25.1 C
Sidlaghatta
Wednesday, January 14, 2026

ಮಳ್ಳೂರು ಆರೋಗ್ಯ ಕೇಂದ್ರದಲ್ಲಿ ಜನಔಷಧಿ ಕೇಂದ್ರ ಉದ್ಘಾಟನೆ

- Advertisement -
- Advertisement -

ಶಿಡ್ಲಘಟ್ಟ ತಾಲ್ಲೂಕಿನ ಮಳ್ಳೂರು ಗ್ರಾಮದ ಆರೋಗ್ಯ ಕೇಂದ್ರದಲ್ಲಿ ಪ್ರಧಾನಮಂತ್ರಿ ಜನಔಷಧಿ ಕೇಂದ್ರವನ್ನು ಡಾ. ಪೃಥ್ವಿಶ್ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದಲ್ಲಿ ಜನರು ದಿನನಿತ್ಯದ ಒತ್ತಡದ ಬದುಕಿನ ನಡುವೆ ರಕ್ತದೊತ್ತಡ, ಮಧುಮೇಹ ಸೇರಿದಂತೆ ಹಲವು ದೀರ್ಘಕಾಲಿಕ ರೋಗಗಳಿಗೆ ತುತ್ತಾಗುತ್ತಿರುವುದನ್ನು ಉಲ್ಲೇಖಿಸಿದರು. ಇಂತಹ ಕಾಯಿಲೆಗಳಿಗೆ ನಿಯಮಿತವಾಗಿ ಔಷಧಿ ಸೇವಿಸಬೇಕಾದ ಪರಿಸ್ಥಿತಿಯಲ್ಲಿ, ದುಬಾರಿ ಔಷಧಿಗಳ ವೆಚ್ಚ ಬಡ ಕುಟುಂಬಗಳಿಗೆ ಹೆಚ್ಚಿನ ಹೊರೆ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಗುಣಮಟ್ಟದ ಮತ್ತು ಕೈಗೆಟುಕುವ ದರದ ಔಷಧಿಗಳನ್ನು ಸಾರ್ವಜನಿಕರಿಗೆ ಲಭ್ಯ ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಜನಔಷಧಿ ಯೋಜನೆಯನ್ನು ಜಾರಿಗೆ ತಂದಿದೆ ಎಂದು ಅವರು ಹೇಳಿದರು. ಜನರು ಇದರ ಸದುಪಯೋಗ ಪಡೆದುಕೊಂಡರೆ ಆರೋಗ್ಯ ವೆಚ್ಚ ಗಣನೀಯವಾಗಿ ಕಡಿಮೆಯಾಗಲಿದೆ ಎಂದು ಅಭಿಪ್ರಾಯಪಟ್ಟರು.

ರೇಷ್ಮೆ ಮಂಡಳಿ ನಿರ್ದೇಶಕ ಮಳ್ಳೂರು ಶಿವಣ್ಣ ಮಾತನಾಡಿ, ಈ ಭಾಗದ ಜನರಲ್ಲಿ ಬಹುತೇಕರು ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಉದ್ಯಮದಲ್ಲಿ ತೊಡಗಿಸಿಕೊಂಡಿರುವುದರಿಂದ 50 ವರ್ಷ ಮೇಲ್ಪಟ್ಟವರಲ್ಲಿ ಉಸಿರಾಟ ತೊಂದರೆ, ಮಧುಮೇಹ ಮತ್ತು ರಕ್ತದೊತ್ತಡದಂತಹ ಕಾಯಿಲೆಗಳು ಸಾಮಾನ್ಯವಾಗಿವೆ ಎಂದರು. ಆಸ್ಪತ್ರೆಗಳಲ್ಲಿ ದೊರೆಯುವ ಔಷಧಿಗಳ ಬೆಲೆ ದುಬಾರಿಯಾಗಿರುವುದರಿಂದ ಕೆಲವು ಸಂದರ್ಭಗಳಲ್ಲಿ ಜನರು ಔಷಧಿ ಖರೀದಿ ಮಾಡಲು ಸಾಧ್ಯವಾಗದೇ ರೋಗ ಗಂಭೀರಗೊಂಡು ಸಾವಿನ ಪ್ರಕರಣಗಳು ಸಂಭವಿಸಿರುವುದನ್ನು ಹೇಳಿದರು. ಈಗ ಜನಔಷಧಿ ಕೇಂದ್ರ ಆರಂಭವಾಗಿರುವುದರಿಂದ ಬಡವರಿಗೆ ಬಹಳ ಉಪಯೋಗವಾಗಲಿದೆ ಎಂದು ಅವರು ತಿಳಿಸಿದರು. ಜೊತೆಗೆ ನಿಯಮಿತ ಆರೋಗ್ಯ ತಪಾಸಣೆ ಅಗತ್ಯವಿದೆ ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಜ್ಯೋತಿ ಪೃಥ್ವೀಶ್, ಡಾ. ಕುಲಕರ್ಣಿ (ಮುದ್ದೇನಹಳ್ಳಿ), ಆರೋಗ್ಯ ಭಾರತಿಯ ರಾಜ್ಯ ಖಜಾಂಚಿ ಗಂಗಾಧರ್, ಚಂದ್ರಶೇಖರ್, ಆಯುರ್ವೇದ ವೈದ್ಯರಾದ ಡಾ. ನಟರಾಜ್, ಜನಔಷಧಿ ಕೇಂದ್ರದ ವಿಜಯಕುಮಾರ್, ಸ್ವಾಮಿ ವಿವೇಕಾನಂದ ಶಾಲೆಯ ಪ್ರಾಂಶುಪಾಲ ಸುರೇಶ್, ಜಿಲ್ಲಾಮಟ್ಟದ ಶಾಶ್ವತ ನೀರಾವರಿ ಹೋರಾಟ ಸಮಿತಿಯ ಉಪಾಧ್ಯಕ್ಷ ಮಳ್ಳೂರು ಹರೀಶ್, ಗ್ರಾಮಾಭಿವೃದ್ಧಿ ಸಂಸ್ಥೆಯ ಕಾರ್ಯದರ್ಶಿ ರಮೇಶ್ ಕೋಟೆ ಮತ್ತು ಹಲವರು ಉಪಸ್ಥಿತರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!