ಶಿಡ್ಲಘಟ್ಟ ತಾಲ್ಲೂಕಿನ ಮಳಮಾಚನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘದ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ 2 ಲಕ್ಷ ರೂ ಅನುದಾನ ಮಂಜೂರಾತಿ ಪತ್ರ ವಿತರಣೆ ಮಾಡಲಾಯಿತು. ಜಿಲ್ಲಾ ನಿರ್ದೇಶಕ ಬಿ.ವಸಂತ್, ಯೋಜನಾಧಿಕಾರಿ ಪ್ರಕಾಶ್‌ಕುಮಾರ್, ತಾಲ್ಲೂಕು ಪಂಚಾಯತಿ ಅಧ್ಯಕ್ಷ ಎಂ.ಕೆ.ರಾಜಶೇಖರ್, ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಜಿ.ಪ್ರಕಾಶ್, ಉಪಾಧ್ಯಕ್ಷ ಎನ್.ಟಿ.ನಾರಾಯಣಸ್ವಾಮಿ ಹಾಜರಿದ್ದರು