ಶಾಸಕ ಬಿ.ಎನ್. ರವಿಕುಮಾರ್ 58ನೇ ಹುಟ್ಟುಹಬ್ಬ: ಅಂಧಮಕ್ಕಳಿಗೆ ಕೊಡುಗೆ, ಆಸ್ಪತ್ರೆ ಭೇಟಿ

- Advertisement -
- Advertisement -

Sidlaghatta : ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಶಾಸಕ (MLA) ಬಿ.ಎನ್. ರವಿಕುಮಾರ್ ಅವರ 58ನೇ ವರ್ಷದ ಹುಟ್ಟುಹಬ್ಬವನ್ನು ನಗರದಲ್ಲಿ ಸರಳವಾಗಿ ಆಚರಿಸಲಾಯಿತು.

ನಗರದ ಆಶಾಕಿರಣ ಅಂಧಮಕ್ಕಳ ಶಾಲೆಯ ಆವರಣದಲ್ಲಿ ಶಾಸಕರು ವಿಶೇಷ ಮಕ್ಕಳೊಂದಿಗೆ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಹೊದಿಕೆ ಹಾಗೂ ಶೂಗಳನ್ನು ವಿತರಿಸಿ, ಅವರೊಂದಿಗೆ ಸಂತಸ ಹಂಚಿಕೊಂಡರು.

ನಂತರ ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕರು ಒಳರೋಗಿಗಳ ಆರೋಗ್ಯ ವಿಚಾರಿಸಿ, ಹಣ್ಣು-ಹಂಪಲುಗಳನ್ನು ವಿತರಿಸಿದರು.

ಇತ್ತೀಚೆಗೆ ಶಾಸಕ ಬಿ.ಎನ್. ರವಿಕುಮಾರ್ ಅವರು ವಿಕಲಚೇತನ ವಿದ್ಯಾರ್ಥಿನಿಗೆ ಲ್ಯಾಪ್‌ಟಾಪ್ ಹಾಗೂ ಎಲೆಕ್ಟ್ರಿಕ್ ವೀಲ್‌ಚೇರ್ ವಿತರಿಸಿದ್ದರು. ಪ್ರಸ್ತುತ ನಗರದಲ್ಲಿ ಶಾಸಕರ ಹೆಸರಿನ ಬಿಎನ್‌ಆರ್ ಕಪ್ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಸಹ ನಡೆಯುತ್ತಿದೆ.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಶಾಸಕ ಬಿ.ಎನ್. ರವಿಕುಮಾರ್ ಅವರ ಅಭಿಮಾನಿಗಳು ಉಪಸ್ಥಿತರಿದ್ದರು.

In English: Sidlaghatta MLA (Member of Legislative Assembly) BN Ravikumar celebrated his 58th birthday in a simple ceremony, cutting a cake with children at Ashakirana School for the Blind and distributing blankets and shoes to students. He later visited the Government Public Hospital, inquired about patients’ health, and distributed fruits, in the presence of party leaders, workers, and supporters.

Sidlaghatta WhatsApp Channel Group

For Daily Updates WhatsApp ‘HI’ to 7406303366

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -
Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!