ಶಾಸಕ ವೇತನದಿಂದ 9,600 ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್, ಲೇಖನ ಸಾಮಗ್ರಿ ವಿತರಣೆ

- Advertisement -
- Advertisement -

Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಸಾದಲಿ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಉತ್ತೇಜನ ನೀಡುವ ಉದ್ದೇಶದಿಂದ ಶಾಸಕರ ವೇತನದ ಹಣವನ್ನು ಬಳಸಿ ಸರ್ಕಾರಿ ಪ್ರಾಥಮಿಕ, ಹಿರಿಯ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಕಾಲೇಜುಗಳ ಒಟ್ಟು 9,600 ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ಮತ್ತು ಲೇಖನ ಸಾಮಗ್ರಿಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಬಿ.ಎನ್. ರವಿಕುಮಾರ್, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಇಂತಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಉನ್ನತ ಶಿಕ್ಷಣ ಪಡೆಯಲು ಸಾಧ್ಯವಾದ ವಿದ್ಯಾರ್ಥಿಗಳಿಗೆ ಎಲ್ಲ ರೀತಿಯ ನೆರವು ನೀಡಲು ಸದಾ ಸಿದ್ಧನಿದ್ದೇನೆ ಎಂದು ತಿಳಿಸಿದರು.

“ನಾನು ಹೆಚ್ಚು ಓದಿಲ್ಲ. ಆದರೆ ಸರ್ಕಾರಿ ಶಾಲೆಗಳ ಮಕ್ಕಳು ಉತ್ತಮ ಶಿಕ್ಷಣ ಪಡೆದು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು ಎಂಬುದು ನನ್ನ ಆಶಯ” ಎಂದು ಅವರು ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಪಿ. ಸ್ವಾಮಿ ಮಾತನಾಡಿ, ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ವಿಶೇಷ ಕಾಳಜಿ ವಹಿಸಿರುವ ಶಾಸಕರಿಗೆ ಕೃತಜ್ಞತೆ ಸಲ್ಲಿಸಿದರು. ಶಿಕ್ಷಣದ ಗುಣಮಟ್ಟವನ್ನು ಇನ್ನಷ್ಟು ಹೆಚ್ಚಿಸಲು ಶಿಕ್ಷಣ ಇಲಾಖೆ ಎಲ್ಲ ರೀತಿಯ ಪ್ರಯತ್ನಗಳನ್ನು ಕೈಗೊಳ್ಳಲಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕ್ಷೇತ್ರ ಸಮನ್ವಯಾಧಿಕಾರಿ ಪ್ರಸನ್ನ ಕುಮಾರ್, ಸಾದಲಿ ಪಿಯು ಕಾಲೇಜಿನ ಪ್ರಾಂಶುಪಾಲ ಶಿವಮೂರ್ತಿ, ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಶ್ರೀನಿವಾಸ್, ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ನರಸಪ್ಪ ಸೇರಿದಂತೆ ಇಲಾಖೆ ಅಧಿಕಾರಿಗಳು, ಮುಖಂಡರು ಮತ್ತು ಸಾರ್ವಜನಿಕರು ಹಾಜರಿದ್ದರು.

In English: MLA B.N. Ravikumar distributed free notebooks and stationery to 9,600 government primary, high school, and college students at Sadali Government High School in Shidlaghatta taluk, funded entirely from his own MLA salary. He said the initiative aims to ensure financially weaker students are not deprived of education, and pledged continued support for deserving students pursuing higher studies.

Sidlaghatta WhatsApp Channel Group

For Daily Updates WhatsApp ‘HI’ to 7406303366

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!