ನೈತಿಕ ಮೌಲ್ಯ, ಜವಾಬ್ದಾರಿಯುತ ಜೀವನಶೈಲಿ: ವಿದ್ಯಾರ್ಥಿಗಳು, ಪೋಷಕರಿಗೆ ವಕೀಲರ ಮಾರ್ಗದರ್ಶನ

Students in grey blazers and parents attending the moral values and responsible lifestyle workshop at Dolphin Educational Institutions in Sidlaghatta

Sidlaghatta : ವಿದ್ಯಾರ್ಥಿಗಳಲ್ಲಿ ನೈತಿಕ ಮೌಲ್ಯಗಳು, ಮಾನಸಿಕ ಸ್ಥೈರ್ಯ ಹಾಗೂ ಜವಾಬ್ದಾರಿಯುತ ಜೀವನಶೈಲಿಯ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಶನಿವಾರ ಡಾಲ್ಫಿನ್ ಶಿಕ್ಷಣ ಸಂಸ್ಥೆಯ (Dolphin Educational Institutions) ಸಭಾಂಗಣದಲ್ಲಿ ವಿಶೇಷ ಕಾರ್ಯಾಗಾರ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸುಮಾರು 50 ಪೋಷಕರು, 160 ವಿದ್ಯಾರ್ಥಿಗಳು ಹಾಗೂ ಶಾಲಾ ಸಿಬ್ಬಂದಿ ಪಾಲ್ಗೊಂಡಿದ್ದರು.

ಸಂಪನ್ಮೂಲ ವ್ಯಕ್ತಿ ಹೇಳಿದ್ದೇನು?

ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ವಕೀಲ ಸುರೇಶ್ ಗೌಡ ಆರ್. ಅವರು ನೈಜ ಜೀವನದ ಹಲವು ಉದಾಹರಣೆಗಳ ಮೂಲಕ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಮಾರ್ಗದರ್ಶನ ನೀಡಿದರು. ಭಾವನಾತ್ಮಕವಾಗಿ ವಿಷಯ ಮಂಡಿಸಿದ ಅವರು, ವಿದ್ಯಾರ್ಥಿಗಳು ಜೀವನದಲ್ಲಿ ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದರ ಜೊತೆಗೆ ಜವಾಬ್ದಾರಿಯುತ ಜೀವನಶೈಲಿ ರೂಪಿಸಿಕೊಳ್ಳುವ ಅಗತ್ಯವನ್ನು ವಿವರಿಸಿದರು. ವಿದ್ಯಾರ್ಥಿಗಳ ವಿವಿಧ ಪ್ರಶ್ನೆಗಳಿಗೆ ಸಂವಾದದ ಮೂಲಕ ಉತ್ತರಿಸಿ, ಸೂಕ್ತ ಸಲಹೆಗಳನ್ನು ನೀಡಿದರು.

ಇಂತಹ ಕಾರ್ಯಾಗಾರ ಏಕೆ ಅಗತ್ಯ?

ಪ್ರಾಂಶುಪಾಲ ಎಲ್. ಮುನಿಕೃಷ್ಣಪ್ಪ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಮಾನಸಿಕ ಸ್ಥೈರ್ಯ ಬೆಳೆಸಲು, ಪರೀಕ್ಷೆಗಳನ್ನು ಆತ್ಮವಿಶ್ವಾಸದಿಂದ ಎದುರಿಸಲು ಹಾಗೂ ಅಗತ್ಯ ಜೀವನ ಕೌಶಲಗಳನ್ನು ರೂಪಿಸಿಕೊಳ್ಳಲು ಇಂತಹ ಕಾರ್ಯಾಗಾರಗಳು ಸಹಕಾರಿಯಾಗಲಿವೆ. ವಿದ್ಯಾರ್ಥಿಗಳ ಹಲವು ಪ್ರಶ್ನೆಗಳಿಗೆ ಈ ಕಾರ್ಯಾಗಾರ ಉತ್ತರ ನೀಡುವ ವೇದಿಕೆಯಾಗಿದೆ ಎಂದು ತಿಳಿಸಿದರು.

ಶಿಕ್ಷಣ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಅಶೋಕ್ ಮಾತನಾಡಿ, ಮಕ್ಕಳ ಹಾಗೂ ಪೋಷಕರಲ್ಲಿ ಸರ್ವತೋಮುಖ ಶಿಕ್ಷಣದ ಕುರಿತು ಅರಿವು ಮೂಡಿಸಲು ಈ ಕಾರ್ಯಾಗಾರ ಸಹಕಾರಿಯಾಗಿದೆ. ವಿದ್ಯಾರ್ಥಿಗಳು ಆತ್ಮಸ್ಥೈರ್ಯ ಕಳೆದುಕೊಳ್ಳದೆ ಅರ್ಥಪೂರ್ಣವಾಗಿ ಜೀವನ ರೂಪಿಸಿಕೊಳ್ಳಬೇಕು ಎಂದು ಹೇಳಿದರು.

ಪ್ರಾಂಶುಪಾಲ ಮುನಿಕೃಷ್ಣಪ್ಪ ಎಲ್., ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಶ್ರೀನಿವಾಸ ಮೂರ್ತಿ ಹಾಗೂ ಪ್ರಾಂಶುಪಾಲ ಆರಿಫ್ ಅಹಮದ್ ಉಪಸ್ಥಿತರಿದ್ದರು.

ಸಂಬಂಧಿತ ಸುದ್ದಿ: ಇದೇ ಸಂಸ್ಥೆಯಲ್ಲಿ ನಡೆದ ಮಕ್ಕಳ ದಿನಾಚರಣೆ ಮತ್ತು ಕನ್ನಡ ರಾಜ್ಯೋತ್ಸವ ಹಾಗೂ ವಾಲ್ಮೀಕಿ ಜಯಂತಿ ಕಾರ್ಯಕ್ರಮ ವರದಿಗಳನ್ನೂ ಓದಿ.

Sidlaghatta WhatsApp Channel Group

For Daily Updates WhatsApp ‘HI’ to 7406303366

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

Report an error in this story

Nearby

ಇದನ್ನೂ ಓದಿ