ಪರಿಷತ್ ಚುನಾವಣೆ ಸ್ಥಳೀಯ ಚುನಾವಣೆಗೆ ದಿಕ್ಸೂಚಿ ಎಂದ ಶಾಸಕ; ಮೀಸಲು ನಿಗದಿ ವೈಜ್ಞಾನಿಕವಲ್ಲ ಎಂದು ಆರೋಪ

- Advertisement -
- Advertisement -

Sidlaghatta : ವಿಧಾನಪರಿಷತ್ತಿನ ಅಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ ರಾಜ್ಯದಲ್ಲಿ ಮುಂಬರುವ ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಸೇರಿದಂತೆ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಶಾಸಕ ಬಿ.ಎನ್. ರವಿಕುಮಾರ್ ಹೇಳಿದರು.

ತಾಲ್ಲೂಕಿನ ಮೇಲೂರು ಗ್ರಾಮದಲ್ಲಿರುವ ತಮ್ಮ ಗೃಹ ಕಚೇರಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್‌–ಬಿಜೆಪಿ ಮೈತ್ರಿಕೂಟದ NDA ಅಭ್ಯರ್ಥಿ ಕೆ.ಎಂ. ಸುರೇಶ್ ಈ ಬಾರಿ ಗೆಲುವು ಸಾಧಿಸಲಿದ್ದಾರೆ. ಕ್ಷೇತ್ರದಲ್ಲಿ ಈ ಹಿಂದೆ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಈ ಬಾರಿಯೂ ಅದೇ ಪರಂಪರೆ ಮುಂದುವರಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಹಿಂದೆ ಆಯ್ಕೆಯಾಗಿದ್ದ ಬಿಜೆಪಿ ಅಭ್ಯರ್ಥಿಗಳು ಕ್ಷೇತ್ರದಲ್ಲಿ ಉತ್ತಮವಾಗಿ ಕೆಲಸ ಮಾಡಿದ್ದು, ಮತದಾರರೊಂದಿಗೆ ನಿಕಟ ಸಂಪರ್ಕ ಹೊಂದಿದ್ದರು. ಅವರ ಕಷ್ಟ–ಸುಖಗಳಿಗೆ ಸ್ಪಂದಿಸಿದ್ದಾರೆ. ಹೀಗಾಗಿ ಮೈತ್ರಿ ಅಭ್ಯರ್ಥಿಯ ಗೆಲುವು ನಿಶ್ಚಿತ. ಪದವೀಧರರು ಹಾಗೂ ಶಿಕ್ಷಕ ಮತದಾರರು ಕೆ.ಎಂ. ಸುರೇಶ್ ಅವರಿಗೆ ಮತ ನೀಡಬೇಕು ಎಂದು ಮನವಿ ಮಾಡಿದರು.

ಮೀಸಲು ನಿಗದಿಯಲ್ಲಿ ವೈಜ್ಞಾನಿಕತೆ ಇಲ್ಲ

ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಿಗೆ ಮೀಸಲು ನಿಗದಿಪಡಿಸಿರುವುದು ವೈಜ್ಞಾನಿಕವಾಗಿಲ್ಲ. ಆಡಳಿತ ಪಕ್ಷದ ಶಾಸಕರು ಹಾಗೂ ಸಚಿವರು ಸೇರಿ ಜೆಡಿಎಸ್‌ ಗೆ ಅನಾನುಕೂಲವಾಗುವಂತೆ ಮತ್ತು ಕಾಂಗ್ರೆಸ್‌ ಗೆ ಅನುಕೂಲವಾಗುವಂತೆ ಮೀಸಲು ನಿಗದಿಪಡಿಸಿದ್ದಾರೆ ಎಂದು ಆರೋಪಿಸಿದರು.

ಆದರೆ, ಈ ಕುರಿತು ಆಕ್ಷೇಪಣೆ ಸಲ್ಲಿಸುವುದಿಲ್ಲ. ಜೆಡಿಎಸ್‌ ಪಕ್ಷ ತಳಮಟ್ಟದಲ್ಲಿ ಸಂಘಟಿತವಾಗಿದ್ದು, ಮುಖಂಡರು ಮತ್ತು ಕಾರ್ಯಕರ್ತರ ಮೇಲೆ ವಿಶ್ವಾಸವಿದೆ. ಯಾವುದೇ ವರ್ಗಕ್ಕೆ ಮೀಸಲಾದರೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಗೆಲ್ಲಿಸಿಕೊಂಡು ಬರುವ ಸಾಮರ್ಥ್ಯ ಪಕ್ಷಕ್ಕಿದೆ ಎಂದು ಹೇಳಿದರು.

