ತಾಲ್ಲೂಕಿನ ಮೇಲೂರು ಗ್ರಾಮದಲ್ಲಿ ಶನಿವಾರ ಟಾಸ್ಕ್ ಫೋರ್ಸ್ ಸಿಬ್ಬಂದಿಯ ಸಭೆ ನಡೆಸಿ ತಾಲ್ಲೂಕು ಪಂಚಾಯಿತಿ ಇಓ ಚಂದ್ರಕಾಂತ್ ಮಾತನಾಡಿದರು.
ಕೊರೋನಾ ಮೊದಲನೆ ಅಲೆಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಸೋಂಕಿತರು ಕಂಡು ಬರಲಿಲ್ಲ. ಆದರೆ ಇದೀಗ ಎರಡನೇ ಅಲೆಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿಯೇ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ.
ಹೋಮ್ ಐಸೋಲೇಷನ್ ನಲ್ಲಿರುವ ಸೋಂಕಿತರ ನಿರ್ಲಕ್ಷದಿಂದಾಗಿ ಗ್ರಾಮೀಣ ಪ್ರದೇಶಗಳಲ್ಲಿ ದಿನೇ ದಿನೇ ಕೊರೋನಾ ಪ್ರಕರಣಗಳು ಹೆಚ್ಚುತ್ತಿದ್ದು ಸೋಂಕಿತರನ್ನು ಕಡ್ಡಾಯವಾಗಿ ಕೋವಿಡ್ ಕೇರ್ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡುವಂತಾಗಬೇಕು ಎಂದು ಹೇಳಿದರು.
ಸೋಂಕಿತರು ಮನೆಯಲ್ಲಿಯೇ ಐಸೋಲೇಷನ್ ಆಗುವುದರಿಂದ ಕುಟುಂಬದ ಬೇರೆಲ್ಲಾ ಸದಸ್ಯರಿಗೂ ಸೋಂಕು ಹರಡುವ ಸಾಧ್ಯತೆ ಹೆಚ್ಚು. ಹಾಗಾಗಿ ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್‌ಗೆ ದಾಖಲಿಸುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಆರ್.ಎ.ಉಮೇಶ್, ಪಿಡಿಓ ಕಾತ್ಯಾಯಿನಿ ಹಾಗೂ ಸದಸ್ಯರು ಹಾಜರಿದ್ದರು.
Follow ನಮ್ಮ ಶಿಡ್ಲಘಟ್ಟ on
Facebook: https://www.facebook.com/sidlaghatta
Twitter: https://twitter.com/hisidlaghatta
Instagram: https://www.instagram.com/sidlaghatta
Telegram: https://t.me/Sidlaghatta
WhatsApp: https://wa.me/917406303366?text=Hi