Home News ವಿಶ್ವ ಮಲೇರಿಯಾ ದಿನಾಚರಣೆ ಅಂಗವಾಗಿ ಜಾಥಾ ಕಾರ್ಯಕ್ರಮ

ವಿಶ್ವ ಮಲೇರಿಯಾ ದಿನಾಚರಣೆ ಅಂಗವಾಗಿ ಜಾಥಾ ಕಾರ್ಯಕ್ರಮ

0

ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಶುಕ್ರವಾರ ವಿಶ್ವ ಮಲೇರಿಯಾ ದಿನಾಚರಣೆ ಅಂಗವಾಗಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ ಮಾತನಾಡಿದರು.

 ಪ್ರತಿಯೊಬ್ಬರೂ ತಮ್ಮ ಮನೆಯ ಸುತ್ತ, ಮುತ್ತ ಕೊಳಚೆ ನೀರು ನಿಂತುಕೊಳ್ಳದಂತೆ ಜಾಗೃತಿವಹಿಸುವುದು, ಸೊಳ್ಳೆ ಉತ್ಪತ್ತಿಯಾಗದಂತೆ ನಿಗಾವಹಿಸುವುದು ಹಾಗೂ ಸೊಳ್ಳೆ ಕಡಿತಕ್ಕೆ ಒಳಗಾಗದಂತೆ ರಕ್ಷಣೆ ಮಾಡಿಕೊಳ್ಳುವುದರಿಂದ ಮಲೇರಿಯಾ ತಡೆಗಟ್ಟಬಹುದು ಎಂದು ಅವರು ತಿಳಿಸಿದರು.

 ಸಾಂಕ್ರಾಮಿಕ ಕಾಯಿಲೆಗಳಲ್ಲಿ ಮಲೇರಿಯಾ ಒಂದು. ಸಾಂಕ್ರಾಮಿಕ ಕಾಯಿಲೆಗಳು ಸೊಳ್ಳೆಗಳಿಂದ ಹರಡುತ್ತವೆ.ಅನಾಫಿಲಸ್‌ ಜಾತಿಗೆ ಸೇರಿದ ಹೆಣ್ಣು ಸೊಳ್ಳೆಗಳಿಂದ ಮಲೇರಿಯಾ ಸಾಂಕ್ರಾಮಿಕ ಕಾಯಿಲೆ ಬರುತ್ತದೆ. ಮಲೇರಿಯಾ ಕಾಯಿಲೆಯ ಬಗ್ಗೆ ಜನರಿಗೆ ಅರಿವು ಮೂಡಿಸುವ ಉದ್ದೇಶದಿಂದ ಆರೋಗ್ಯ ಇಲಾಖೆ ವಿಶ್ವ ಮಲೇರಿಯಾ ದಿನಾಚರಣೆಯನ್ನು ಆಚರಿಸುವ ಮೂಲಕ ಜನರಿಗೆ ಅರಿವು ಮೂಡಿಸುವ ಕಾರ್ಯವನ್ನು ಮಾಡುತ್ತಿದೆ. ಆರೋಗ್ಯ ಇಲಾಖೆಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಮನೆಮನೆಗೆ ತೆರಳಿ ಲಾರ್ವಾ ಪರೀಕ್ಷೆ ಮಾಡಿ, ವಾರಕ್ಕೊಮ್ಮೆ ಒಣಗಲು ದಿನವನ್ನು ಆಚರಿಸುವಂತೆ ತಿಳಿಹೇಳುವರು ಎಂದರು.

 ಹರಿಯದೆ ನಿಂತುಕೊಳ್ಳುವ ಕೊಳಚೆ ನೀರು, ಮನೆಯ ಸುತ್ತಮುತ್ತಲಿನ ಪರಿಸರ ಸ್ವಚ್ಛತೆ ಇಲ್ಲದ ಸ್ಥಳಗಳಲ್ಲಿ ಮಲೇರಿಯಾ ಹರಡುವ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ಸೊಳ್ಳೆ ಒಬ್ಬನಿಂದ ಮತ್ತೊಬ್ಬನಿಗೆ ಕಡಿಯುವ ಮೂಲಕ ಮಲೇರಿಯಾ ಸಾಂಕ್ರಾಮಿಕ ಕಾಯಿಲೆ ಬರುತ್ತದೆ. ಇಂತಹ ಸಂದರ್ಭದಲ್ಲಿ ವ್ಯಕ್ತಿಗೆ ಚಳಿ-ಜ್ವರ ಬರುವ ಲಕ್ಷ ಣ ಕಾಣಿಸಿಕೊಳ್ಳುತ್ತದೆ. ಕೂಡಲೇ ಹತ್ತಿರದಲ್ಲಿರುವ ಆಸ್ಪತ್ರೆಗೆ ಹೋಗಿ ವೈದ್ಯರಿಂದ ರಕ್ಷ ಪರೀಕ್ಷೆ ಮಾಡಿಸಿಕೊಳ್ಳುವುದರ ಜತೆಯಲ್ಲಿ ಅವರ ಸೂಚನೆಯಂತೆ ಚಿಕಿತ್ಸೆ ಗೆ ಒಳಗಾಗಬೇಕು ಎಂದು ಸಲಹೆ ನೀಡಿದರು.

 ಸಿ.ಡಿ.ಪಿ.ಒ ಅಧಿಕಾರಿ ನಾಗಮಣಿ, ಸರ್ಕಾರಿ ಆಸ್ಪತ್ರೆ ಮೇಲ್ವಿಚಾರಕಿ ಮುನಿಲಕ್ಷ್ಮಮ್ಮ, ವಿಜಯಮ್ಮ, ಲೋಕೇಶ್, ಕೀರ್ತಿ, ಟಿ.ಟಿ.ನರಸಿಂಹಪ್ಪ ಹಾಜರಿದ್ದರು.