2028ರ ವೇಳೆಗೆ ಮನೆಮನೆಗೆ ಕುಡಿಯುವ ನೀರು

ಅಮೃತ್‌–2 ಯೋಜನೆಯ ಕಾಮಗಾರಿಯನ್ನು 2027ರ ನವೆಂಬರ್‌ ವೇಳೆಗೆ ಪೂರ್ಣಗೊಳಿಸಿ, ರಾಮಸಮುದ್ರ ಕರೆಯಿಂದ ಶಿಡ್ಲಘಟ್ಟ ನಗರಕ್ಕೆ ಕುಡಿಯುವ ನೀರು ಪೂರೈಸಲು ಗುತ್ತಿಗೆದಾರರು ಒಪ್ಪಿಕೊಂಡಿದ್ದಾರೆ. ಕಾಮಗಾರಿ ವೇಗವಾಗಿ ನಡೆಯುತ್ತಿದೆ. 2028ರ ವೇಳೆಗೆ ನಗರದ ಎಲ್ಲ ನಿವಾಸಿಗಳಿಗೂ ಪ್ರತಿದಿನ 30 ಲಕ್ಷ ಲೀಟರ್‌ ಶುದ್ಧ ಕುಡಿಯುವ ನೀರು ಪೂರೈಸುವ ಗುರಿ ಹೊಂದಲಾಗಿದೆ. ಇದರಿಂದ ನಗರದ ಜನರ ದಶಕಗಳ ಬೇಡಿಕೆ ಈಡೇರಲಿದೆ ಎಂದು ತಿಳಿಸಿದರು.

ನಗರದಲ್ಲಿ ಒಳಚರಂಡಿ ಮತ್ತು ಜಲ ಜೀವನ್‌ ಯೋಜನೆಗಳ ಕಾಮಗಾರಿಗಳು ಏಕಕಾಲದಲ್ಲಿ ನಡೆಯುತ್ತಿರುವುದರಿಂದ ಸಾರ್ವಜನಿಕರಿಗೆ ತಾತ್ಕಾಲಿಕ ತೊಂದರೆ ಉಂಟಾಗುತ್ತಿದೆ. ನಾಗರಿಕರು ಇದನ್ನು ಅರ್ಥಮಾಡಿಕೊಂಡು ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಬೇಕು ಎಂದು ಕೋರಿದರು.

ಕುಡಿಯುವ ನೀರಿನ ಸಮಸ್ಯೆಗೆ 24 ಗಂಟೆಯಲ್ಲಿ ಪರಿಹಾರ

ಬರಗಾಲದ ನಡುವೆಯೂ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಎಲ್ಲಿಯಾದರೂ ಸಮಸ್ಯೆ ಕಂಡುಬಂದರೆ 24 ಗಂಟೆಯೊಳಗೆ ಬೋರ್‌ವೆಲ್‌ ಕೊರೆಸುವುದು, ಖಾಸಗಿ ಕೊಳವೆಬಾವಿಗಳಿಂದ ನೀರು ಪೂರೈಸುವುದು ಅಥವಾ ಟ್ಯಾಂಕರ್‌ ಮೂಲಕ ನೀರು ಒದಗಿಸುವುದು ಸೇರಿದಂತೆ ಅಗತ್ಯ ಕ್ರಮ ಕೈಗೊಂಡು ಸಮಸ್ಯೆ ಪರಿಹರಿಸಲಾಗುವುದು ಎಂದು ಭರವಸೆ ನೀಡಿದರು.

ಚಿಮುಲ್‌ ನಿರ್ದೇಶಕ ಬಂಕ್‌ ಮುನಿಯಪ್ಪ, ಮುಖಂಡರಾದ ತಾದೂರು ರಘು, ವಿಜಯ್‌ ಕುಮಾರ್‌, ಚಂದ್ರು, ಲಕ್ಷ್ಮೀಪತಿ ಉಪಸ್ಥಿತರಿದ್ದರು.

In English: MLA B.N. Ravikumar told reporters at his home office at Melur on Wednesday that the South-East Graduates’ Constituency Council election will be a pointer for the coming taluk and zilla panchayat and other local body polls, and expressed confidence that JDS–BJP alliance NDA candidate K.M. Suresh will win. He alleged that the reservation for taluk and zilla panchayat constituencies in the Sidlaghatta Assembly constituency was not scientific and was fixed to disadvantage JDS and favour Congress, though he said he would not file objections. He said contractors have agreed to finish the AMRUT-2 work and supply drinking water from Ramasamudra Lake to Sidlaghatta town by November 2027, aiming at 30 lakh litres a day for all residents by 2028, and promised action within 24 hours on any drinking water problem. These are the MLA’s own statements and allegations.

Sidlaghatta WhatsApp Channel Group

For Daily Updates WhatsApp ‘HI’ to 7406303366

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -
Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Silk

Related news

- Advertisement -