20.1 C
Sidlaghatta
Thursday, September 12, 2024

ಮೇಲೂರು ಗ್ರಾಮದೇವತೆ ಗಂಗಾದೇವಿಯ ಜಾತ್ರಾ ಮಹೋತ್ಸವ

- Advertisement -
- Advertisement -

ಶಿಡ್ಲಘಟ್ಟ ತಾಲ್ಲೂಕಿನ ಮೇಲೂರು ಅತ್ಯಂತ ಪುರಾತನ ಗ್ರಾಮದೇವತೆ ಗಂಗಾದೇವಿಯ ಜಾತ್ರಾ ಮಹೋತ್ಸವವು ಮಂಗಳವಾರ ವಿಜೃಂಭಣೆಯಿಂದ ನಡೆಯಿತು. ಮೇಲೂರು ಗ್ರಾಮದ ಪುರಾಣ ಪ್ರಸಿದ್ಧ ಗಂಗಾದೇವಿ ಜಾತ್ರೆಯು ನಾಲ್ಕುದಿನಗಳ ಕಾಲ ನಡೆಯಲಿದ್ದು, ಮಂಗಳವಾರದಿಂದ ಪ್ರಾರಂಭಗೊಂಡಿದೆ. ಶನಿವಾರ ಬ್ರಹ್ಮರಥೋತ್ಸವದೊಂದಿಗೆ ಜಾತ್ರಾ ಮಹೋತ್ಸವವು ಕೊನೆಗೊಳ್ಳಲಿದೆ.

ದೇವರಿಗೆ ವಿವಿಧ ಅಲಂಕಾರಗಳೊಂದಿಗೆ ಹಾಗೂ ಪೂಜೆಯೊಂದಿಗೆ ಪ್ರಾರಂಭವಾದ ಜಾತ್ರಾ ಮಹೋತ್ಸವದಲ್ಲಿ ಗಾರ್ಡಿ ಬೊಂಬೆ, ಕೀಲುಕುದುರೆ ಮತ್ತು ವಿವಿಧ ವೇಷಭೂಷಣಗಳು ವಾದ್ಯ ವೃಂದದೊಂದಿಗೆ ಗಮನಸೆಳೆದವು.

ವಾಲ್ಮೀಕಿ ಮತಸ್ಥರಿಂದ ಪ್ರತಿ ವರ್ಷ ನಡೆಸುವ ಸೊಪ್ಪಿನ ವ್ರತಕ್ಕೆ ಹಲವಾರು ಮಂದಿ ಭಕ್ತರು ಸಾಕ್ಷಿಯಾದರು. ಅಮ್ಮನವರ ದೀಪೋತ್ಸವಕ್ಕೆ ಸುತ್ತಮುತ್ತಲಿನ ಗ್ರಾಮಗಳಾದ ಕೇಶವಾರ, ಹಂಡಿಗನಾಳ, ಮಳ್ಳೂರು, ಕಂಬದಹಳ್ಳಿ, ಚೌಡಸಂದ್ರ, ಗಂಗನಹಳ್ಳಿ ಮುಂತಾದೆಡೆಯಿಂದ ನೂರಾರು ಮಂದಿ ಗ್ರಾಮಸ್ಥರು ಆಗಮಿಸಿದ್ದರು.

ರಾತ್ರಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಭಾಗಿಯಾದರು. ನಂತರ ಗ್ರಾಮದಲ್ಲಿ ಏರ್ಪಡಿಸಲಾಗಿದ್ದ ವಾದ್ಯಗೋಷ್ಠಿಯು ಎಲ್ಲರನ್ನೂ ಮನರಂಜಿಸಿತು. ಈ ಸಂದರ್ಭದಲ್ಲಿ ದೇವಾಲಯದಲ್ಲಿ ಗಂಗಾದೇವಿಯನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ಗ್ರಾಮದ ಪ್ರತಿಯೊಂದು ಬೀದಿಯನ್ನೂ ದೀಪಗಳಿಂದ ಅಲಂಕರಿಸಲಾಗಿತ್ತು. ದೇವಾಲಯವನ್ನೂ ಸಹ ವಿದ್ಯುತ್ ದೀಪಗಳಿಂದ ಸಿಂಗರಿಸಲಾಗಿತ್ತು.

ಬುಧವಾರ ಬೆಳಗಿನ ಜಾವ ದೀಪಾರತಿಗಳು ನಡೆದವು. ಸುತ್ತಮುತ್ತಲಿನ ಗ್ರಾಮಗಳಿಂದ ಆಗಮಿಸಿದ್ದ ನೂರಾರು ಮಹಿಳೆಯರು ತಂಬಿಟ್ಟು ದೀಪಗಳನ್ನು ತಂದು ದೇವಿಗೆ ಬೆಳಗಿ ಪೂಜೆ ಸಲ್ಲಿಸಿದರು. ವಿವಿಧ ಗ್ರಾಮಗಳಿಂದ ಆಗಮಿಸಿದ ಭಕ್ತರಿಗೆ ಮೇಲೂರಿನ ಗ್ರಾಮಸ್ಥರು ಸ್ವಾಗತವನ್ನು ಕೋರಿ, ಮಜ್ಜಿಗೆ, ಪಾನಕ ಮತ್ತು ಹೆಸರುಬೇಳೆ ನೀಡಿ ಸತ್ಕರಿಸಿದುದು ಗ್ರಾಮಗಳ ನಡುವಿನ ಭಾವೈಕ್ಯತೆಯನ್ನು ಸಾರಿತು.

“ನಮ್ಮ ಮೇಲೂರು ಗ್ರಾಮದ ಅಧಿದೇವತೆ ಗಂಗಮ್ಮ ತಾಯಿಯು ಮಳೆ ಬೆಳೆಯನ್ನು ನೀಡಿ ಶಾಂತಿ ನೆಮ್ಮದಿಯನ್ನು ಕರುಣಿಸಲೆಂದು ಪ್ರತಿವರ್ಷ ಜಾತ್ರೆಯನ್ನು ವಿಜೃಂಭಣೆಯಿಂದ ಆಚರಿಸುತ್ತೇವೆ. ಸುತ್ತಲಿನ ಹಲವಾರು ಗ್ರಾಮಗಳಿಂದ ಆಗಮಿಸುವ ಭಕ್ತರು ಪೂಜೆಯಲ್ಲಿ ಪಾಲ್ಗೊಳ್ಳುತ್ತಾರೆ. ಶನಿವಾರ ಬ್ರಹ್ಮರಥೋತ್ಸವವನ್ನು ಆಚರಿಸುತ್ತೇವೆ. ನಮ್ಮ ಗ್ರಾಮಗಳಿಂದ ಬೇರೆ ಊರುಗಳಿಗೆ ಮದುವೆಯಾಗಿ ಹೋಗಿರುವ ಹೆಣ್ಣುಮಕ್ಕಳು ತಮ್ಮ ತವರುಮನೆಗೆ ಬಂದು ಅಮ್ಮನವರ ಜಾತ್ರೆಯಲ್ಲಿ ಪಾಲ್ಗೊಳ್ಳುತ್ತಾರೆ” ಎಂದು ಮೇಲೂರಿನ ಶ್ರೀನಿವಾಸ್ ಪುಲಿ ತಿಳಿಸಿದರು.

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
error: Content is protected !!