ತಾಲ್ಲೂಕಿನ ಹಂಡಿಗನಾಳ ಗ್ರಾಮ ಪಂಚಾಯಿತಿಯಿಂದ ವಿಭಿನ್ನವಾಗಿ ಮಾಸ್ಕ್ ದಿನವನ್ನು ಆಚರಿಸಲಾಯಿತು. ಕೇವಲ ಜಾಥಾ ನಡೆಸದೇ, ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಸಿಬ್ಬಂದಿ ಪ್ರತಿ ಮನೆಗೂ ಹೋಗಿ ಅರಿವು ಮೂಡಿಸಿದರು.
ಹಂಡಿಗನಾಳ ಗ್ರಾಮದಲ್ಲಿ ಮಾಸ್ಕ್ ದಿನಾಚರಣೆ ಅಂಗವಾಗಿ ಕೊರೊನಾ ಮುನ್ನೆಚ್ಚರಿಕೆ ಕ್ರಮಗಳಾದ ಮಾಸ್ಕ್ ಧರಿಸುವುದು, ಸ್ಯಾನಿಟೈಜರ್ ಬಳಕೆ, ಕೈತೊಳೆಯುವುದು, ನೈರ್ಮಲ್ಯತೆಯನ್ನು ಕಾಪಾಡುವುದು ಹಾಗೂ ಅಂತರ ಕಾಯ್ದುಕೊಳ್ಳುವ ಬಗ್ಗೆ ಪ್ರಾತ್ಯಕ್ಷಿಕೆಯ ಮೂಲಕ ಜನರಲ್ಲಿ ತಿಳುವಳಿಕೆಯನ್ನು ಮೂಡಿಸಲಾಯಿತು.
ಗ್ರಾಮ ಪಂಚಾಯಿತಿಯ ವತಿಯಿಂದ ಮಾಸ್ಕ್ ವಿತರಿಸಿದರು. ಆಗಿಂದಾಗ್ಗೆ ಕೈ ತೊಳೆಯುವುದು, ಸ್ಯಾನಿಟೈಜರ್ ಬಳಕೆ, ಅಂತರ ಕಾಯ್ದುಕೊಳ್ಳುವ ಅಗತ್ಯತೆಯನ್ನು ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಗೃಹಿಣಿಯರಿಗೆ ತಿಳಿಸಿದರು.
ಪಿ.ಡಿ.ಒ ಅಂಜನ್ ಕುಮಾರ್, ಸದಸ್ಯ ಎ.ಎಂ.ತ್ಯಾಗರಾಜ್, ಕಾರ್ಯದರ್ಶಿ ಶ್ರೀನಿವಾಸ್, ಮೋಹನ್, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಹಾಜರಿದ್ದರು.

- Advertisement -
- Advertisement -
- Advertisement -







