೂ ಮುನೀಂದ್ರ ಉಪಸ್ಥಿತರಿದ್ದರು.
ಕಳೆದ ವರ್ಷದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಹಾಗೂ ಇತ್ತೀಚಿನ ಗಾಂಧಿ, ಶಾಸ್ತ್ರಿ ಜಯಂತಿ ಆಚರಣೆ ವರದಿಗಳನ್ನೂ ಓದಿ.

For Daily Updates WhatsApp ‘HI’ to 7406303366
Summary in English
Maharshi Valmiki Jayanti was celebrated at the Sidlaghatta taluk office hall on Monday. Tahsildar Gaganasindhu said Valmiki made a valuable contribution to society through his knowledge, penance and ideals, and that everyone should adopt his ideals in life. Bunk Muniyappa, a director of the Kolar-Chikkaballapur Milk Union (CHIMUL), said the Ramayana reflects Indian culture, heritage and moral values, and urged people to carry Valmiki’s message to young people. Municipal Commissioner G. Amrutha, officials of the sericulture, agriculture and social welfare departments, the CDPO (Child Development Project Officer), the revenue inspector and members of the Valmiki Sangha and the lawyers’ association attended.
Be a reporter
ಊರಿನ ಸುದ್ದಿ, ಫೋಟೋ ಕಳುಹಿಸಿ.
Send news



