Home News ಮೇಲೂರಿನ ಧರ್ಮರಾಯಸ್ವಾಮಿ ದ್ರೌಪತಮ್ಮನವರ ಹೂವಿನ ಕರಗ ಮಹೋತ್ಸವ

ಮೇಲೂರಿನ ಧರ್ಮರಾಯಸ್ವಾಮಿ ದ್ರೌಪತಮ್ಮನವರ ಹೂವಿನ ಕರಗ ಮಹೋತ್ಸವ

0
Melur Dharmarayaswamy Droupadamma Karaga

ಶಿಡ್ಲಘಟ್ಟ ತಾಲ್ಲೂಕಿನ ಮೇಲೂರು ಗ್ರಾಮದಲ್ಲಿ ಶುಕ್ರವಾರ ರಾತ್ರಿ ಧರ್ಮರಾಯಸ್ವಾಮಿ ದ್ರೌಪತಮ್ಮನವರ 34 ನೇ ವರ್ಷದ ಹೂವಿನ ಕರಗವನ್ನು ಶ್ರದ್ಧಾಭಕ್ತಿಯಿಂದ ಆಚರಿಸಿದರು.

ಕರಗದ ಪ್ರಯುಕ್ತ ಆರ್ಕೆಸ್ಟ್ರಾ, ವಾಲಗ, ತಮಟೆ ಮತ್ತು ವಾದ್ಯವೃಂದವನ್ನು ಆಯೋಜಿಸಲಾಗಿತ್ತು. ರಾತ್ರಿಯಿಡೀ ಕರಗವನ್ನು ಹೊತ್ತು ತಮಟೆಯ ವಾದನದೊಂದಿಗೆ ಊರೆಲ್ಲಾ ಸುತ್ತಿದಾಗ ದಾರಿಯುದ್ದಕ್ಕೂ ಮಲ್ಲಿಗೆ ಹೂಗಳನ್ನು ಅರ್ಪಿಸಿ, ಆರತಿ ಬೆಳಗುತ್ತಿದ್ದರು. ಕೆಲವೆಡೆ ಕರಗದ ಆಗಮನಕ್ಕಾಗಿ ರಸ್ತೆಯ ಮೇಲೆಲ್ಲಾ ರಂಗವಲ್ಲಿಯನ್ನು ಬಿಡಿಸಲಾಗಿತ್ತು.

ಹೂವಿನ ಕರಗ ಮಲ್ಲಿಗೆಮಯ ಕಳಸದ ಮೆರವಣಿಗೆ. ಪರಿಮಳಯುಕ್ತ ಮಲ್ಲಿಗೆ ಹೂವಿಂದ ಅಲಂಕರಿಸಲಾದ ಕರಗವು ಸುವಾಸನೆ ಬೀರುತ್ತಾ ಅಲೌಕಿಕವಾದ ಸನ್ನಿವೇಶವನ್ನು ಸೃಷ್ಟಿಸುತ್ತದೆ. ಹೂವಿನ ಕರಗಕ್ಕೂ ಮೊದಲು ಅನೇಕ ಧಾರ್ಮಿಕ ವಿಧಿ ವಿಧಾನಗಳು ಕರಗದ ಕುಂಟೆ ಹಾಗೂ ಶಕ್ತಿ ಪೀಠಗಳಲ್ಲಿ ನಡೆಯುತ್ತವೆ. ವೀರಕುಮಾರರು, ಗೌಡರು, ಗಣಾಚಾರಿ, ಘಂಟೆಪೂಜಾರರು ಹಾಗೂ ಚಾಕರಿದಾರರು ಶಕ್ತಿಪೀಠದಲ್ಲಿ ಕರಗಕರ್ತ ಪೂಜಾರಿಯನ್ನು ಕರಗ ಧರಿಸುವುದಕ್ಕೆ ಧಾರ್ಮಿಕ ಸಂಪ್ರದಾಯಗಳನ್ನು ಅಣಿಗೊಳಿಸುವರು.

ಹಾಲು ಬಣ್ಣದ ಸುವಾಸನೆ ಬೀರುವ ಸೌಂದರ್ಯದ ಹೂ ಮಲ್ಲಿಗೆ ಕರಗ ಕಳಸವೂ ಸೇರಿದಂತೆ ಎಲ್ಲೆಡೆ ಸಲ್ಲುತ್ತದೆ. ವೀರಕುಮಾರರ ಹಾರಗಳಿಂದ ಹಿಡಿದು ಕರಗದ ಎಲ್ಲಾ ಉತ್ಸವಗಳಲ್ಲೂ ಮಲ್ಲಿಗೆ ಹೂಗಳಿಗೆ ಮೊದಲ ಆದ್ಯತೆ.

ಗ್ರಾಮದ ಧರ್ಮರಾಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆಯನ್ನು ಶಾತ್ರೋಕ್ತವಾಗಿ ಜರುಗಿಸಲಾಯಿತು. ಶ್ರೀ ಧರ್ಮರಾಯಸ್ವಾಮಿ ಭಕ್ತಮಂಡಳಿ ವಹ್ನೀಕುಲ ಕ್ಷತ್ರಿಯರ ಸಂಘದ ಸದಸ್ಯರು, ಗ್ರಾಮಸ್ಥರು ಹಾಜರಿದ್ದರು.

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version