Home News ಜಡಿ ಮಳೆಗೆ ರೇಷ್ಮೆ ಹುಳು ಸಾಕಾಣಿಕೆ ಮನೆ ಕುಸಿತ

ಜಡಿ ಮಳೆಗೆ ರೇಷ್ಮೆ ಹುಳು ಸಾಕಾಣಿಕೆ ಮನೆ ಕುಸಿತ

0
Mandous Cyclone Rain Sidlaghatta House Collapse

Kannamangala, Sidlaghatta : ಮಾಂಡೋಸ್ ಚಂಡಮಾರುತದ ಪ್ರಭಾವದಿಂದ ಕಳೆದ ನಾಲ್ಕು ದಿನಗಳಿಂದ ಬಿಟ್ಟು ಬಿಡದೆ ಸುರಿದ ಜಡಿ ಮಳೆಗೆ ತಾಲ್ಲೂಕಿನ ಕನ್ನಮಂಗಲ ಗ್ರಾಮದ ಲಕ್ಷ್ಮಣ ಅವರ ರೇಷ್ಮೆ ಹುಳು ಸಾಕಾಣಿಕೆ ಮನೆ ಮಂಗಳವಾರ ರಾತ್ರಿ ಕುಸಿದು, ಮನೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.

ಸುಮಾರು 20 ವರ್ಷಗಳ ಹಿಂದೆ ಕಟ್ಟಿಸಿದ್ದ ಮನೆ ಕುಸಿದು ಬಿದ್ದು ಹಾನಿಯಾಗಿದೆ. ಮನೆಯಲ್ಲಿ ಮಲಗಿದ್ದ ದಂಪತಿ ಅಪಾಯದಿಂದ ಪಾರಾಗಿದ್ದಾರೆ. ರೇಷ್ಮೆ ಹುಳು ಸಾಕಾಣಿಕೆ ಮನೆಯ ಗೋಡೆ ಕುಸಿದು ಬಿದ್ದಿದ್ದರಿಂದ ಚಾವಣಿಯ ಸಿಮೆಂಟ್ ಶೀಟ್‌ಗಳು ಸಂಪೂರ್ಣ ಕಿತ್ತು ಹೋಗಿವೆ. ಮನೆ ಕಳೆದುಕೊಂಡ ಲಕ್ಷ್ಮಣ್ ದಂಪತಿ, ಬೇರೊಂದು ಮನೆ ಕಟ್ಟಿಕೊಳ್ಳಲು ಸರ್ಕಾರದಿಂದ ಪರಿಹಾರಕ್ಕೆ ಕೋರಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version