Home News ಮಳ್ಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಮಳ್ಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

0
Mallur Grama Panchayat Election

Mallur, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಮಳ್ಳೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಚಂದ್ರಕಲಾ ಲಕ್ಷ್ಮಿನಾರಾಯಣ್ ಹಾಗು ಉಪಾಧ್ಯಕ್ಷರಾಗಿ ಪದ್ಮಾ ಮಂಜುನಾಥ್ ಆಯ್ಕೆಯಾಗಿದ್ದಾರೆ.

ಒಟ್ಟು 15 ಸದಸ್ಯ ಬಲ ಹೊಂದಿರುವ ಮಳ್ಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷಸ್ಥಾನ ಎಸ್‌ಟಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮೀಸಲು ನಿಗದಿಪಡಿಸಲಾಗಿದ್ದು ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಕೇವಲ ಒಂದೊಂದು ನಾಮಪತ್ರ ಸಲ್ಲಿಕೆಯಾದ ಹಿನ್ನಲೆಯಲ್ಲಿ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಚಂದ್ರಕಲಾ ಲಕ್ಷ್ಮಿನಾರಾಯಣ್ ಹಾಗು ಉಪಾಧ್ಯಕ್ಷರಾಗಿ ಪದ್ಮಾ ಮಂಜುನಾಥ್ ರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ತಹಶೀಲ್ದಾರ್ ಬಿ.ಎನ್.ಸ್ವಾಮಿ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು.

ಗ್ರಾ.ಪಂ ಮಾಜಿ ಅಧ್ಯಕ್ಷರಾದ ಬೈರೇಗೌಡ, ಶ್ರೀಧರ್, ಸದಸ್ಯರಾದ ನಾಗವೇಣಿ ಸತೀಶ್ಂಪಿಸಿಎಸ್ ಅಧ್ಯಕ್ಷ ಬೈರೇಗೌಡ, ಮಾಜಿ ಅಧ್ಯಕ್ಷ ಕೆಂಪೇಗೌಡ, ಮುಖಂಡರಾದ ಪಿ.ಎಂ.ಶಿವಕುಮಾರ್ ಹಾಜರಿದ್ದರು

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

Exit mobile version