19.1 C
Sidlaghatta
Sunday, July 20, 2025

MGNREGA ಅಡಿ ಸೋಕ್‌ ಪಿಟ್, ಪೌಷ್ಟಿಕ ತೋಟ, ಅಣಬೆ ಬೇಸಾಯ ಶೆಡ್ ನಿರ್ಮಾಣ ಮಾಡಲು ಕ್ರಮ

- Advertisement -
- Advertisement -

MGNREGA (ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆ)ಯಡಿ ಸೆಪ್ಟೆಂಬರ್ ತಿಂಗಳಿನಲ್ಲಿ ಸೋಕ್‌ ಪಿಟ್ (ಬಚ್ಚಲ ಗುಂಡಿ), ಪೌಷ್ಟಿಕ ತೋಟ ಹಾಗೂ ಅಣಬೆ ಬೇಸಾಯ ಸಮುದಾಯ ಶೆಡ್ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ತಾಲ್ಲೂಕು ಪಂಚಾಯಿತಿ ಇಓ ಬಿ.ಶಿವಕುಮಾರ್ ತಿಳಿಸಿದರು.
ತಾಲ್ಲೂಕಿನ 28 ಗ್ರಾಮ ಪಂಚಾಯಿತಿಗಳಲ್ಲಿ ವೈಯಕ್ತಿಕ ಮತ್ತು ಸಮುದಾಯ ಸೋಕ್‌ ಪಿಟ್ ಕಾಮಗಾರಿಗಳನ್ನು ನಡೆಸಲು ಈಗಾಗಲೆ ಸೂಚನೆ ನೀಡಲಾಗಿದೆ. ವೈಯಕ್ತಿಕ ಬಚ್ಚಲ ಗುಂಡಿ ನಿರ್ಮಿಸಿಕೊಳ್ಳುವ ಫಲಾನುಭವಿಗಳಿಗೆ 17 ಸಾವಿರ ಸಹಾಯಧನವನ್ನು ನೀಡಲಾಗುತ್ತದೆ. ಅದೇ ರೀತಿ ಪೌಷ್ಟಿಕ ತೋಟ ನಿರ್ಮಾಣ ಮಾಡಲು ವೈಯಕ್ತಿಕವಾಗಿ 2,397 ರೂ ಮತ್ತು ಸಮುದಾಯದ ತೋಟ ನಿರ್ಮಾಣಕ್ಕೆ 37,391 ರೂ ಸಹಾಯಧನವನ್ನು ನೀಡಲಾಗುತ್ತದೆ. ಗ್ರಾಮ ಪಂಚಾಯಿತಿ ಕೇಂದ್ರಗಳಲ್ಲಿ ಅಣಬೆ ಬೇಸಾಯ ಶೆಡ್ ನಿರ್ಮಿಸಿ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರಿಗೆ ಅಣಬೆ ಬೇಸಾಯ ಕುರಿತು ತರಬೇತಿ ನೀಡಲಾಗುತ್ತಿದೆ ಎಂದು ಅವರು ತಿಳಿಸಿದರು.
ನರೇಗಾ ಸಹಾಯಕ ನಿರ್ದೇಶಕ ಚಂದ್ರಪ್ಪ ಮಾತನಾಡಿ ಜಿಲ್ಲಾ ಪಂಚಾಯಿತಿ ಸಿಇಒ ಸೂಚನೆ ಮತ್ತು ಮಾರ್ಗದರ್ಶನಗಳಲ್ಲಿ ತಾಲ್ಲೂಕಿನಾದ್ಯಂತ ನರೇಗಾ ಯೋಜನೆಯಡಿ ರೈತರಿಗೆ ಹೆಚ್ಚಿನ ಅನುಕೂಲ ಕಲ್ಪಿಸಲು ಸೆಪ್ಟೆಂಬರ್ ಮಾಹೆಯಲ್ಲಿ ಬಚ್ಚಲಗುಂಡಿ ಪೌಷ್ಟಿಕ ತೋಟ ನಿರ್ಮಾಣ ಮತ್ತು ಅಣಬೆ ಬೇಸಾಯ ಶೆಡ್‌ಗಳನ್ನು ನಿರ್ಮಿಸಲು ಅಭಿಯಾನ ನಡೆಸಲಾಗುವುದು. ರೈತರು ಮತ್ತು ನಾಗರಿಕರು ಈ ಸೌಲಭ್ಯವನ್ನು ಸದುಪಯೋಗ ಮಾಡಿಕೊಳ್ಳಬೇಕೆಂದು ಮನವಿ ಮಾಡಿದರು.

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!