ಪೂರ್ಣ ಪುಟ · Open full page
News

ಹಾಲಿನ ದರ ಲೀಟರ್‌ಗೆ 7 ರೂ. ಹೆಚ್ಚಳ ಸ್ವಾಗತಾರ್ಹ: ಹಾಲು ಉತ್ಪಾದಕರಿಗೆ ನೆರವು ಎಂದ ಶಾಸಕ

MLA and Chikkaballapur Milk Union directors distributing pressure cookers to milk cooperative society secretaries at the renovated CHIMUL camp office, Sidlaghatta

Sidlaghatta : ಹಾಲು ಉತ್ಪಾದಕರು ಎದುರಿಸುತ್ತಿರುವ ಆರ್ಥಿಕ ಸಂಕಷ್ಟವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 7 ರೂ. ಹೆಚ್ಚಿಸಿರುವುದು ಸ್ವಾಗತಾರ್ಹ ಬೆಳವಣಿಗೆ ಎಂದು ಶಾಸಕ ಬಿ.ಎನ್. ರವಿಕುಮಾರ್ ತಿಳಿಸಿದರು.

ನಗರದಲ್ಲಿ ಗುರುವಾರ ನವೀಕರಿಸಿದ ಚಿಮುಲ್ ಶಿಬಿರ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಕ್ಷೇತ್ರದ ಹಾಲು ಉತ್ಪಾದಕರು ಹಾಲು ಉತ್ಪಾದನೆಗೆ ತಗಲುತ್ತಿರುವ ವೆಚ್ಚಕ್ಕೂ ಒಕ್ಕೂಟದಿಂದ ಸಿಗುತ್ತಿರುವ ದರಕ್ಕೂ ಸಾಕಷ್ಟು ವ್ಯತ್ಯಾಸವಿದ್ದು, ನಷ್ಟ ಅನುಭವಿಸುತ್ತಿದ್ದಾರೆ. ಇದರಿಂದ ಅನೇಕ ರೈತರು ಜಾನುವಾರುಗಳನ್ನು ಮಾರಾಟ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹಲವು ಮುಖಂಡರು ತಮ್ಮ ಗಮನಕ್ಕೆ ತಂದಿದ್ದರು ಎಂದರು.

ಹಾಲು ಉತ್ಪಾದಕರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಪ್ರತಿ ಲೀಟರ್ ಹಾಲಿಗೆ 10 ರೂ. ಪ್ರೋತ್ಸಾಹಧನ ನೀಡುವಂತೆ ನಿರಂತರವಾಗಿ ವಿಧಾನಸಭೆಯಲ್ಲಿ ಧ್ವನಿ ಎತ್ತಿದ್ದೆ. ಇದರ ಫಲವಾಗಿ ಸರ್ಕಾರ ರಾಜ್ಯದ ಸುಮಾರು 28 ಲಕ್ಷ ಹಾಲು ಉತ್ಪಾದಕ ಕುಟುಂಬಗಳಿಗೆ ಅನುಕೂಲವಾಗುವಂತೆ ಪ್ರತಿ ಲೀಟರ್ ಹಾಲಿಗೆ 2 ರೂ. ಹೆಚ್ಚುವರಿ ಪ್ರೋತ್ಸಾಹಧನ ನೀಡಿದೆ. ಒಟ್ಟಾರೆ ಹಾಲಿನ ದರದಲ್ಲಿ 7 ರೂ. ಹೆಚ್ಚಳವಾಗಿರುವುದು ಉತ್ಪಾದಕರಿಗೆ ನೆರವಾಗಲಿದೆ ಎಂದು ಹೇಳಿದರು.

ಹಾಲು ಉತ್ಪಾದಕರಿಗೆ ಹೆಚ್ಚಿನ ದರ ನೀಡುವ ನಿರ್ಧಾರ ಕೈಗೊಂಡಿರುವ ಸರ್ಕಾರಕ್ಕೆ ಕ್ಷೇತ್ರದ ಜನರ ಹಾಗೂ ಹಾಲು ಉತ್ಪಾದಕರ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇನೆ. ರೈತರು ತಮ್ಮ ಗ್ರಾಮಗಳ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಉತ್ತಮ ಗುಣಮಟ್ಟದ ಹಾಲನ್ನು ಪೂರೈಸುವ ಮೂಲಕ ಒಕ್ಕೂಟದ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಹಾಲು ಉತ್ಪಾದಕ ಸಹಕಾರಿ ಸಂಘಗಳ ಕಾರ್ಯದರ್ಶಿಗಳಿಗೆ ಕುಕ್ಕರುಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಅಧ್ಯಕ್ಷ ಮಂಜುನಾಥ್ ರೆಡ್ಡಿ, ನಿರ್ದೇಶಕರಾದ ಕೆ.ವಿ. ನಾಗರಾಜ್, ಆವಲಪ್ಪ, ಆದಿನಾರಾಯಣ ರೆಡ್ಡಿ, ಕೃಷ್ಣಾರೆಡ್ಡಿ, ದಿನೇಶ್, ಶ್ರೀಮತಿ ಸುಧಾ, ವ್ಯವಸ್ಥಾಪಕ ನಿರ್ದೇಶಕ ನಾಗೇಶ್, ಶಿಡ್ಲಘಟ್ಟ ಕ್ಷೇತ್ರದ ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ನಿರ್ದೇಶಕ ಬಂಕ್ ಮುನಿಯಪ್ಪ, ಜಂಗಮಕೋಟೆ ಕ್ಷೇತ್ರದ ನಿರ್ದೇಶಕ ಎಂ. ರಾಮಯ್ಯ,ತಾಲ್ಲೂಕು ಪಂಚಾಯಿತಿಯ ಮಾಜಿ ಅಧ್ಯಕ್ಷ ಲಕ್ಷ್ಮೀನಾರಾಯಣ ರೆಡ್ಡಿ, ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕ ಅಂಬರೀಶ್, ಜೆಡಿಎಸ್ ಮುಖಂಡ ತಾದೂರು ರಘು, ಮೇಲೂರು ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಉಮೇಶ್, ಶಿಬಿರ ಕಚೇರಿಯ ಉಪ ವ್ಯವಸ್ಥಾಪಕ ರವಿಕಿರಣ್, ವಿಸ್ತರಣಾಧಿಕಾರಿ ಜಯಚಂದ್ರ, ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸಂಬಂಧಿತ ಸುದ್ದಿ: ಪಶು ಆಹಾರ ಘಟಕಕ್ಕೆ ಹಾಲು ಉತ್ಪಾದಕರ ಮುತ್ತಿಗೆ: ತನಿಖೆಯ ಭರವಸೆ ನೀಡಿ ಕ್ಷಮೆ ಕೋರಿದ KMF MD | ಹೈನುಗಾರರೇ ರಾಸು ವಿಮೆ ಮಾಡಿಸಿ, ನಷ್ಟದಿಂದ ಪಾರಾಗಿ: ಚೀಮುಲ್ ನಿರ್ದೇಶಕ ಬಂಕ್ ಮುನಿಯಪ್ಪ

For Daily Updates WhatsApp ‘HI’ to 7406303366

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

Report an error in this story

ಇದನ್ನೂ ಓದಿ

error: Content is protected !!
Exit mobile version