Sidlaghatta : ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಶಾಸಕ ಮೇಲೂರು ಬಿ.ಎನ್.ರವಿಕುಮಾರ್ ಅವರು ಪಕ್ಷದ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದು ಕ್ಷೇತ್ರದ ಅಭಿವೃದ್ದಿ ಕುರಿತು ಚರ್ಚಿಸಿದರು.
ಶಾಸಕರಾಗಿ ಆಯ್ಕೆಯಾದ ನಂತದ ಮೊದಲ ಭಾರಿಗೆ ಬೆಂಗಳೂರಿನ ಪದ್ಮನಾಭನಗರದ ಅವರ ನಿವಾಸಕ್ಕೆ ತೆರಳಿ ದೇವೇಗೌಡರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ಇದೆ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದು ಕ್ಷೇತ್ರದಲ್ಲಿನ ಪ್ರಮುಖ ಸಮಸ್ಯೆಗಳೇನು, ಅವುಗಳ ನಿವಾರಣೆಗಾಗಿ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಹಾಗೂ ಯಾವ ಸಮಸ್ಯೆ ನಿವಾರಣೆಗೆ ಆಧ್ಯತೆ ನೀಡಬೇಕೆಂಬುದರ ಬಗ್ಗೆ ಚರ್ಚಿಸಿ ಸಲಹೆ ಸೂಚನೆಗಳನ್ನು ಪಡೆದರು.
ಕ್ಷೇತ್ರದ ಸರ್ವತೋಮುಖ ಅಭಿವೃದ್ದಿಗೆ ನಿಮ್ಮ ಸಲಹೆ ಸೂಚನೆ ಕಾಲ ಕಾಲಕ್ಕೆ ಇರಲಿ ಎಂದು ರವಿಕುಮಾರ್ ಅವರು ದೇವೇಗೌಡರಲ್ಲಿ ಮನವಿ ಮಾಡಿದರು.