Home News ನರೇಗಾ ಯೋಜನೆ ಅಡಿ ಮತ್ತೊಮ್ಮೆ ಅಂತರ್ಜಲ ವೃದ್ಧಿ ಮಾಡುವ ಕಾಮಗಾರಿಗಳು ಪ್ರಾರಂಭ

ನರೇಗಾ ಯೋಜನೆ ಅಡಿ ಮತ್ತೊಮ್ಮೆ ಅಂತರ್ಜಲ ವೃದ್ಧಿ ಮಾಡುವ ಕಾಮಗಾರಿಗಳು ಪ್ರಾರಂಭ

0
Sidlaghatta MNREGA Scheme Underground Water

Sidlaghatta : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (MNREGA) ಅಡಿ ಮತ್ತೊಮ್ಮೆ ಅಂತರ್ಜಲ ವೃದ್ಧಿಸುವ ಕಾಮಗಾರಿಗಳು ಆರಂಭವಾಗಿದೆ.

ತಾಲ್ಲೂಕಿನ ಪಲಿಚೇರ್ಲು ಗ್ರಾಮ ಪಂಚಾಯತಿಯ ದೊಗರನಾಯಕನಹಳ್ಳಿ ಗ್ರಾಮದಲ್ಲಿ ಮಳೆ ನೀರು ಸಂರಕ್ಷಣೆ ಮಾಡುವ ಸಲುವಾಗಿ ಕಲ್ಯಾಣ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಈಗಾಗಲೇ ಶಿಡ್ಲಘಟ್ಟ ತಾಲ್ಲೂಕಿನಲ್ಲಿ ನರೇಗಾ ಯೋಜನೆ ಅಡಿ ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ಮಾಡುವ ಮೂಲಕ ಆಗ್ರ ಸ್ಥಾನದಲ್ಲಿದ್ದು ಇದೀಗ ಪುನಃ ಈ ಕಾಮಗಾರಿಗಳಿಗೆ ವೇಗ ದೊರೆಯಲಿದೆ.

ಶಿಡ್ಲಘಟ್ಟ ತಾಲ್ಲೂಕಿನಲ್ಲಿ ನರೇಗಾ ಯೋಜನೆ ಮೂಲಕ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಆದ್ಯತೆ ನೀಡಲಾಗಿದೆ. ಈಗಾಗಲೇ ಅನೇಕ ಗ್ರಾಮಗಳಲ್ಲಿ ಮಾದರಿ ಶಾಲೆ ಮತ್ತು ಅಂಗನವಾಡಿ ಕೇಂದ್ರಗಳನ್ನು ನಿರ್ಮಿಸಲಾಗಿದೆ. ಅದೇ ರೀತಿ ಮಳೆಯ ನೀರು ಸಂರಕ್ಷಣೆ ಮಾಡುವ ಸಲುವಾಗಿ ಅಂತರ್ಜಲ ಮಟ್ಟವನ್ನು ವೃದ್ಧಿಗೊಳಿಸಲು ಬಹು ಕಮಾನ್ ಚೆಕ್ ಡ್ಯಾಮ್ ಗಳು ಮತ್ತು ಕಲ್ಯಾಣಿಗಳನ್ನು ನಿರ್ಮಿಸುವ ಕಾರ್ಯ ಮಾಡಲಾಗಿದೆ. ಈಗಾಗಲೇ ಹಲವು ಪೂರ್ಣಗೊಂಡಿದ್ದು ಅಭಿವೃದ್ಧಿ ಕಾರ್ಯಗಳಿಗೆ ಮತ್ತಷ್ಟು ವೇಗ ನೀಡಲಾಗುವುದೆಂದು ತಾಲ್ಲೂಕು ಪಂಚಾಯತಿ ಕಾರ್ಯ ನಿರ್ವಹಣಾಧಿಕಾರಿ ಜಿ ಮುನಿರಾಜು ತಿಳಿಸಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version