
Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಮೇಲೂರು ಗ್ರಾಮದ ಗ್ರಾಮ ದೇವತೆ ಶ್ರೀ ಗಂಗಾದೇವಿ ದೇವಾಲಯದಲ್ಲಿ ಭಕ್ತರು ಕಾಣಿಕೆಯಾಗಿ ಅರ್ಪಿಸಿರುವ ಸುಮಾರು 1,000 ಸೀರೆಗಳ ಹರಾಜು ಸೆ.7ರಂದು ನಡೆಯಲಿದೆ.
In English: About 1,000 sarees offered by devotees at the Sri Gangadevi temple in Melur village will be auctioned on September 7, Tahsildar N. Gaganasindhu announced, as the Muzrai-administered shrine clears six months’ accumulated votive offerings.
ಮುಜರಾಯಿ ಇಲಾಖೆಗೆ ಸೇರಿದ ಪುರಾತನ ದೇವಾಲಯವಾಗಿರುವ ಶ್ರೀ ಗಂಗಾದೇವಿ ದೇವಾಲಯಕ್ಕೆ ನಗರ ಪ್ರದೇಶ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡಿ ದೇವರಿಗೆ ಸೀರೆಗಳನ್ನು ಕಾಣಿಕೆಯಾಗಿ ಅರ್ಪಿಸುತ್ತಿದ್ದಾರೆ.
ಕಳೆದ ಸುಮಾರು ಆರು ತಿಂಗಳಿಂದ ದೇವಾಲಯದಲ್ಲಿ ಶೇಖರಣೆಯಾಗಿರುವ ಸೀರೆಗಳನ್ನು ಹರಾಜು ಮೂಲಕ ವಿಲೇವಾರಿ ಮಾಡಲಾಗುವುದು ಎಂದು ತಹಶೀಲ್ದಾರ್ ಎನ್.ಗಗನಸಿಂಧು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೆ.7ರಂದು ಬೆಳಿಗ್ಗೆ 10 ಗಂಟೆಗೆ ಮೇಲೂರು ಗ್ರಾಮದ ಶ್ರೀ ಗಂಗಮ್ಮ ದೇವಾಲಯದ ಆವರಣದಲ್ಲಿ ಹರಾಜು ಪ್ರಕ್ರಿಯೆ ನಡೆಯಲಿದೆ. ಆಸಕ್ತರು ಹರಾಜಿನಲ್ಲಿ ಭಾಗವಹಿಸಬಹುದು ಎಂದು ಅವರು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ: Rahmanuddin / Wikimedia Commons (CC BY-SA 3.0)