SIR ಲೋಪ ಸರಿಪಡಿಸಿ, ಅರ್ಹ ಮತದಾರರು ಹೊರಗುಳಿಯದಂತೆ ಕ್ರಮ ಕೈಗೊಳ್ಳಿ: ಸಚಿವ ಕೆ.ಎಚ್. ಮುನಿಯಪ್ಪ ಒತ್ತಾಯ

- Advertisement -
- Advertisement -

Sidlaghatta : ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಕಾರ್ಯದಲ್ಲಿನ ಲೋಪಗಳನ್ನು ಸರಿಪಡಿಸಿ, ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಕ್ರಮ ಕೈಗೊಳ್ಳಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಒತ್ತಾಯಿಸಿದರು.

ತಾಲ್ಲೂಕಿನ ಜಂಗಮಕೋಟೆಯಲ್ಲಿ ಭಾನುವಾರ ಶ್ರೀಪ್ರಸನ್ನ ಗಂಗಾಧರೇಶ್ವರಸ್ವಾಮಿ ಗೆಳೆಯರ ಬಳಗ ಆಯೋಜಿಸಿದ್ದ ಸಾಮೂಹಿಕ ಗಣಪತಿ ವಿಸರ್ಜನೆ ಉತ್ಸವದಲ್ಲಿ ಮಾತನಾಡಿದ ಅವರು, ಚುನಾವಣಾ ಆಯೋಗದ ಕಾರ್ಯವೈಖರಿ ಪ್ರಶ್ನಿಸಿ ದೇಶದಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ಈ ಸಂಬಂಧ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಸೇರಿದಂತೆ ಹಲವು ನಾಯಕರನ್ನು ಬಂಧಿಸಿ ಬಿಡುಗಡೆ ಮಾಡಲಾಗಿದೆ ಎಂದರು.

ಚುನಾವಣಾ ಆಯೋಗದ ಬಗ್ಗೆ ಸಚಿವರು ಏನು ಹೇಳಿದರು?

ಮತದಾರರ ಪಟ್ಟಿಯಿಂದ ಉದ್ದೇಶಪೂರ್ವಕವಾಗಿ ಒಂದು ಸಮುದಾಯದವರನ್ನು ಕೈಬಿಡಲಾಗುತ್ತಿದೆ ಹಾಗೂ ಆಯೋಗವು ಪಕ್ಷಪಾತದಿಂದ ಕಾರ್ಯನಿರ್ವಹಿಸುತ್ತಿದೆ ಎಂಬ ಆರೋಪಗಳ ಕುರಿತು ತನಿಖೆಯಾಗಬೇಕು. ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಮತ್ತು ಪ್ರಶ್ನಿಸುವುದು ಪ್ರತಿಯೊಬ್ಬರ ಹಕ್ಕು. ಆಯೋಗದ ಏಕಪಕ್ಷೀಯ ಕಾರ್ಯವೈಖರಿ ವಿರುದ್ಧ ಹೋರಾಟ ಮುಂದುವರಿಯಲಿದೆ ಎಂದು ಹೇಳಿದರು.

ಸ್ಥಳೀಯ ನಾಯಕತ್ವದ ಬಗ್ಗೆ ಏನು ಹೇಳಲಾಯಿತು?

ಕ್ಷೇತ್ರದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್‌ ಗೌಡ ಜನರ ನಡುವೆ ಕೆಲಸ ಮಾಡುತ್ತಿದ್ದು, ಸರ್ಕಾರಿ ಸೌಲಭ್ಯಗಳನ್ನು ಜನರಿಗೆ ತಲುಪಿಸುವುದರ ಜತೆಗೆ ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಅವರ ನಾಯಕತ್ವದಲ್ಲಿ ಎದುರಿಸಬೇಕು. ಪಕ್ಷದಲ್ಲಿನ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿ ಅವರಿಗೆ ಸಹಕಾರ ನೀಡಲಾಗುವುದು ಎಂದರು.

ರಾಜೀವ್‌ ಗೌಡ ಮಾತನಾಡಿ, ಗೆಳೆಯರ ಬಳಗವು ಹಲವು ವರ್ಷಗಳಿಂದ ಸಾಮೂಹಿಕ ಗಣೇಶೋತ್ಸವ ಆಯೋಜಿಸುವ ಮೂಲಕ ಜಾತಿ, ಧರ್ಮಗಳ ನಡುವೆ ಸಾಮರಸ್ಯ ಬೆಳೆಸುತ್ತಿದೆ. ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದರೂ ಜನರ ನಡುವೆ ಇದ್ದು ಕೆಲಸ ಮುಂದುವರಿಸುವುದಾಗಿ ತಿಳಿಸಿದರು.

ಆಕರ್ಷಕ ಮೆರವಣಿಗೆ

ಶ್ರೀಪ್ರಸನ್ನ ಗಂಗಾಧರೇಶ್ವರಸ್ವಾಮಿ ದೇವಾಲಯದ ವೃತ್ತದಿಂದ ಜಂಗಮಕೋಟೆ ಕ್ರಾಸ್‌ ವರೆಗೆ ಆನೆಯ ಮೇಲೆ ಸ್ವಾಮಿಯ ಮೂರ್ತಿಯನ್ನಿರಿಸಿ ಮೆರವಣಿಗೆ ನಡೆಸಲಾಯಿತು. ಗ್ರಾಮದ ಗಣಪತಿ ಮೂರ್ತಿಗಳ ವಿಸರ್ಜನಾ ಮೆರವಣಿಗೆಯಲ್ಲಿ ಡೊಳ್ಳು ಕುಣಿತ, ಗಾರುಡಿಗೊಂಬೆ ಹಾಗೂ ತಮಟೆ ಕಲಾತಂಡಗಳು ಭಾಗವಹಿಸಿದ್ದವು. ಸಚಿವ ಕೆ.ಎಚ್.ಮುನಿಯಪ್ಪ, ಮಾಜಿ ಸಚಿವ ವರ್ತೂರು ಪ್ರಕಾಶ್ ಹಾಗೂ ರಾಜೀವ್‌ ಗೌಡ ಅವರನ್ನು ಬೃಹತ್ ಸೇಬಿನ ಹಾರ ಹಾಕಿ ಸ್ವಾಗತಿಸಲಾಯಿತು.

In English: Social Welfare Minister K.H. Muniyappa said at a mass Ganesha idol immersion festival organised by the Sri Prasanna Gangadhareshwara Swamy Geleyara Balaga at Jangamakote on Sunday that lapses in the Special Intensive Revision (SIR) of the voter list should be corrected so that eligible voters are not left out. He alleged that a community is being deliberately dropped from the rolls and that the Election Commission is acting in a partisan way, and demanded an inquiry; these are the minister’s own allegations. He also backed Congress leader Rajeev Gowda for the coming local body polls. A procession with the deity on an elephant, dollu kunita, garudi gombe and thamate troupes marked the festival.

Sidlaghatta WhatsApp Channel Group

For Daily Updates WhatsApp ‘HI’ to 7406303366

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -
Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Silk

Related news

- Advertisement -